ತೆಲಂಗಾಣದಲ್ಲಿ ಮೋದಿ : ಕಾರ್ಯಕ್ರಮದಿಂದ ದೂರ ಉಳಿದ ಕೆಸಿಆರ್‌

Date:

ಕೇಂದ್ರ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

14 ತಿಂಗಳಲ್ಲಿ 4 ಬಾರಿ ಮೋದಿ ಕಾರ್ಯಕ್ರಮಕ್ಕೆ ಗೈರಾದ ಕೆಸಿಆರ್‌

‌ಬಹುಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ತೆಲಂಗಾಣಕ್ಕೆ ಭೇಟಿ ನೀಡಿದ್ದಾರೆ. ಆದರೆ, ಮೋದಿ ಅವರನ್ನು ಸ್ವಾಗತಿಸಲು ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ (ಕೆ.ಚಂದ್ರಶೇಖರ್ ರಾವ್‌) ವಿಮಾನ ನಿಲ್ದಾಣಕ್ಕೆ ಬಂದಿಲ್ಲ. ಪ್ರಧಾನಿಗಳ ಕಾರ್ಯಕ್ರಮದಲ್ಲೂ ಅವರು ಭಾಗವಹಿಸುತ್ತಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕೇಂದ್ರದ 11, 360 ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳು ಮತ್ತು ಕಾಮಗಾರಿಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ‌ ನೆರವೇರಿಸಲಿದ್ದು, ಜೊತೆಗೆ ಸಿಖಂದ್ರಾಬಾದ್‌-ತಿರುಪತಿ ನಡುವೆ ಸಂಚರಿಸಲಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೂ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 11:30ರ ಸುಮಾರಿಗೆ ಬೇಗಂಪೇಟ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ತೆಲಂಗಾಣದ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್‌ ಮತ್ತು ಬಿಜೆಪಿಯ ತೆಲಂಗಾಣ ಘಟಕದ ರಾಜ್ಯಾಧ್ಯಕ್ಷ ಬಂಡಿ ಸಂಜಯ್‌ ಮುಂತಾದವರು ಸ್ವಾಗತಿಸಿದ್ದಾರೆ. ಶಿಷ್ಟಾಚಾರದಂತೆ ಪ್ರಧಾನಿಗಳನ್ನು ಸ್ವಾಗತಿಸಲು ಮತ್ತು ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಜ್ಯಪಾಲರು ಮುಖ್ಯಮಂತ್ರಿ ಕೆಸಿಆರ್‌ ಅವರಿಗೆ ಆಹ್ವಾನ ನೀಡಿದ್ದರು ಎನ್ನಲಾಗಿದೆ. ಆದರೆ, ಹಿಂದಿನಂತೆ ಈ ಬಾರಿಯೂ ಮೋದಿಯವರ ಕಾರ್ಯಕ್ರಮಗಳಿಂದ ಕೆಸಿಆರ್‌ ಅಂತರ ಕಾಯ್ದುಕೊಂಡಿದ್ದಾರೆ.

ಮೋದಿ ಅವರ ಕಾರ್ಯಕ್ರಮಗಳಿಗೆ ಕೆಸಿಆರ್‌ ಗೈರಾಗುತ್ತಿರುವುದು ಇದು ಮೊದಲೇನಲ್ಲ. ಕಳೆದ 14 ತಿಂಗಳುಗಳಲ್ಲಿ ಅವರು 4 ಬಾರಿ ಪ್ರಧಾನಿಗಳ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಕೆಸಿಆರ್‌, ತೆಲಂಗಾಣಕ್ಕೆ ಸೀಮಿತವಾಗಿದ್ದ ತಮ್ಮ ಪಕ್ಷವನ್ನು ರಾಷ್ಟ್ರೀಯ ಪಕ್ಷವನ್ನಾಗಿ ವಿಸ್ತರಿಸಿದ ಬೆನ್ನಲ್ಲೇ ಅವರ ಪುತ್ರಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರ ನಡೆಯನ್ನು ವಿರೋಧಿಸುತ್ತಲೇ ಬಂದಿರುವ ಕೆಸಿಆರ್‌ ತಮ್ಮ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ತಮ್ಮ ಮೇಲೆ ಅಸ್ತ್ರವನ್ನಾಗಿ ಪ್ರಯೋಗಿಸುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರು ಮೋದಿ ಭೇಟಿಯಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

Sanket
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಂದ್ರಬಾಬು ನಾಯ್ಡು ಜಾಮೀನು ಷರತ್ತು ಸಡಿಲಿಸಿದ ಸುಪ್ರೀಂ; ರ‍್ಯಾಲಿ, ಸಭೆಗಳಲ್ಲಿ ಭಾಗವಹಿಸಲು ಅನುಮತಿ

ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಹಗರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಷರತ್ತಾಗಿ ಸಾರ್ವಜನಿಕ...

ಗುಜರಾತ್ | ಹಿಂದೂ ದೇಶದಲ್ಲಿರಬೇಕಾದರೆ ಜೈ ಶ್ರೀರಾಮ್ ಎನ್ನಬೇಕು ಎಂದವನ ಬಂಧನ

ವ್ಯಕ್ತಿಯೊಬ್ಬ ಹಿಂದೂ ದೇಶದಲ್ಲಿರಬೇಕಾದರೆ ನೀನು ಜೈ ಶ್ರೀರಾಮ್ ಎನ್ನಬೇಕು ಎಂದ ವ್ಯಕ್ತಿಯೊಬ್ಬನನ್ನು...

ಮಲ ಬಾಚುವ ಮೃತ ಕಾರ್ಮಿಕನ ಪತ್ನಿಗೆ 30 ಲಕ್ಷ ರೂ. ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ

ಕೈಯಿಂದ ಮಲ ಬಾಚುವ ವೇಳೆ ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಮೃತಪಟ್ಟ ಪೌರ...