ರಹಸ್ಯವಾಗಿ ಚಿತ್ರೀಕರಿಸಿದ ವಿಡಿಯೊ ಮುಂದಿಟ್ಟು ಮದುವೆ ರದ್ದು: ಮನನೊಂದು ಟೆಕ್ಕಿ, ಆಕೆಯ ತಾಯಿ ಆತ್ಮಹತ್ಯೆ

Date:

ನಿಗದಿಯಾಗಿದ್ದ ಮದುವೆಯನ್ನು ವರನ ಕಡೆಯವರು ಏಕಾಏಕಿ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ತೀವ್ರವಾಗಿ ಮನನೊಂದ ಸಾಫ್ಟ್‌ವೇರ್ ಎಂಜಿನಿಯರ್ ಹಾಗೂ ಆಕೆಯ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಅಮಾನವೀಯ ಘಟನೆ ಆಂಧ್ರ ಪ್ರದೇಶದ ಬಾಪಟ್ಲ ಜಿಲ್ಲೆಯ ಮಾರ್ಚೂರು ಎಂಬಲ್ಲಿ ನಡೆದಿದೆ.

- Advertisement -

​ಮೃತರನ್ನು ಬಿ.ಸಿ ಕಾಲೊನಿ ನಿವಾಸಿ ಸಿರಿಕೊಂಡ ಶ್ರೀನಿವಾಸರಾವ್ ಅವರ ಪತ್ನಿ ಸುಜಾತಾ (46) ಹಾಗೂ ಪುತ್ರಿ ದಿವ್ಯಾ (25) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಶ್ರೀನಿವಾಸರಾವ್ ದಂಪತಿಯ ಪುತ್ರ ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದರೆ, ಪುತ್ರಿ ದಿವ್ಯಾ ಕಳೆದ ಮೂರು ವರ್ಷಗಳಿಂದ ಹೈದರಾಬಾದ್‌ನ ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ದಿವ್ಯಾ ಅವರಿಗೆ ಮಾರ್ಚೂರು ಮೂಲದವರೇ ಆದ ಮತ್ತೊಬ್ಬ ಸಾಫ್ಟ್‌ವೇರ್ ಎಂಜಿನಿಯರ್ ಶೇಷು ಬಾಬು ಎಂಬಾತನ ಜೊತೆ ವಿವಾಹ ನಿಶ್ಚಯವಾಗಿತ್ತು. ಕಳೆದ ವರ್ಷ ಡಿಸೆಂಬರ್ 14 ರಂದು ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದ್ದು, ಈ ಬೇಸಿಗೆಯಲ್ಲಿ ಮದುವೆ ಮಾಡಲು ಸಕಲ ಸಿದ್ಧತೆಗಳು ನಡೆಯುತ್ತಿದ್ದವು.

ಇದನ್ನು ಓದಿದ್ದೀರಾ? ಟ್ರಂಪ್‌ಗೆ ಚಿತ್ತಭ್ರಮೆಯೇ?; ಅಮೆರಿಕ ಅಧ್ಯಕ್ಷರ ಮಾನಸಿಕ ಆರೋಗ್ಯದ ಸುತ್ತ ಅನುಮಾನದ ಹುತ್ತ
​
ರಹಸ್ಯ ವಿಡಿಯೊ ತೋರಿಸಿ ಮದುವೆ ರದ್ದು
ಮಾರ್ಚ್ 4 ರಂದು ಈ ಮದುವೆ ಪ್ರಕರಣ ದಿಢೀರ್ ತಿರುವು ಪಡೆದುಕೊಂಡಿತು. ವರ ಶೇಷು ಬಾಬು, ದಿವ್ಯಾ ಹಾಗೂ ಆಕೆಯ ಪೋಷಕರನ್ನು ಮಾರ್ಚೂರಿನಲ್ಲಿರುವ ತನ್ನ ಮನೆಗೆ ಮಾತುಕತೆಗೆಂದು ಕರೆಸಿದ್ದನು. ಹೈದರಾಬಾದ್‌ನಲ್ಲಿ ದಿವ್ಯಾ ಅವರ ಹಿಂದೆಯೇ ರಹಸ್ಯವಾಗಿ ಹಿಂಬಾಲಿಸಿ ಚಿತ್ರೀಕರಿಸಿದ್ದಾಗಿ ಹೇಳಲಾದ ಕೆಲವು ಫೋಟೊ ಮತ್ತು ವಿಡಿಯೊಗಳನ್ನು ಆತ ಈ ಸಂದರ್ಭದಲ್ಲಿ ಅವರಿಗೆ ತೋರಿಸಿದ್ದಾನೆ. ಇವುಗಳನ್ನೇ ಮುಂದಿಟ್ಟುಕೊಂಡು, ತನಗೆ ಈ ಮದುವೆಗೆ ಇಷ್ಟವಿಲ್ಲ ಎಂದು ಹೇಳಿ ಏಕಾಏಕಿ ವಿವಾಹವನ್ನು ರದ್ದುಗೊಳಿಸಿದ್ದಾನೆ.

ಅನಿರೀಕ್ಷಿತವಾಗಿ ಮದುವೆ ಮುರಿದುಬಿದ್ದಿದ್ದರಿಂದ ದಿವ್ಯಾ ಹಾಗೂ ಅವರ ತಾಯಿ ಸುಜಾತಾ ತೀವ್ರ ಆಘಾತಕ್ಕೆ ಒಳಗಾಗಿದ್ದರು. ಸಂಬಂಧಿಕರು ನೀಡಿರುವ ಮಾಹಿತಿ ಪ್ರಕಾರ, ಇವರಿಬ್ಬರೂ ಮಾರ್ಚೂರಿನಲ್ಲಿ ಇಲಿ ಪಾಷಾಣ ಹಾಗೂ ಕಳೆನಾಶಕ ಖರೀದಿಸಿ, ನಂತರ ದ್ರೋಣಾದುಲ ಗ್ರಾಮಕ್ಕೆ ತೆರಳಿ ಅಲ್ಲಿ ವಿಷ ಸೇವಿಸಿದ್ದಾರೆ.

​ಮಾರ್ಚ್ 5ರ ಸಂಜೆ ಇವರಿಬ್ಬರೂ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ತಂದೆ ಶ್ರೀನಿವಾಸರಾವ್ ಅವರ ಗಮನಕ್ಕೆ ಬಂದಿದೆ. ತಕ್ಷಣವೇ ಇಬ್ಬರನ್ನೂ ಚಿಲಕಲೂರಿಪೇಟೆಯ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಗುಂಟೂರಿನ ಪ್ರತ್ಯೇಕ ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿತ್ತು. ಆದರೆ, ವೈದ್ಯರ ಸತತ ಪ್ರಯತ್ನದ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಗುರುವಾರ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಶ್ರೀನಿವಾಸರಾವ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತ ಮಾಹಿತಿಯನ್ನು ಮಾರ್ಚೂರು ಠಾಣಾ ಪೊಲೀಸರಿಗೆ ರವಾನಿಸಲಾಗಿದ್ದು, ಅವರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯನನ್ನು ಕೇಂದ್ರವಾಗಿಟ್ಟುಕೊಂಡು ವೈಜ್ಞಾನಿಕವಾಗಿ ಚಿಂತಿಸಬೇಕು: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...