PSLV-C62 ರಾಕೆಟ್‌ನಲ್ಲಿ ತಾಂತ್ರಿಕ ದೋಷ: ಕಕ್ಷೆ ಸೇರದ ಉಪಗ್ರಹಗಳು

Date:

“ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಭೂ ಸರ್ವೇಕ್ಷಣಾ ಉಪಗ್ರಹ ಹಾಗೂ ಇತರ 14 ಉಪಗ್ರಹಗಳನ್ನು ಹೊತ್ತೊಯ್ದ PSLV-C62 ರಾಕೆಟ್‌ನಲ್ಲಿ ತಾಂತ್ರಿಕ ಅಡಚಣೆ ಕಾಣಿಸಿಕೊಂಡಿದೆ” ಎಂದು ಇಸ್ರೋ ಅಧ್ಯಕ್ಷ ವಿ.ನಾರಾಯಣನ್ ತಿಳಿಸಿದ್ದಾರೆ.

- Advertisement -

ಇದರೊಂದಿಗೆ ಉಡಾವಣೆಯಲ್ಲಿ ಹೊತ್ತೊಯ್ಯಲಾದ ಎಲ್ಲಾ 14 ಉಪಗ್ರಹಗಳು ಬಾಹ್ಯಾಕಾಶದಲ್ಲೇ ನಿಯಂತ್ರಣ ಕಳೆದುಕೊಂಡಿವೆ. ಈ ಘಟನೆ ಭಾರತದ ಬಾಹ್ಯಾಕಾಶ ಮಹತ್ವಾಕಾಂಕ್ಷೆಗಳಿಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಸೋಮವಾರ ಬೆಳಿಗ್ಗೆ 10.18ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಯಶಸ್ವಿಯಾಗಿ ನಡೆದಿತ್ತು. ಮೊದಲೆರಡು ಹಂತಗಳ ಕಾರ್ಯಾಚರಣೆಯು ನಿರೀಕ್ಷಿತವಾಗಿ ಸಾಗಿತು. ಆದರೆ ಮೂರನೇ ಹಂತದ ವೇಳೆ ಅಡಚಣೆ ಕಾಣಿಸಿಕೊಂಡಿದೆ.

PSLV-C62 ರಾಕೆಟ್ 44.4 ಮೀಟರ್ ಎತ್ತರವಾಗಿತ್ತು. ಇದು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್‌ (PSLV) ಸರಣಿಯ 64ನೇ ಹಾಗೂ PSLV-DL ಆವೃತ್ತಿಯ 5ನೇ ರಾಕೆಟ್ ಇದಾಗಿದೆ.

ಇಸ್ರೋ ಅಂಗಸಂಸ್ಥೆಯಾದ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ನೇತೃತ್ವದಲ್ಲಿ ದೇಶದ ಹಾಗೂ ವಿದೇಶದ 14 ಉಪಗ್ರಹಗಳು 17 ನಿಮಿಷಗಳ ಪ್ರಯಾಣದ ನಂತರ, ಸುಮಾರು 511 ಕಿ.ಮೀ. ಎತ್ತರದಲ್ಲಿ ಕಕ್ಷೆಗೆ ಸೇರುವ ನಿರೀಕ್ಷೆಯಿತ್ತು.

ಕಳೆದ ವರ್ಷ ನಡೆದ PSLV-C61 ಮಿಷನ್‌ನಲ್ಲಿಯೂ ಇದೇ ರೀತಿಯಲ್ಲಿ ಕಕ್ಷೆಗೆ ಸೇರಿಸುವಾಗ ವೈಫಲ್ಯ ಎದುರಾಗಿತ್ತು. ಇತ್ತೀಚಿನ ಈ ಘಟನೆ ಇಸ್ರೋಗೆ ಮತ್ತೊಂದು ತಾಂತ್ರಿಕ ಸವಾಲಾಗಿ ಪರಿಣಮಿಸಿದೆ. ಮಿಷನ್ ವಿಫಲತೆಯ ನಿಖರ ಕಾರಣಗಳನ್ನು ಪತ್ತೆಹಚ್ಚಲು ತಾಂತ್ರಿಕ ಸಮಿತಿ ರಚಿಸಿ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಇಸ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣವಾದ ‘ಎಕ್ಸ್’ ಖಾತೆಯಲ್ಲಿ ಇಸ್ರೋ ಪೋಸ್ಟ್ ಮಾಡಿದೆ. ”PSLV-C62 ಕಾರ್ಯಾಚರಣೆಯ ಮೂರನೇ ಹಂತದಲ್ಲಿ ವೈಫಲ್ಯ ಕಂಡು ಬಂದಿದೆ. ವಿಶ್ಲೇಷಣೆ ಆರಂಭವಾಗಿದೆ” ಎಂದು ಮಾಹಿತಿ ಹಂಚಿಕೊಂಡಿದೆ.

2026ರಲ್ಲಿ ಇಸ್ರೋದ ಮೊದಲ ಉಡಾವಣೆ ಇದಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ವಿರುದ್ಧ ಅರ್ಜಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...