ಹೈದರಾಬಾದ್‌ನಲ್ಲಿ 31 ವರ್ಷದ ವ್ಯಕ್ತಿಯನ್ನು ಅಪರಿಚಿತ ವ್ಯಕ್ತಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಮೊಹಮ್ಮದ್ ಶೇಖ್ ಅಲೀಂ ಎಂದು ಗುರುತಿಸಲಾಗಿದೆ.
ಬುಧವಾಋ ರಾತ್ರಿ ಆಸಿಫ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಲೀಂನನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಮೂವರು ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಆಸಿಫ್ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೆಂಕಟೇಶ್ವರಲು ಮಾತನಾಡಿ, “ಮೃತರನ್ನು ಮೊಹಮ್ಮದ್ ಶೇಖ್ ಅಲೀಂ (31) ಎಂದು ಗುರುತಿಸಲಾಗಿದೆ. ವೈನ್ ಶಾಪ್ ಬಳಿ ಮದ್ಯ ಸೇವಿಸುತ್ತಿದ್ದಾಗ, ಅಪರಿಚಿತ ವ್ಯಕ್ತಿಗಳು ಏಕಾಏಕಿ ಬಂದು ಅವರಿಗೆ ಚಾಕುವಿನಿಂದ ಇರಿದಿದ್ದಾರೆ. ನಾವು ಮೂವರು ಆರೋಪಿಗಳನ್ನು ಗುರುತಿಸಿದ್ದೇವೆ. ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ” ಎಂದು ಹೇಳಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.