ಮಧ್ಯಪ್ರದೇಶ | ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಂದು ಸುಟ್ಟ ದುರುಳರು

Date:

15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುರುಳರು ಆಕೆಯನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಲು ಯತ್ನಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಬಾಲಕಿಯ ಮೃತದೇಹವು ಗುಪ್ತೇಶ್ವರ ಬೆಟ್ಟ ಪ್ರದೇಶದಲ್ಲಿ ಸಿಕ್ಕಿದ್ದು ಸದ್ಯ ಸ್ಥಳೀಯವಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

- Advertisement -

ಭಿಂದ್‌ನ 9 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ ಬಾಲಕಿ ಮೇ 28ರಂದು ನಾಪತ್ತೆಯಾಗಿದ್ದಳು. ರಾಮು ಗುರ್ಜರ್ ಎಂಬ ಯುವಕನ ಮೊಬೈಲ್ ಸಂಖ್ಯೆ ಸಿಕ್ಕ ಬಳಿಕ ಆಕೆಯ ಕುಟುಂಬ ಹುಡುಕಾಟ ಆರಂಭಿಸಿತ್ತು. ಆದರೆ ಕುಟುಂಬಕ್ಕೆ ಆಕೆಯನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಅದಾದ ಬಳಿಕ ಕುಟುಂಬಸ್ಥರು ಮೌ ಪೊಲೀಸ್ ಠಾಣೆಯಲ್ಲಿ ಅಪಹರಣ ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ರಾಮು ಗುರ್ಜರ್ ಬಾಲಕಿಗೆ ಆಮಿಷವೊಡ್ಡಿ ಗ್ವಾಲಿಯರ್‌ಗೆ ಕರೆತಂದಿದ್ದ. ಗುಪ್ತೇಶ್ವರ ಬೆಟ್ಟದ ನವಗ್ರಹ ದೇವಾಲಯದ ಬಳಿ ಯಾರೂ ಇಲ್ಲದ ಸ್ಥಳದಲ್ಲಿ ತನ್ನ ಇಬ್ಬರು ಸಹಚರರಾದ ಅರುಣ್ ಕುಶ್ವಾ ಮತ್ತು ಗೌರವ್ ಕುಶ್ವಾ ಜತೆ ಸೇರಿ ಅತ್ಯಾಚಾರ ಎಸಗಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ವಿಚಾರಣೆಯ ಸಮಯದಲ್ಲಿ, ಆರೋಪಿಗಳು ಮೊದಲು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ, ಬಳಿಕ ಈ ಕೃತ್ಯ ಬಹಿರಂಗವಾಗುವ, ಸಿಕ್ಕಿಬೀಳುವ ಭಯದಿಂದ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಮೇ 29ರಂದು ಆಕೆಯ ಗುರುತು, ಅಪರಾಧದ ಪುರಾವೆ ನಾಶ ಪಡಿಸುವ ಉದ್ದೇಶದಿಂದ ಆಕೆಯ ಮೃತದೇಹದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರು ಪ್ರಮುಖ ಆರೋಪಿ ರಾಮು ಗುರ್ಜರ್‌ನನ್ನು ಬಂಧಿಸಿದ್ದಾರೆ. ಆತನ ವಿಚಾರಣೆಯ ಬಳಿಕ ಗ್ವಾಲಿಯರ್‌ನಲ್ಲಿದ್ದ ಆತನ ಇಬ್ಬರು ಸಹಚರರನ್ನೂ ಬಂಧಿಸಲಾಗಿದೆ.

ಇನ್ನು ಸಂತ್ರಸ್ತೆಯ ಮರಣೋತ್ತರ ಪರೀಕ್ಷೆಯ ನಂತರ ಕುಟುಂಬ ಸದಸ್ಯರು ಮತ್ತು ಆಕ್ರೋಶಿತ ಗ್ರಾಮಸ್ಥರು ರಸ್ತೆ ತಡೆ ನಡೆಸಿದ್ದರು. ಇದರಿಂದಾಗಿ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿತ್ತು. ಮೂವರು ಆರೋಪಿಗಳನ್ನು ತಕ್ಷಣ ಗಲ್ಲಿಗೇರಿಸಬೇಕು. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ರಸ್ತೆಯಲ್ಲಿ ಧರಣಿ ನಡೆಸಿದ್ದಾರೆ.

ಸಂತ್ರಸ್ತೆಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಖನೌ ಕೆಫೆ ಮಾಲೀಕನ ಸಾವು ಪ್ರಕರಣ: ರೂಪದರ್ಶಿ ಶ್ರದ್ಧಾ ದುಬೆ ಬಂಧನ

​ಲಖನೌದ ಕೆಫೆ ಮಾಲೀಕ ಶಿವ ಶರ್ಮಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ...

ಏಷ್ಯನ್ ಪ್ಯಾರಾ ಗೇಮ್ಸ್‌ | 192 ಕೆಜಿ ಭಾರ ಎತ್ತಿ ಬೆಳ್ಳಿ ಗೆದ್ದ ಅಶೋಕ್ ಮಲಿಕ್

ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 65 ಕೆಜಿ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...