ಟ್ಯಾಕ್ಸಿ ಅಡ್ಡಗಟ್ಟಿ 2 ಕೋಟಿ ರೂ. ದರೋಡೆ; ಪೊಲೀಸ್ ಅಧಿಕಾರಿ ಬಂಧನ

Date:

ಖಾಸಗಿ ಕಂಪನಿಯೊಂದರ ಇಬ್ಬರು ಉದ್ಯೋಗಿಗಳು ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ಧಾಗ, ಅವರನ್ನು ಅಡ್ಡಗಟ್ಟಿ 2.66 ಕೋಟಿ ರೂ. ದರೋಡೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ. ಪ್ರಕರಣದಲ್ಲಿ ಪೊಲೀಸ್ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಒಬ್ಬರನ್ನು ಬುಧವಾರ ಬಂಧಿಸಲಾಗಿದೆ.

- Advertisement -

ಕೋಲ್ಕತ್ತಾದ ಎಂಟಲ್ಲಿ ಪ್ರದೇಶದಲ್ಲಿ ಮೇ 5ರಂದು ದರೋಡೆ ನಡೆದಿದೆ. ಅಂದು ಬೆಳಿಗ್ಗೆ 11.45ರ ಸುಮಾರಿಗೆ ಖಾಸಗಿ ವಿದೇಶಿ ವಿನಿಮಯ ಕಂಪನಿಯ ಇಬ್ಬರು ಉದ್ಯೋಗಿಗಳು ಎಸ್.ಎನ್ ಬ್ಯಾನರ್ಜಿ ರಸ್ತೆಯಿಂದ ಟ್ಯಾಕ್ಸಿಯಲ್ಲಿ ಪಾರ್ಕ್ ಸರ್ಕಸ್ ಪ್ರದೇಶದಲ್ಲಿರುವ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗೆ ಹಣವನ್ನು ಠೇವಣಿ ಇಡಲು ಹೊಗುತ್ತಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಮಾರ್ಗ ಮಧ್ಯೆ ಕಮರ್ದಂಗ ಬಳಿ ದುಷ್ಕರ್ಮಿಗಳು ಕಾರನ್ನು ಅಡ್ಡಗಡ್ಡಿ ಬಲವಂತವಾಗಿ ನಿಲ್ಲಿಸಿದ್ದಾರೆ. ಬಳಿಕ, ಇಬ್ಬರು ಅಪರಿಚಿತ ವ್ಯಕ್ತಿಗಳು ಟ್ಯಾಕ್ಸಿ ಒಳಗೆ ನುಗ್ಗಿ, ಉದ್ಯೋಗಿಗಳಿಂದ ಹಣವನ್ನು ದರೋಡೆ ಮಾಡಿ, ಪರಾರಿಯಾಗಿದ್ದಾರೆ.

ಈ ದರೋಡೆಗೆ ಪಿತೂರಿ ರೂಪಿಸಿದ್ದೇ ಪೊಲೀಸ್‌ ಅಧಿಕಾರಿ (ಎಎಸ್‌ಐ) ಎಂದು ಹೇಳಲಾಗಿದೆ. ಅವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿ ಎಎಸ್‌ಐ ಮತ್ತು ಇತರ ಮೂವರನ್ನು ಈವರೆಗೆ ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Formula E Case: ಎಸಿಬಿ ನ್ಯಾಯಾಲಯಕ್ಕೆ ಕೆಟಿಆರ್ ಹಾಜರು; ‘ದುರುದ್ದೇಶಪೂರಿತ ಪ್ರಚಾರ’ ಎಂದು ವಾಗ್ದಾಳಿ

ಫಾರ್ಮುಲಾ ಇ ರೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಕಾರ್ಯಾಧ್ಯಕ್ಷ ಹಾಗೂ ತೆಲಂಗಾಣ...

ಪಂಜಾಬ್: ಬಿಜೆಪಿ ನಾಯಕ ರವನೀತ್ ಸಿಂಗ್ ಬೆಂಗಾವಲು ಪಡೆಯ ಮೇಲೆ ದಾಳಿ

ಪಂಜಾಬ್‌ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿಯ ಮಾದಕವಸ್ತು ವಿರೋಧಿ ಅಭಿಯಾನದಲ್ಲಿ ಪಾಲ್ಗೊಳ್ಳಲು ಪಠಾಣ್‌ಕೋಟ್‌ನತ್ತ ತೆರಳುತ್ತಿದ್ದ...

ರಾಜಸ್ಥಾನ ಸ್ಥಳೀಯ ಚುನಾವಣೆ: 86 ಗೆದ್ದರೂ ಮಿಷನ್-200 ಸಾಧಿಸಲು ಬಿಜೆಪಿ ಹರಸಾಹಸ; ‘ಆಪರೇಷನ್ ಲೋಟಸ್’ ಸದ್ದು!

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 200...

ಅಮೆರಿಕದ ಶೇ 100 ಸುಂಕದಿಂದ ಭಾರತದ ಆರ್ಥಿಕತೆಗೆ ಕಾದಿದೆ ಭಾರಿ ಆಪತ್ತು

ವಾಷಿಂಗ್ಟನ್‌ನಿಂದ ಹೊರಬಿದ್ದಿರುವ ಈ ನಿರ್ಧಾರ ಭಾರತದ ಆರ್ಥಿಕತೆಯ ಪಾಲಿಗೆ ಅಕ್ಷರಶಃ ಮರಣಶಾಸನವಾಗಿ...