ರಾಜಸ್ಥಾನ : ಮೀಸಲಿಟ್ಟ ನೀರು ಕುಡಿದ ದಲಿತ ವಿದ್ಯಾರ್ಥಿಯ ಮೇಲೆ ಶಿಕ್ಷಕ ಹಲ್ಲೆ

Date:

ಶಿಕ್ಷಕರಿಗೆ ಮೀಸಲಿಟ್ಟ ನೀರನ್ನು ಕುಡಿದ ಕಾರಣಕ್ಕಾಗಿ ಶಿಕ್ಷಕನೊಬ್ಬ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

7ನೇ ತರಗತಿಯಲ್ಲಿ ಓದುತ್ತಿದ್ದ 12 ವರ್ಷದ ವಿದ್ಯಾರ್ಥಿ ಶಿಕ್ಷಕರಿಗೆ ಮೀಸಲಿಟ್ಟಿದ್ದ ನೀರು ಕುಡಿದಿದ್ದಾನೆ. ಇದರಿಂದ ಕೋಪಗೊಂಡ ಶಿಕ್ಷಕ ಗಂಗಾರಾಮ್ ಗುರ್ಜರ್ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ್ದಾನೆ.

ಘಟನೆ ನಡೆದ ನಂತರ ಆಕ್ರೋಶಗೊಂಡ ವಿದ್ಯಾರ್ಥಿಯ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಸೇರಿ ನೂರಕ್ಕೂ ಹೆಚ್ಚು ಜನರು ಶಾಲೆಗೆ ಆಗಮಿಸಿ ಆರೋಪಿ ಶಿಕ್ಷಕ ಗಂಗಾರಾಮ್ ಗುರ್ಜರ್‌ನನ್ನು ತರಾಟೆಗೆ ತೆಗೆದುಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆಯ ವಿಕೋಪವನ್ನು ಅರಿತ ಪೊಲೀಸರು ಶಾಲೆಗೆ ಆಗಮಿಸಿ ಶಿಕ್ಷಕನನ್ನು ಜನಸಂದಣಿಯಿಂದ ರಕ್ಷಿಸಿ ಠಾಣೆಗೆ ಕರೆದೊಯ್ದರು. ನಂತರ ಪೋಷಕರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಶಿಕ್ಷಕನನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದಾರಾ? ತಕ್ಕ ಬೆಲೆ ತೆರುತ್ತಾರೆ: ‘ಇಂಡಿಯಾ’ ಹಾಗೂ ‘ಭಾರತ’ ವಿವಾದದ ಬಗ್ಗೆ ರಾಹುಲ್‌ ಕಿಡಿ

“ಬೆಳಗಿನ ಶಾಲಾ ಪ್ರಾರ್ಥನೆಯನ್ನು ಮುಗಿಸಿದ ನಂತರ ಹಲ್ಲೆಗೊಳಗಾದ ವಿದ್ಯಾರ್ಥಿ ಒಳಗೊಂಡು ಕೆಲವು ವಿದ್ಯಾರ್ಥಿಗಳು ಶಿಕ್ಷಕರಿಗೆ ಮೀಸಲಿಟ್ಟಿದ್ದ ನೀರನ್ನು ಆಕಸ್ಮಿಕವಾಗಿ ಕುಡಿದಿದ್ದಾರೆ. ಉಳಿದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ದಲಿತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗೆ ಮಾತ್ರ ಶಿಕ್ಷಕ ಗಂಗಾರಾಮ್ ಗುರ್ಜರ್ ಹಲ್ಲೆ ನಡೆಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಭರತ್‌ಪುರದ ಎಸ್‌ಪಿ ಮೃದುಲ್ ಕಚವಾ ತಿಳಿಸಿದ್ದಾರೆ.

“ನನ್ನ ಸಹೋದರ ಶಿಕ್ಷಕರಿಗೆ ಮೀಸಲಿಟ್ಟಿದ್ದ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕಾಗಿ ಶಿಕ್ಷಕ ಗಂಗಾರಾಮ್ ಗುರ್ಜರ್ ದೊಣ್ಣೆಯಿಂದ ಅಮಾನುಷವಾಗಿ ಥಳಿಸಿದ್ದಾರೆ. ಹಲ್ಲೆ ಮಾಡುವುದರ ಜೊತೆ ಜಾತಿ ನಿಂದನೆಯನ್ನು ಮಾಡಿದ್ದಾನೆ. ಹಲ್ಲೆಯಿಂದ ನನ್ನ ಸಹೋದರನಿಗೆ ಮೈಮೇಲೆ ತೀವ್ರ ಗಾಯಗಳಾಗಿದೆ” ಎಂದು ಸಂತ್ರಸ್ತ ವಿದ್ಯಾರ್ಥಿಯ ಸಹೋದರ ರಾನ್ ಸಿಂಗ್ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿಪಡಿಸಲು ಪ್ರಯತ್ನಿಸಬೇಡಿ’; ವಿದ್ಯಾರ್ಥಿನಿ ಪ್ರಾಚಿ ನಿಗಮ್

ಉತ್ತರಪ್ರದೇಶದ 10ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ 55 ಲಕ್ಷ ವಿದ್ಯಾರ್ಥಿಗಳಲ್ಲಿ ಪ್ರಾಚಿ...

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ: ಅರವಿಂದ್ ಕೇಜ್ರಿವಾಲ್

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ತಿಳಿಸಿದ್ದು,ಲೋಕಸಭೆ...

ಲೋಕಸಭೆ ಚುನಾವಣೆ| ನೀತಿ ಸಂಹಿತೆ ಉಲ್ಲಂಘನೆ; ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್

ಕಾಶ್ಮೀರದ ಚುನಾವಣಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ...

‘ರಫಾ ದುರಂತ’ಕ್ಕೆ ಸಂತಾಪ ವ್ಯಕ್ತಪಡಿಸಿ ನಂತರ ಸ್ಟೇಟಸ್ ಡಿಲೀಟ್ ಮಾಡಿದ ರೋಹಿತ್ ಪತ್ನಿ

ಪ್ಯಾಲಿಸ್ಟೇನ್‌ನ ದಕ್ಷಿಣ ಗಾಜಾದ ರಫಾ ಪಟ್ಟಣದ ಮೇಲೆ ಇಸ್ರೇಲ್ ಸೇನೆ ಕಳೆದ...