ತೆರಿಗೆ ಹಂಚಿಕೆಯ ಹಣ: ರಾಜ್ಯಗಳ ಪಾಲು ಕಡಿತಕ್ಕೆ ಕೇಂದ್ರ ಸಿದ್ಧತೆ!

Date:

ಕೇಂದ್ರವು ಸಂಗ್ರಹಿಸುವ ತೆರಿಗೆಯಲ್ಲಿ ರಾಜ್ಯಗಳಿಗೆ ನೀಡುವ ಪಾಲನ್ನು ಈಗಿರುವ ಶೇ 41ರಿಂದ ಶೇ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ ಹಣಕಾಸು ಆಯೋಗಕ್ಕೆ ಕೋರಿಕೆ ಸಲ್ಲಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ತೆರಿಗೆ ಪಾಲು ಕಡಿತಗೊಳಿಸುವ ನಿರ್ಧಾರವು ಕಾರ್ಯರೂಪಕ್ಕೆ ಬಂದರೆ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ನಡುವೆ ಜಟಾಪಟಿಗೆ ಕಾರಣವಾಗುವ ಸಾಧ್ಯತೆಯಿದೆ.

- Advertisement -

ಅರ್ಥಶಾಸ್ತ್ರಜ್ಞ ಅರವಿಂದ ಪನಗರಿಯಾ ನೇತೃತ್ವದ ಹಣಕಾಸು ಆಯೋಗವು ತನ್ನ ಶಿಫಾರಸುಗಳನ್ನು ಇದೇ ಅಕ್ಟೋಬರ್ 31ರೊಳಗೆ ಸರ್ಕಾರಕ್ಕೆ ಸಲ್ಲಿಸಲಿದ್ದು, 2026-27ರ ಆರ್ಥಿಕ ವರ್ಷದಿಂದ ಜಾರಿಗೆ ಬರಲಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟವು ಮಾರ್ಚ್‌ ಅಂತ್ಯದ ವೇಳೆಗೆ ಕೋರಿಕೆಗಳಿಗೆ ಒಪ್ಪಿಗೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರಾಜ್ಯ ಸರ್ಕಾರಗಳಿಗೆ ಹಂಚಿಕೆ ಮಾಡುವ ತೆರಿಗೆಯ ಪಾಲು 1980ರಲ್ಲಿ ಶೇ 20ರಷ್ಟು ಇದ್ದದ್ದು, ಈಗ ಶೇ 41ಕ್ಕೆ ಹೆಚ್ಚಾಗಿದೆ.

ಕಡಿತದಿಂದ 35 ಸಾವಿರ ಕೋಟಿ ರೂ. ಉಳಿಕೆ

ರಾಜ್ಯಗಳಿಗೆ ನೀಡುವ ತೆರಿಗೆ ಪಾಲಿನಲ್ಲಿ ಶೇ 1ರಷ್ಟು ಕಡಿತಗೊಳಿಸಿದರೆ ಕೇಂದ್ರ ಸರ್ಕಾರದ ಬಳಿ 35 ಸಾವಿರ ಕೋಟಿ ರೂ. ಉಳಿಯಲಿದೆ. ಪ್ರಸಕ್ತ ವರ್ಷದ ನಿರೀಕ್ಷಿತ ತೆರಿಗೆ ಸಂಗ್ರಹದ ಆಧಾರದ ಮೇಲೆ ಈ ಲೆಕ್ಕಾಚಾರ ಮಾಡಲಾಗಿದೆ. ತೆರಿಗೆ ಸಂಗ್ರಹದ ಮೊತ್ತ ಬದಲಾದಂತೆ, ಕೇಂದ್ರ ಸರ್ಕಾರದ ಬಳಿ ಉಳಿಯುವ ಮೊತ್ತದಲ್ಲೂ ಬದಲಾವಣೆ ಉಂಟಾಗಬಹುದು.

