ಐಟಿಯಿಂದ 3,500 ಕೋಟಿ ರೂ. ತೆರಿಗೆ ನೋಟಿಸ್; ಕಾಂಗ್ರೆಸ್‌ ವಿರುದ್ಧ ಸದ್ಯಕ್ಕಿಲ್ಲ ಕ್ರಮ

Date:

Advertisements

ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಬಿಗ್ ರಿಲೀಫ್ ದೊರೆತಿದೆ. 3,500 ಕೋಟಿ ರೂಪಾಯಿಗೂ ಅಧಿಕ ತೆರಿಗೆ ಬಾಕಿ ವಿಚಾರದಲ್ಲಿ ವಿರೋಧ ಪಕ್ಷಗಳ ಮೇಲೆ ಸದ್ಯಕ್ಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 24 ರಂದು ನಡೆಸಲಾಗುವುದು ಎಂದು ನ್ಯಾಯಾಲಯಕ್ಕೆ ಆದಾಯ ತೆರಿಗೆ ಇಲಾಖೆ ಹೇಳಿದೆ.

ಕಾಂಗ್ರೆಸ್‌ ಪಕ್ಷಕ್ಕೆ ವಿವಿಧ ಹಣಕಾಸು ವರ್ಷಗಳ ತೆರಿಗೆ ಬಾಕಿ ಪಾವತಿಗಳ ನೋಟಿಸ್‌ಅನ್ನು ಆದಾಯ ತೆರಿಗೆ ಇಲಾಖೆ ಕಳುಹಿಸಿದ್ದು, ಸುಮಾರು 3,567 ಕೋಟಿ ಮೊತ್ತದ ತೆರಿಗೆ ಬಾಕಿ ಪಾವತಿಸುವಂತೆ ತಿಳಿಸಿದೆ. ಇದಾದ ಬಳಿಕ ಕಾಂಗ್ರೆಸ್‌ ಹೈಕೋರ್ಟ್‌ ಮೆಟ್ಟಿಲೇರಿತ್ತು. ಆಡಳಿತಾರೂಢ ಬಿಜೆಪಿಯು ವಿರೋಧ ಪಕ್ಷಗಳ ಮೇಲೆ “ತೆರಿಗೆ ಭಯೋತ್ಪಾದನೆ” ಮಾಡುತ್ತಿದೆ ಎಂದು ಆರೋಪಿಸಿತ್ತು.

Advertisements

ಆದಾಯ ತೆರಿಗೆ ಇಲಾಖೆಯು ಈ ಸಂದರ್ಭದಲ್ಲಿ ನೋಟಿಸ್ ನೀಡಿರುವುದು ಚುನಾವಣೆಗೂ ಮುನ್ನ ವಿಪಕ್ಷಗಳನ್ನು ಆರ್ಥಿಕವಾಗಿ ಕುಗ್ಗಿಸುವ ಪ್ರಯತ್ನವಾಗಿದೆ ಎಂದು ಹೇಳಿರುವ ಕಾಂಗ್ರೆಸ್, ಇದು ಚುನಾವಣೆಯಲ್ಲಿ ಸರಿಸಮಾನವಾದ ಸ್ಪರ್ಧೆಗೆ ಅವಕಾಶ ನೀಡುವುದಿಲ್ಲ ಎಂದಿತ್ತು. ಜೊತೆಗೆ ಈ ವಿಚಾರದಲ್ಲಿ ಚುನಾವಣಾ ಆಯೋಗ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿತ್ತು.

ಇದನ್ನು ಓದಿದ್ದೀರಾ?  ಕಾಂಗ್ರೆಸ್‌ಗೆ ಮತ್ತೆ ಐಟಿ ನೋಟಿಸ್; ಒಟ್ಟು 3,567 ಕೋಟಿ ರೂ. ತೆರಿಗೆ ಪಾವತಿ ಬೇಡಿಕೆ!

ಇನ್ನು ಈ ಹಿಂದೆ ಆದಾಯ ತೆರಿಗೆ ಇಲಾಖೆಯು ಬಾಕಿ ಇರುವ 135 ಕೋಟಿ ರೂಪಾಯಿ ಮೊತ್ತವನ್ನು ಪಕ್ಷದ ಖಾತೆಯಿಂದ ಹಿಂಪಡೆದಿದೆ. ಈಗ ಮತ್ತೆ ಒಟ್ಟಾಗಿ 3,500 ಕೋಟಿ ರೂಪಾಯಿ ತೆರಿಗೆ ಪಾವತಿಸಲು ನೋಟಿಸ್ ನೀಡಲಾಗಿದೆ. ಈ ನೋಟಿಸ್ ವಿರುದ್ಧ ಕಾಂಗ್ರೆಸ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ನೇತೃತ್ವದ ಪೀಠ ಇಂದು ವಿಚಾರಣೆ ನಡೆಸಿದೆ.

