ಜನರ ಆಸ್ತಿಯನ್ನು ಆಕ್ರಮಿಸಿಕೊಂಡು ಭೂ ದಲ್ಲಾಳಿಯಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯೊಬ್ಬನಿಗೆ ಬಿಜೆಪಿ ಸಂಸದ ಈಟಲ ರಾಜೇಂದರ್ ಕಪಾಳಮೋಕ್ಷ ಮಾಡಿದ ಘಟನೆ ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಪೋಚಾರಂನಲ್ಲಿ ನಡೆದಿದೆ.
ಸ್ಥಳೀಯರು ಸಂಸದರ ಬಳಿ ತಮಗಾದ ಸಂಕಷ್ಟವನ್ನು ವಿವರಿಸಿದ ಬಳಿಕ ಈ ಘಟನೆ ನಡೆದಿದೆ. ಭೂ ಒತ್ತುವರಿ ಕುರಿತು ದೂರುಗಳನ್ನು ಸ್ವೀಕರಿಸಿದ ನಂತರ, ಬಿಜೆಪಿ ಸಂಸದರು ಮೇಡ್ಚಲ್ ಜಿಲ್ಲೆಯ ಪೋಚಾರಂ ಪುರಸಭೆಯ ಏಕಶಿಲಾ ನಗರಕ್ಕೆ ಭೇಟಿ ನೀಡಿದ್ದರು. ಬಡವರ ಜಮೀನನ್ನು ರಿಯಲ್ ಎಸ್ಟೇಟ್ ದಲ್ಲಾಳಿಗಳು ಒತ್ತುವರಿ ಮಾಡಿಕೊಂಡಿರುವುದು ಕಂಡು ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಸದ ಈಟಲ ರಾಜೇಂದರ್ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಪ್ರದೇಶದಲ್ಲಿ ಬಡವರ ಜಮೀನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸಂಸದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ನಂತರ ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಕೂಡ ವ್ಯಕ್ತಿಗೆ ಥಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸಿಯುತ್ತಿರುವ ಸಾಮ್ರಾಜ್ಯದ ಹೊಸ ಅಧಿಪತಿ ಡೊನಾಲ್ಡ್ ಟ್ರಂಪ್
ಸ್ಥಳೀಯರು ಸಂಸದರ ಬಳಿ ತಮಗಾದ ಸಂಕಷ್ಟವನ್ನು ವಿವರಿಸಿದ ಬಳಿಕ ಈ ಘಟನೆ ನಡೆದಿದೆ. ಭೂ ಒತ್ತುವರಿ ಕುರಿತು ದೂರುಗಳನ್ನು ಸ್ವೀಕರಿಸಿದ ನಂತರ, ಬಿಜೆಪಿ ಸಂಸದರು ಮೇಡ್ಚಲ್ ಜಿಲ್ಲೆಯ ಪೋಚಾರಂ ಪುರಸಭೆಯ ಏಕಶಿಲಾ ನಗರಕ್ಕೆ ಭೇಟಿ ನೀಡಿದ್ದರು. ಬಡವರ ಜಮೀನನ್ನು ರಿಯಲ್ ಎಸ್ಟೇಟ್ ದಲ್ಲಾಳಿಗಳು ಒತ್ತುವರಿ ಮಾಡಿಕೊಂಡಿರುವುದು ಕಂಡು ಬಂದಿದೆ ಎಂದು ಸಂಸದರು ಆಕ್ರೋಶ ವ್ಯಕ್ತಪಡಿಸಿದರು.
