ತೆಲಂಗಾಣ: ನ್ಯಾ. ಶಮೀಮ್‌ ಅಕ್ತರ್‌ ಆಯೋಗದ ಜಾತಿಗಣತಿ ವರದಿ ವಿಧಾನಸಭೆಯಲ್ಲಿ ಮಂಡನೆ

Date:

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಮೀಮ್‌ ಅಕ್ತರ್‌ ಒಳ ಮೀಸಲಾತಿ ಆಯೋಗ ಸಿದ್ಧಪಡಿಸಿರುವ ತೆಲಂಗಾಣ ಜಾತಿಗಣತಿ ವರದಿಯನ್ನು ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಂಡಿಸಲಾಗಿದೆ.

- Advertisement -

ವರದಿ ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ರೇವಂತ್ ರೆಡ್ಡಿ, “ಜನಗಣತಿಗಿಂತಲೂ ಕರಾರುವಾಕ್ಕಾಗಿ ಈ ಐತಿಹಾಸಿಕ ಸಮೀಕ್ಷೆ ನಡೆಸಲಾಗಿದೆ. ವರದಿ ದತ್ತಾಂಶಗಳನ್ನು ರಾಜ್ಯದಲ್ಲಿ ಕೈಗೊಳ್ಳುವ ವಿವಿಧ ಕಲ್ಯಾಣ ಯೋಜನೆಗಳಲ್ಲಿ ಬಳಸಿಕೊಳ್ಳಲಾಗುವುದು. ಈ ಮೂಲಕ ರಾಜ್ಯದಲ್ಲಿ ಸಾಮಾಜಿಕ-ರಾಜಕೀಯ ಬದಲಾವಣೆ ತರಲಾಗುವುದು’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ರಾಜ್ಯದ ಶೇ.56.33ರಷ್ಟು ಮಂದಿ ಹಿಂದುಳಿದ ವರ್ಗಗಳಿಗೆ ಸೇರಿದವರೆಂದು ತಿಳಿದುಬಂದಿದ್ದು, ರಾಜಕೀಯ, ಶೈಕ್ಷಣಿಕ, ಉದ್ಯೋಗ ಕ್ಷೇತ್ರಗಳಲ್ಲಿ ಈ ವರದಿಯನ್ನು ಬಳಸಿ ಅವರಿಗೆ ಪ್ರಯೋಜನ ಕಲ್ಪಿಸಲಾಗುತ್ತದೆ ಎಂದಿದ್ದಾರೆ. ಇದೇ ವೇಳೆ, ದೇಶಾದ್ಯಂತ ಜಾತಿಗಣತಿ ನಡೆಸುವಂತೆ ಕೇಂದ್ರಕ್ಕೆ ಆಗ್ರಹಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ಕಳೆದ ವರ್ಷದ (2024) ನವೆಂಬರ್ ಮತ್ತು ಡಿಸೆಂಬರ್‌ ತಿಂಗಳಲ್ಲಿ ನಡೆಸಿದ ಜಾತಿ ಜನಗಣತಿಯ ಪ್ರಕಾರ, ರಾಜ್ಯದ ಒಟ್ಟು ಜನಸಂಖ್ಯೆಯ ಶೇಖಡ 56.33ರಷ್ಟು ಹಿಂದುಳಿದ ಜಾತಿಗಳಿಗೆ ಸೇರಿದ ಜನರು ಇದ್ದಾರೆ.

ಹಿಂದುಳಿದ ಜಾತಿಗಳಲ್ಲಿ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯ ಜನರು ಒಳಗೊಂಡಿದ್ದಾರೆ.

ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಮತ್ತು ಜಾತಿ ಸಮೀಕ್ಷೆಯ ಪ್ರಕಾರ, ತೆಲಂಗಾಣದ ಜನಸಂಖ್ಯೆಯಲ್ಲಿ ಮುಸ್ಲಿಮರನ್ನು ಹೊರತುಪಡಿಸಿ ಶೇಕಡ 46.25ರಷ್ಟು ಹಿಂದುಳಿದ ಜಾತಿಯವರು ಇದ್ದಾರೆ. ಹಿಂದುಳಿದ ಮುಸ್ಲಿಮರ ಜನಸಂಖ್ಯೆ ಶೇಕಡ 10.08ರಷ್ಟಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿದ್ರಿಸುವ ಸಚಿವರು, ಪ್ರಶ್ನಿಸದ ಸಂಸದರು- ಕರ್ನಾಟಕದ ಹಿತ ಕಾಪಾಡುವವರು ಯಾರು?