ಕೆಲವು ರಾಜ್ಯ ಸರ್ಕಾರಗಳು ಮಾಸಿಕ ನಗದು ನೆರವು, ಸಾಲ ಮನ್ನಾ ಮತ್ತು ಇತರ ಉಚಿತ ಯೋಜನೆ ಜಾರಿಗೊಳಿಸುವುದನ್ನು ತಡೆಯಲು ಕೇಂದ್ರ ಸರ್ಕಾರ ಹೊಸ ಮಾರ್ಗಗಳನ್ನು ಕಂಡುಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಮಿಳುನಾಡಿನಲ್ಲಿ ಸದ್ದು ಮಾಡುತ್ತಿರುವ ವಿಜಯ್ ಮತ್ತು #GetOut ಫಲಕಗಳು

ಆದರೆ, ಜನರಿಗೆ ಉಚಿತ ಯೋಜನೆಗಳನ್ನು ನೀಡುತ್ತಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಅನುದಾನವನ್ನು ನಿರಾಕರಿಸಲಿದೆಯೇ ಎಂಬುದು ತಕ್ಷಣವೇ ಸ್ಪಷ್ಟವಾಗಿಲ್ಲ. ಕೆಲವು ಷರತ್ತುಗಳನ್ನು ವಿಧಿಸಿ, ಅವುಗಳನ್ನು ಪೂರೈಸಿದ ಬಳಿಕವೇ ರಾಜ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವ ವ್ಯವಸ್ಥೆ ಜಾರಿಗೊಳಿಸಲು ಕೇಂದ್ರವು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಆದರೆ ಕೇಂದ್ರ ಸರ್ಕಾರದ ವೆಚ್ಚದ ಪ್ರಮಾಣ, ವಿಶೇಷವಾಗಿ ಆರ್ಥಿಕ ಹಿಂಜರಿತದ ವರ್ಷಗಳಲ್ಲಿ ಇನ್ನಷ್ಟು ಹೆಚ್ಚಾಗಿದೆ. ಇದರಿಂದ ರಾಜ್ಯಗಳಿಗೆ ನೀಡುವ ತೆರಿಗೆ ಪಾಲನ್ನು ತಗ್ಗಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ಹೇಳಿವೆ. 2024–25ರಲ್ಲಿ ದೇಶದ ವಿತ್ತೀಯ ಕೊರತೆಯು ಜಿಡಿಪಿಯ ಶೇ 4.8ರಷ್ಟು ಇರಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯಗಳ ವಿತ್ತೀಯ ಕೊರತೆ ಶೇ 3.2ರಷ್ಟಿದೆ.

ರಾಜ್ಯಗಳಿಗೆ ನೀಡುವ ಪಾಲನ್ನು ಶೇ 1ರಷ್ಟು ಕಡಿತಗೊಳಿಸುವ ನಿರ್ಧಾರದ ಬಗ್ಗೆ ಸ್ಪಷ್ಟನೆ ಕೋರಿ ಹಣಕಾಸು ಸಚಿವಾಲಯ ಮತ್ತು ಹಣಕಾಸು ಆಯೋಗಕ್ಕೆ ಇ–ಮೇಲ್‌ ಕಳುಹಿಸಿದರೂ, ಯಾವುದೇ ಪ್ರತಿಕ್ರಿಯೆ ಲಭಿಸಿಲ್ಲ

ಕೇಂದ್ರದ ಹೊಸ ಅಸ್ತ್ರ: ಸಿಎಂ ಟೀಕೆ

ತೆರಿಗೆ ಹಂಚಿಕೆ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ), ಪ್ರಕೃತಿ ವಿಕೋಪ ಪರಿಹಾರದಲ್ಲಿ ಅನ್ಯಾಯ, ಹೊಸ ಶಿಕ್ಷಣ ನೀತಿ. ಯುಜಿಸಿ ನಿಯಮಾವಳಿಗಳಿಗೆ ತಿದ್ದುಪಡಿಯೂ ಸೇರಿದಂತೆ ಕೇಂದ್ರ ಸರ್ಕಾರದ ಪ್ರತಿಯೊಂದು ಕ್ರಮವೂ ರಾಜ್ಯವನ್ನು ಶಿಕ್ಷಿಸುವ ದುರುದ್ದೇಶದಿಂದ ಕೂಡಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...