ಇಂಟರ್‌ವ್ಯೂವ್‌ಗಾಗಿ ಹೋಗಿದ್ದ ಯುವತಿ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಕಾಡಿನಲ್ಲಿ ಪತ್ತೆ

Date:

ಇಂಟರ್‌ವ್ಯೂವ್‌ಗಾಗಿ ಮನೆಯಿಂದ ತೆರಳಿದ್ದ ಯುವತಿ ಎರಡು ದಿನಗಳಾದರೂ ಮರಳಿ ಬಂದಿರಲಿಲ್ಲ. ಆಕೆ ನಾಪತ್ತೆಯಾಗಿದ್ದರು. ಇದೀಗ, ಆಕೆ ಮೃತದೇಹ ಭಾಗಶಃ ಸುಟ್ಟುಹೋದ ಸ್ಥಿತಿಯಲ್ಲಿ ಕಾಡಿನಲ್ಲಿ ಪತ್ತೆಯಾಗಿದೆ. ಆಕೆಯನ್ನು ಕೊಲೆಗೈದು ಸುಟ್ಟು ಹಾಕಲಾಗಿದೆ ಎಂದು ಪೊಲೀಸರು ಶಂಕಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -

ಘಟನೆಯು ತಮಿಳುನಾಡಿನ ತಿರುಚ್ಚಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶ್ರೀನಿವಾಸಪುರಂ ನಿವಾಸಿಯಾಗಿರುವ ಯುವತಿ, ಗುರುವಾರ ಕೆಲಸದ ಇಂಟರ್‌ವ್ಯೂವ್‌ಗಾಗಿ ತೆರಳಿದ್ದರು. ಬಳಿಕ, ಆಕೆ ನಾಪತ್ತೆಯಾಗಿದ್ದರು. ಆಕೆಯ ಪೋಷಕರು ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರಕರಣ ದಾಖಲಿಸಿಕೊಂಡು ಹುಡುಕಾಟ ನಡೆಸಿದಾಗ, ಆಕೆಯ ಮೃತದೇಹವು ಸಣಮಂಗಲಂ ಅರಣ್ಯ ಪ್ರದೇಶದಲ್ಲಿ ದೊರೆತಿದೆ. ಸುಟ್ಟು ಕರಕಲಾದ ಸ್ಥಿತಿಯಲ್ಲಿದ್ದ ಮೃತದೇಹವು ತಮ್ಮ ಮಗಳದ್ದೇ ಎಂದು ಪೋಷಕರು ಗುರುತಿಸಿದ್ದಾರೆ. ಶವವನ್ನು ತಿರುಚ್ಚಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಮೂರ್ತಿ ಮಹಾಶಯರೇ, ದುರ್ಬಲ ಜಾತಿಗಳಿಗೆ ಮೀಸಲಾತಿಯಲ್ಲಿ ಮಾತ್ರ ಮೆರಿಟ್ ನೆನಪಾಗುವುದೇ?

ಮಹಿಳೆಯನ್ನು ಕೊಲೆ ಮಾಡಿ, ಸುಟ್ಟು ಹಾಕಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆಕೆಯ ಕೊಲೆಗೆ ಕಾರಣಗಳನ್ನು ಎಲ್ಲ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯನ್ನು ಖಂಡಿಸಿ ಆಡಳಿತಾರೂಢ ಡಿಎಂಕೆ ಸರ್ಕಾರದ ವಿರುದ್ಧ ಬಿಜೆಪಿ ಆಗ್ದಾಳಿ ನಡೆಸಿದೆ. “ಡಿಎಂಕೆ ಆಡಳಿತದಲ್ಲಿ ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿನೋಜ್ ಪಿ ಸೆಲ್ವಂ ಟೀಕಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...