ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂತರ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರತ ತಂಡ ವಿಶ್ವಕಪ್ ಫೈನಲ್‌ನಲ್ಲಿ ಸೋತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಕಾರಣ ಎಂದು ಪರೋಕ್ಷವಾಗಿ ಹೇಳಿದ್ದಾರೆ.

- Advertisement -

ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಂಗಣದಲ್ಲಿ ಟಿಎಂಸಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡದ ಅವರು, “ಪಾಪಿಗಳು ಹಾಜರಾದ ಫೈನಲ್ ಪಂದ್ಯ ಬಿಟ್ಟು ಉಳಿದ ಎಲ್ಲ ಪಂದ್ಯಗಳಲ್ಲಿಯೂ ಟೀಂ ಇಂಡಿಯಾ ಜಯಗಳಿಸಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ ಅಥವಾ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆದಿದ್ದರೆ ನಾವು ಸುಲಭವಾಗಿ ಗೆಲ್ಲುತ್ತಿದ್ದೆವು ಎಂದು ನಾನು ಈ ಸಂದರ್ಭದಲ್ಲಿ ಹೇಳಬಲ್ಲೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾದ ಕ್ಯಾಪ್ಟನ್ ಯಾರು?

“ಭಾರತೀಯ ಕ್ರಿಕೆಟ್ ಆಟಗಾರರು ಪಂದ್ಯದ ವೇಳೆ ಕೇಸರಿ ಜೆರ್ಸಿಗಳನ್ನು ಧರಿಸಲಿಲ್ಲ. ಆಟಗಾರರ ಜೆರ್ಸಿ ನೀಲಿ ಬಣ್ಣದ್ದಾಗಿದ್ದು, ಅಭ್ಯಾಸದ ಸಮಯದಲ್ಲಿ ಕಿತ್ತಳೆ ಬಣ್ಣದ ಜೆರ್ಸಿ ಧರಿಸುತ್ತಿದ್ದರು. ಎಲ್ಲ ಫೆಡರೇಶನ್‍ಗಳನ್ನು ರಾಜಕೀಯ ಪಕ್ಷಗಳು ವಶಪಡಿಸಿಕೊಂಡಿವೆ. ಕ್ರಿಕೆಟ್ ಹಾಗೂ ಕಬಡ್ಡಿಯಲ್ಲಿಯೂ ಕೇಸರಿ ಬಣ್ಣವನ್ನು ಬಳಸಲಾಗುತ್ತದೆ. ಕೇಸರಿ ಬಣ್ಣವು ತ್ಯಾಗಿಗಳ ಬಣ್ಣವಾಗಿತ್ತು, ಆದರೆ ನೀವು ಭೋಗಿಗಳು” ಎಂದು ಮಮತಾ ಬ್ಯಾನರ್ಜಿ ಕಿಡಿಕಾರಿದರು.

ಈ ಮೊದಲು ನ.17 ರಂದು ಇದೇ ವಿಷಯದ ಬಗ್ಗೆ ಮಾತನಾಡಿದ್ದ ಮಮತಾ ಬ್ಯಾನರ್ಜಿ, ಬಿಜೆಪಿ ಭಾರತೀಯ ಕ್ರಿಕೆಟ್ ತಂಡವನ್ನು ಒಳಗೊಂಡಂತೆ ದೇಶಾದ್ಯಂತ ವಿವಿಧ ಸಂಸ್ಥೆಗಳನ್ನು ಕೇಸರಿಕರಣಗೊಳಿಸಿದೆ. ಈಗ ಎಲ್ಲವೂ ಕೇಸರಿ ಬಣ್ಣಕ್ಕೆ ತಿರುಗುತ್ತಿದೆ. ನಮ್ಮ ಭಾರತೀಯ ಆಟಗಾರರ ಬಗ್ಗೆ ನಮಗೆ ಹೆಮ್ಮೆ ಇದೆ ಮತ್ತು ಅವರು ವಿಶ್ವ ಚಾಂಪಿಯನ್ ಆಗುತ್ತಾರೆ ಎಂದು ನಾನು ನಂಬುತ್ತೇನೆ. ಆದರೆ ಅಭ್ಯಾಸ ಮಾಡುವಾಗ ಅವರ ಉಡುಗೆ ಕೂಡ ಕೇಸರಿ ಬಣ್ಣಕ್ಕೆ ತಿರುಗಿತು. ಅವರು ಮೊದಲು ನೀಲಿ ಬಣ್ಣವನ್ನು ಧರಿಸುತ್ತಿದ್ದರು” ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...