ಫುಟ್‌ಬಾಲ್ ಪಂದ್ಯದಲ್ಲಿ ಸೋತ ಕಾರಣಕ್ಕಾಗಿ ದೈಹಿಕ ಶಿಕ್ಷಕರೊಬ್ಬರು ತಮ್ಮ ವಿದ್ಯಾರ್ಥಿ ತಂಡ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಶಿಕ್ಷಕ ತಮ್ಮ ವಿದ್ಯಾರ್ಥಿ ಆಟಗಾರರಿಗೆ ಒದೆಯುವುದು, ಕಪಾಳಕ್ಕೆ ಹೊಡೆಯುತ್ತಿರುವುದು ಕಂಡುಬಂದಿದೆ. ಶಿಕ್ಷಕನ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ತಮಿಳುನಾಡಿನ ಸೇಲಂನಲ್ಲಿ ಘಟನೆ ನಡೆದಿದೆ ಸೇಲಂನ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಅಣ್ಣಾಮಲೈ ಎಂಬಾತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಶಿಕ್ಷಕ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಶಾಲೆಗಳ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಅಣ್ಣಾಮಲೈ ಕೆಲಸ ಮಾಡುತ್ತಿದ್ದ ಶಾಲೆಯ ವಿದ್ಯಾರ್ಥಿಗಳ ತಂಡ ಫುಟ್‌ಬಾಲ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಇದರಿಂದ ಕುಪಿತಗೊಂಡ ಅಣ್ಣಾಮಲೈ ಆಟದ ಮೈದಾನದಲ್ಲಿಯೇ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.
ಘಟನೆಯ ಬಗ್ಗೆ ಸಂಗಗರಿ ಜಿಲ್ಲಾ ಶಿಕ್ಷಣಾಧಿಕಾರಿ ತನಿಖೆ ನಡೆಸುತ್ತಿದ್ದಾರೆ. ಆರೋಪಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.
“ಆರೋಪಿ ಶಿಕ್ಷಕನನ್ನು ಬಂಧಿಸಿ, ಜೈಲಿಗಟ್ಟಬೇಕು. ದುರದೃಷ್ಟವಶಾತ್, ಸೋಲು ಅಥವಾ ಕಳಪೆ ಪ್ರದರ್ಶನ ನೀಡಿದ ತಂಡವನ್ನು ತರಬೇತುದಾರರು ದೂಷಿಸುವುದನ್ನು ನಾವು ಈಗಲೂ ನೋಡುತ್ತಿದ್ದೇವೆ. ಇದು ವಿದ್ಯಾರ್ಥಿಗಳ ಮನೋಸ್ಥರ್ಯ ಮತ್ತು ಕ್ರಿಡಾಸ್ಪೂರ್ತಿಯನ್ನು ನಶಿಸುವಂತೆ ಮಾಡುತ್ತದೆ” ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
This type of punishment creates legends .to improvise their skills punishment is very good.