ದಲಿತ ಬಾಲಕಿ ಮೇಲೆ 14 ಜನರಿಂದ 2 ವರ್ಷ ನಿರಂತರ ಅತ್ಯಾಚಾರ: ಎಂಟು ತಿಂಗಳ ಗರ್ಭಿಣಿಯಾದಾಗ ಪ್ರಕರಣ ಬೆಳಕಿಗೆ

Date:

15 ವರ್ಷದ ಬಾಲಕಿ ಮೇಲೆ 14 ಜನರು 2 ವರ್ಷಗಳ ಕಾಲ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಬಾಲಕಿ ಎಂಟು ತಿಂಗಳ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

- Advertisement -

ಬಾಲಕಿಯ ಮೇಲೆ ಎರಡು ವರ್ಷಗಳ ಕಾಲ 14 ಪುರುಷರು ಪದೇ ಪದೇ ಅತ್ಯಾಚಾರ ಎಸಗಿದ್ದಾರೆ. ಆಕೆ ಎಂಟು ತಿಂಗಳ ಗರ್ಭಿಣಿ ಎಂಬುದು ತಿಳಿದುಬಂದ ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಇದನ್ನು ಓದಿದ್ದೀರಾ? ಹುಟ್ಟುಹಬ್ಬ ಆಚರಣೆ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ; ದೂರು ದಾಖಲು

ಬಾಲಕಿ ಎಂಟನೇ ತರಗತಿಯಲ್ಲಿದ್ದಾಗ ಆಕೆ ಮೇಲೆ ಮೊದಲ ಬಾರಿಗೆ ಅತ್ಯಾಚಾರ ನಡೆದಿದೆ. ಅದಾದ ಬಳಿಕ ನಿರಂತರವಾಗಿ ಅತ್ಯಾಚಾರ ನಡೆದಿದೆ. ಸದ್ಯ ಬಾಲಕಿ ಹತ್ತನೇ ತರಗತಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ ರತ್ನಾ ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ್ದಾಳೆ ಎಂದು ಹೇಳಲಾಗಿದೆ. ಬಾಲಕಿಯನ್ನು ಆರೋಪಿಗಳು ಬೆದರಿಸಿ ಬ್ಲ್ಯಾಕ್‌ಮೇಲ್ ಮಾಡಿದ್ದರು. ಬಾಲಕಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಳು.

ಬಾಲಕಿ ಎಂಟು ತಿಂಗಳ ಗರ್ಭಿಣಿಯಾಗಿದ್ದಾಳೆ. ಈವರೆಗೂ ಆಕೆ ಗರ್ಭಿಣಿ ಎಂಬುದು ಆಕೆಯ ಮನೆಯವರಿಗೆ ಹೇಗೆ ತಿಳಿದುಬಂದಿಲ್ಲ ಎಂಬುದರ ಬಗ್ಗೆ ತನಿಖೆ ಆರಂಭಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ವಿ ರತ್ನಾ ಅವರು ಹೇಳಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಅಪ್ರಾಪ್ತ ಸೇರಿದಂತೆ 17 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಉತ್ತರ ಪ್ರದೇಶದಲ್ಲಿ ಜಲಪ್ರಳಯ: ಪ್ರವಾಹಕ್ಕೆ 56 ಮಂದಿ ಬಲಿ, ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸ

ಉತ್ತರ ಪ್ರದೇಶದಲ್ಲಿ ಕಳೆದ 60 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ...