ತಮಿಳುನಾಡು | ಬುರ್ಖಾ ಧರಿಸಿದ್ದ ಮಹಿಳೆಗೆ ಬಸ್ ಪ್ರವೇಶ ನಿರಾಕರಣೆ; ನಿರ್ವಾಹಕರ ಪರವಾನಗಿ ರದ್ದು

Date:

Advertisements

ಬುರ್ಖಾ ಧರಿಸಿದ್ದ ಮಹಿಳೆಗೆ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿರುವ ಕೋಮುದ್ವೇಷ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ಸಂಬಂಧ ಖಾಸಗಿ ಬಸ್‌ ಸಂಸ್ಥೆ ಮತ್ತು ಇಬ್ಬರು ನಿರ್ವಾಹಕರ ಪರವಾನಗಿಯನ್ನು ರದ್ದುಗೊಳಿಸಲಾಗಿದೆ.

ಘಟನೆಯು ತಮಿಳುನಾಡಿನ ತಿರುಚಂಡೂರ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಾಯಲಗ ಪಟ್ಟಿಣಂನಿಂದ ತೂತ್ತುಕೂಡಿಗೆ ಪ್ರಯಾಣಿಸಲು ಟಿಕೆಟ್‌ ಬುಕ್ ಮಾಡಿದ್ದ ಮಹಿಳೆ, ಮಹಿಳೆ ಹತ್ತಲು ಬಸ್‌ ನಿಲ್ದಾಣಕ್ಕೆ ಬಂದಿದ್ದಾರೆ. ಆ ವೇಳೆ, ಆಕೆಗೆ ಬಸ್‌ನಲ್ಲಿ ನಿರ್ವಾಹಕರು ಪ್ರವೇಶ ನಿರಾಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಬಸ್‌ನ ಮಾಲೀಕ ಸಂಸ್ಥೆ ‘ವಿವಿಎಸ್ ಟೂರ್ಸ್ ಆ್ಯಂಡ್ ಟ್ರಾವೆಲ್ಸ್’ ಮತ್ತು ಬಸ್‌ನಲ್ಲಿದ್ದ ಇಬ್ಬರ ನಿರ್ವಾಹಕರ ಪರವಾನಗಿಯನ್ನು ತಮಿಳುನಾಡು ರಾಜ್ಯ ಸಾರಿಗೆ ನಿಗಮ ರದ್ದುಗೊಳಿಸಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ; ‘ಬಸ್ ಹತ್ತಲು ಯಾಕೆ ಆಕೆಗೆ ಅವಕಾಶ ನೀಡುತ್ತಿಲ್ಲ’ ಎಂದು ಓರ್ವ ವ್ಯಕ್ತಿ ನಿರ್ವಾಹಕನನ್ನು ಪ್ರಶ್ನಿಸಿದ್ದಾರೆ. ಪ್ರಶ್ನೆಗೆ ಉತ್ತರಿಸಿದ ನಿರ್ವಾಹಕ, ‘ನಿಮಗೆ ಬಸ್ ಹತ್ತಲು ಅವಕಾಶ ಕೊಡಬಾರದೆಂದು ಬಸ್ ಮಾಲೀಕರು ನಿರ್ದೇಶಿಸಿದ್ದಾರೆ’ ಎಂದು ಮಾತನಾಡಿರುವುದು ಮತ್ತು ಬಸ್‌ ಮಾಲೀಕನ ಮೊಬೈಲ್ ಸಂಖ್ಯೆಯನ್ನು ಪ್ರಶ್ನಿಸಿದ ವ್ಯಕ್ತಿಗೆ ನೀಡಿರುವುದು ಕಂಡುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು...

Bihar SIR | ಬಿಜೆಪಿ-ಚುನಾವಣಾ ಆಯೋಗದ ಕುತಂತ್ರಕ್ಕೆ 47 ಲಕ್ಷ ಮತದಾರರು ಬಲಿ

ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ...

ಎಲ್ಲರ ತಾಯಿ ಸಾಯುತ್ತಾರೆ; ರಜೆ ಕೇಳಿದ್ದಕ್ಕೆ ಮೇಲಧಿಕಾರಿಯ ಉಡಾಫೆಯ ಉತ್ತರ

ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ರಜೆ ಕೇಳಿದ ಬ್ಯಾಂಕ್ ಉದ್ಯೋಗಿಗೆ, “ಎಲ್ಲರ ತಾಯಿ...

ವಿವಾದಾತ್ಮಕ ಎಸ್‌ಐಆರ್ ನಂತರ ಬಿಹಾರದ ಅಂತಿಮ ಮತದಾರರ ಪಟ್ಟಿ ಪ್ರಕಟ

ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಮಂಗಳವಾರ ಅಂತಿಮ ಮತದಾರರ...

Download Eedina App Android / iOS

X