‘ಹರ್ದೀಪ್ ಪುರಿ ಪುತ್ರಿ ಎಂಬ ಕಾರಣಕ್ಕೆ ಗುರಿ’: ಎಪ್‌ಸ್ಟೀನ್ ವದಂತಿಗಳ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸಚಿವರ ಪುತ್ರಿ

Date:

ಕುಖ್ಯಾತ ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಜೊತೆ ತಮ್ಮನ್ನು ತಳುಕುಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾನಹಾನಿಕಾರಕ ಪೋಸ್ಟ್‌ಗಳ ವಿರುದ್ಧ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪುತ್ರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ವ್ಯಕ್ತಿಗಳು ಹಾಗೂ ಆನ್‌ಲೈನ್ ವೇದಿಕೆಗಳ ವಿರುದ್ಧ ತಡೆಯಾಜ್ಞೆ ಮತ್ತು ಪರಿಹಾರ ಕೋರಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

- Advertisement -

​ತಮ್ಮ ವಿರುದ್ಧ ಸುಳ್ಳು ಮತ್ತು ಮಾನಹಾನಿಕಾರಕ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳು ಹಾಗೂ ಡಿಜಿಟಲ್ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಎಪ್‌ಸ್ಟೀನ್‌ ಜೊತೆ ತಮಗೆ ಸಂಬಂಧವಿದೆ ಎಂಬಂತೆ ಸುಳ್ಳು ನಿರೂಪಣೆ ಸೃಷ್ಟಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ರೀತಿಯ ಆಧಾರರಹಿತ ಕಂಟೆಂಟ್‌ಗಳಿಂದಾಗಿ ಸಮಾಜದಲ್ಲಿ ಯಮ್ಮ ಘನತೆ ಮತ್ತು ವೈಯಕ್ತಿಕ ವರ್ಚಸ್ಸಿಗೆ ತೀವ್ರ ಧಕ್ಕೆಯಾಗಿದೆ ಎಂದು ಅವರು ಅರ್ಜಿಯಲ್ಲಿ ಅಳಲು ತೋಡಿಕೊಂಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ತಾವು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪುತ್ರಿಯಾಗಿರುವ ಕಾರಣಕ್ಕಾಗಿಯೇ, ಉದ್ದೇಶಪೂರ್ವಕವಾಗಿ ತಮ್ಮನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗುತ್ತಿದೆ. ಹರ್ದೀಪ್ ಸಿಂಗ್‌ ಪುರಿ ಈ ಹಿಂದೆ ಭಾರತೀಯ ವಿದೇಶಾಂಗ ಸೇವೆಯಲ್ಲಿ ಉನ್ನತ ಅಧಿಕಾರಿಯಾಗಿ ಕಾರ್ಯನಿರ್ವಹಿದ್ದರು ಎಂಬುದನ್ನು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಭವಿಷ್ಯದಲ್ಲಿ ಈ ವ್ಯಕ್ತಿಗಳು ಮತ್ತು ವೇದಿಕೆಗಳು ಇಂತಹ ಯಾವುದೇ ಮಾನಹಾನಿಕಾರಕ ವಿಷಯಗಳನ್ನು ಪ್ರಕಟಿಸದಂತೆ ಅಥವಾ ಹಂಚಿಕೊಳ್ಳದಂತೆ ನಿರ್ಬಂಧ ವಿಧಿಸಬೇಕು. ಅಲ್ಲದೆ ಪ್ರಸ್ತುತ ಆನ್‌ಲೈನ್‌ ವೇದಿಕೆಗಳಲ್ಲಿರುವ ಎಲ್ಲ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ತಕ್ಷಣವೇ ತೆಗೆದುಹಾಕಬೇಕು ಮತ್ತು ಈ ಮಾನನಷ್ಟದಿಂದ ತಮಗಾಗಿರುವ ಹಾನಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...