ಈ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು “ಚುನಾವಣಾ ಸಮಯದಲ್ಲಿ ವಿರೋಧ ಪಕ್ಷದ ವಿರುದ್ಧ ಕೇಂದ್ರೀಯ ಸಂಸ್ಥೆ ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳುವುದಿಲ್ಲ” ಎಂದು ಹೇಳಿದರು.

“2024 ರಲ್ಲಿ ವಿಪಕ್ಷಕ್ಕೆ ಶೇಕಡ 20 ರಷ್ಟು ಬಾಕಿ ಮೊತ್ತ ಪಾವತಿಸಲು ಆಯ್ಕೆಯನ್ನು ನೀಡಲಾಯಿತು. ಅದರಂತೆ 135 ಕೋಟಿ ರೂಪಾಯಿ ಖಾತೆಯಿಂದ ಹಿಂಪಡೆಯಲಾಯಿತು. ಅದಾದ ಬಳಿಕ 1,700 ಕೋಟಿ ರೂಪಾಯಿ ತೆರಿಗೆ ಬೇಡಿಕೆ ಮುಂದಿಡಲಾಗಿದೆ. ಈ ವಿಚಾರದಲ್ಲಿ ಚುನಾವಣೆಯ ನಂತರ ಕ್ರಮಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ?  ಲೆಕ್ಕಪತ್ರವಿಲ್ಲದ 524 ಕೋಟಿ ರೂ. ವಹಿವಾಟು ಆರೋಪ; ಕಾಂಗ್ರೆಸ್‌ಗೆ ಮತ್ತೆ ಆದಾಯ ತೆರಿಗೆ ನೋಟಿಸ್!

“ಕೇಂದ್ರವು ತೆರಿಗೆ ಬೇಡಿಕೆಯನ್ನು ಹಿಂಪಡೆಯುತ್ತದೆಯೇ” ಎಂದು ಈ ಸಂದರ್ಭದಲ್ಲಿ ನ್ಯಾಯಾಲಯವು ಪ್ರಶ್ನಿಸಿದ್ದು, “ಇಲ್ಲ, ನಾವು ಚುನಾವಣೆಯವರೆಗೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ” ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಕೇಂದ್ರವು 135 ಕೋಟಿ ರೂಪಾಯಿ ಸಂಗ್ರಹಿಸಿದೆ. ನಮ್ಮದು ಲಾಭ ಗಳಿಸುವ ಸಂಘಟನೆಯಲ್ಲ, ಕೇವಲ ರಾಜಕೀಯ ಪಕ್ಷ” ಎಂದು ಹೇಳಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಪತ್ರೆ ನಿರ್ಮಾಣ ಹಗರಣ: ಎಎಪಿಯ ಸೌರಭ್ ಭಾರದ್ವಾಜ್ ನಿವಾಸದ ಮೇಲೆ ಇಡಿ ದಾಳಿ

ದೆಹಲಿ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂಬ...

VP-Polls | ಸುದರ್ಶನ್‌ ರೆಡ್ಡಿ ವಿರುದ್ಧದ ಅಮಿತ್‌ ಶಾ ಹೇಳಿಕೆ ಖಂಡಿಸಿದ ನಿವೃತ್ತ ನ್ಯಾಯಮೂರ್ತಿಗಳು

ಸಾಲ್ವಾ ಜುಡುಮ್‌ ತೀರ್ಪಿನ ಕುರಿತು ವಿರೋಧ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಬಿ....

ಪ್ರಧಾನಿಯ ಪದವಿ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು

ದೆಹಲಿ ವಿಶ್ವವಿದ್ಯಾಲಯವು ಪ್ರಧಾನಿ ನರೇಂದ್ರ ಮೋದಿಯ ಪದವಿ ವಿವರಗಳನ್ನು ಬಹಿರಂಗಪಡಿಸುವ ಅಗತ್ಯವಿಲ್ಲ...

ಬಿಹಾರ ಸಿಎಂ ಅಭ್ಯರ್ಥಿ | ಮಹಾಘಟಬಂಧನ ನಿರ್ಧರಿಸಲಿದೆ; ಆರ್‌ಜೆಡಿಗೂ ಹಕ್ಕಿದೆ: ಎಸ್‌ಪಿ ನಾಯಕ

ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ವಿರೋಧ ಪಕ್ಷಗಳ...

Download Eedina App Android / iOS

X