ಜನಗಣತಿಯ ವರದಿಯ ಪ್ರಕಾರ ತೆಲಂಗಾಣದ ಜಾತಿವಾರು ಜನಸಂಖ್ಯೆಯಲ್ಲಿ ಪರಿಶಿಷ್ಟ ಜಾತಿಗಳು – 61,84,319 (17.43%),ಪರಿಶಿಷ್ಟ ಪಂಗಡಗಳು- 37,05,929 (10.45%), ಹಿಂದುಳಿದ ಜಾತಿಗಳು (ಮುಸ್ಲಿಮರನ್ನು ಹೊರತುಪಡಿಸಿ) – 1,64,09,179 (46.25%), ಹಿಂದುಳಿದ ಜಾತಿಯ ಮುಸ್ಲಿಮರು – 35,76,588 (10.08%), ಇತರೆ ಜಾತಿಯ ಮುಸ್ಲಿಮರು – 8,80,424 (2.48%), ಇತರೆ ಜಾತಿಗಳು (ಮುಸ್ಲಿಮರನ್ನು ಹೊರತುಪಡಿಸಿ) – 13.31%, ಮುಸ್ಲಿಮರು (ಒಟ್ಟು) – 12.56%, ಇತರೆ ಜಾತಿಗಳು (ಒಟ್ಟು) – 15.79% ಇದ್ದಾರೆ ಎಂದು ರೇವಂತ್‌ ರೆಡ್ಡಿ ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಕನಿಷ್ಠ 162 ಸಮುದಾಯಗಳನ್ನು ಹಿಂದುಳಿದ ಜಾತಿಗಳೆಂದು ವರ್ಗೀಕರಿಸಲಾಗಿದೆ. ಅವುಗಳನ್ನು ಎ, ಬಿ, ಸಿ, ಡಿ, ಇ ಎಂದು ಐದು ಗುಂಪುಗಳಾಗಿ ಉಪ ವರ್ಗೀಕರಣ ಮಾಡಲಾಗಿದೆ. ಇದರಲ್ಲಿ ಗುಂಪು ಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯವರನ್ನು ಒಳಗೊಂಡಿದೆ ಮತ್ತು ಗುಂಪು ಇ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಜಾತಿಯ ಮುಸ್ಲಿಮರನ್ನು ಒಳಗೊಂಡಿದೆ.

2023ರ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ ಪ್ರಮುಖ ಚುನಾವಣಾ ಭರವಸೆಗಳಲ್ಲಿ ಜಾತಿ ಸಮೀಕ್ಷೆ ಕೂಡ ಒಂದಾಗಿತ್ತು. ಶಿಕ್ಷಣ, ಉದ್ಯೋಗ ಮತ್ತು ಕಲ್ಯಾಣ ಯೋಜನೆಗಳಲ್ಲಿ ಹಿಂದುಳಿದಿರುವ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ವಿಸ್ತರಿಸುವುದಾಗಿಯೂ ಕಾಂಗ್ರೆಸ್ ಹೇಳಿತ್ತು.

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳ ಮೀಸಲಾತಿಯನ್ನು ಶೇಖಡ 23 ರಿಂದ ಶೇಕಡ 42ಕ್ಕೆ ಹೆಚ್ಚಿಸುವುದಾಗಿ ಮತ್ತು ಸರ್ಕಾರಿ ನಾಗರಿಕ ನಿರ್ಮಾಣ ಮತ್ತು ನಿರ್ವಹಣಾ ಒಪ್ಪಂದಗಳಲ್ಲಿ ಶೇಖಡ 42 ಹಿಂದುಳಿದ ಜಾತಿಗಳ ಮೀಸಲಾತಿಯನ್ನು ಜಾರಿಗೆ ತರುವುದಾಗಿಯೂ ಪಕ್ಷ ಭರವಸೆ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇನ್‌ಸ್ಟಾಗ್ರಾಮ್ ಚಾಟ್ ವಿವಾಹೇತರ ಸಂಬಂಧಕ್ಕೆ ಪುರಾವೆಯಲ್ಲ: ಅಲಹಾಬಾದ್ ಹೈಕೋರ್ಟ್

ಪತ್ನಿಯು ಮತ್ತೊಬ್ಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ನಡೆಸಿದ ಸಂಭಾಷಣೆಗಳ ಪ್ರಿಂಟ್‌ಔಟ್‌ಗಳನ್ನು ಮಾತ್ರವೇ ಆಧಾರವಾಗಿಟ್ಟುಕೊಂಡು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18 ಕೋಟಿಗೆ ಹರಾಜಾಯಿತು ಆತನ ಕಲಾಕೃತಿ!

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ...