ಬಾಲಕಿ ಮೇಲೆ ಅತ್ಯಾಚಾರ: ಗರ್ಭಪಾತ ಮಾಡಿಸಿದ ದುರುಳರು; ಮೂವರ ಬಂಧನ

Date:

ಹದಿನಾರು ವರ್ಷದ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಅತ್ಯಾಚಾರ ನಡೆಸಿ ಬಲವಂತವಾಗಿ ಗರ್ಭಪಾತ ಮಾಡಿಸಿರುವ ಘಟನೆ ಫರಿದಾಬಾದ್‌ನಲ್ಲಿ ನಡೆದಿದೆ. ಈ ಸಂಬಂಧ ಜಸ್ವಂತ್ (37), ಆತನ ಸ್ನೇಹಿತ ಸುಲ್ತಾನ್ ಮತ್ತು ಸಂತ್ರಸ್ತೆಯ ನೆರೆಹೊರಯವನಾದ ಸಿಕಂದರ್ (55) ಎಂಬ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಫರಿದಾಬಾದ್‌ನ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ಸಹಾಯವಾಣಿಗೆ ಪ್ರದೀಪ್ ಕುಮಾರ್ ಎಂಬವರು ದೂರು ನೀಡಿದ್ದಾರೆ. 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ನಂತರ ಗರ್ಭಪಾತ ಮಾಡಿಸಿಕೊಂಡಿದ್ದಾರೆ ಎಂದು ದೂರು ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಬಳ್ಳಾರಿ | ತೋರಣಗಲ್ಲು ಅಪ್ರಾಪ್ತೆಯ ಅತ್ಯಾಚಾರ ಖಂಡನೆ; ಅರೋಪಿಗಳ ಬಂಧನಕ್ಕೆ ಎಸ್‌ಎಫ್‌ಐ ಒತ್ತಾಯ

ಈ ಘಟನೆಗೆ ಸಂಬಂಧಿಸಿದಂತೆ ಎರಡು ಎನ್‌ಜಿಒಗಳಾದ ಶಕ್ತಿ ವಾಹಿನಿ ಮತ್ತು ನೊಸೃಷ್ಟಿ ಸಂಸ್ಥೆಯಿಂದ ಕರೆ ಬಂದಿದೆ ಎಂದು ಪ್ರದೀಪ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಬಳಿಕ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ.

ಸಂತ್ರಸ್ತೆಯು ತನ್ನ ಮದ್ಯವ್ಯಸನಿ ತಂದೆ ಮತ್ತು ಕಿರಿಯ ಸಹೋದರನನ್ನು ನೋಡಿಕೊಳ್ಳಲು ಭಿಕ್ಷಾಟನೆ ಮಾಡುತ್ತಿದ್ದಳು. ಸುಮಾರು ಮೂರು ತಿಂಗಳ ಹಿಂದೆ ಆಕೆಯ ಸಹೋದರ ನಾಪತ್ತೆಯಾಗಿದ್ದು, ಆಕೆಗೆ ಆಹಾರ ನೀಡುತ್ತಿದ್ದ ಆಟೋ ಚಾಲಕ ಜಸ್ವಂತ್ ಸಹೋದರನನ್ನು ಹುಡುಕಲು ಸಹಾಯ ಮಾಡುವುದಾಗಿ ಆಟೋದಲ್ಲಿ ಕರೆದೊಯ್ದಿದ್ದಾನೆ.

“ಜಸ್ವಂತ್ ಆಕೆಯನ್ನು ತನ್ನ ಕೋಣೆಗೆ ಕರೆದೊಯ್ದಿದ್ದು, ಆತನ ಸ್ನೇಹಿತ ಸುಲ್ತಾನ್ ಜೊತೆ ಹಲವು ಬಾರಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯಾರಿಗಾದರು ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದರು ಎಂದು ಸಂತ್ರಸ್ತೆ ತಿಳಿಸಿದ್ದಾಳೆ” ಎಂದು ಕುಮಾರ್ ಪೊಲೀಸರಿಗೆ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಸಂತ್ರಸ್ತೆ ಜೊತೆ ಮದುವೆ ಷರತ್ತು; ಅತ್ಯಾಚಾರ ಆರೋಪಿಗೆ ಜಾಮೀನು

ಇನ್ನು ಸಂತ್ರಸ್ತೆಯ ನೆರೆಮನೆಯ ಸಿಕಂದರ್ ಎಂಬಾತನು ಆಕೆಗೆ ಆಹಾರ ಮತ್ತು ಚಹಾ ನೀಡಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸದ್ಯ ಮೂವರು ಆರೋಪಿಗಳನ್ನು ಕೂಡಾ ಪೊಲೀಸರು ಬಂಧಿಸಿದ್ದಾರೆ. ಪೋಕ್ಸೊ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎನ್‌ಜಿಒ ಸಿಆರ್‌ವೈ ವರದಿಯ ಪ್ರಕಾರ ದೇಶದಲ್ಲಿ 2016ರಿಂದ 2022ರ ನಡುವೆ ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಸುಮಾರು ಶೇಕಡ 96ರಷ್ಟು ಏರಿಕೆಯಾಗಿದೆ. ಇನ್ನೂ ಹಲವು ಪ್ರಕರಣಗಳು ವರದಿಯೇ ಆಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...