ರೇವಂತ್ ಅಮೆರಿಕ ಪ್ರವಾಸಕ್ಕೆ ತಡೆ: ‘ಮೋಶಾ’ ದ್ವೇಷ ರಾಜಕಾರಣ

Date:

ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರ ಉದ್ದೇಶಿತ ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ‘ರಾಜಕೀಯ ಅನುಮತಿ’ (Political Clearance) ನಿರಾಕರಿಸಿದೆ. ಕೇಂದ್ರದ ಈ ನಡೆಯನ್ನು ತೀವ್ರವಾಗಿ ಖಂಡಿಸಿರುವ ಮುಖ್ಯಮಂತ್ರಿಗಳು, “ಚುನಾವಣಾ ರಾಜಕೀಯವನ್ನು ಮೀರಿ ಯೋಚಿಸಿ” ಎಂದು ಕೇಂದ್ರಕ್ಕೆ ತಿರುಗೇಟು ನೀಡಿದ್ದಾರೆ. ಈ ನಡುವೆ, ಕೇಂದ್ರದ ಈ ನಿರ್ಧಾರದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ (ಮೋಶಾ) ಅವರ ಕೀಳುಮಟ್ಟದ ದ್ವೇಷ ರಾಜಕಾರಣ ಅಡಗಿದೆ ಎಂದು ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -

​ವೀಸಾ ಹಾಗೂ ರಾಜಕೀಯ ಅನುಮತಿ ನಿರಾಕರಣೆಯ ಕುರಿತು ನವದೆಹಲಿಯಲ್ಲಿ ಸ್ಪಷ್ಟನೆ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA), ಪ್ರವಾಸದ ಉದ್ದೇಶವು ಸ್ಥಾಪಿತ ನಿಯಮಗಳಿಗೆ ಅನುಗುಣವಾಗಿಲ್ಲ ಎಂದು ತಿಳಿಸಿದೆ. ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, “ಮುಖ್ಯಮಂತ್ರಿಗಳ ಕಚೇರಿಯ ಘನತೆ ಹಾಗೂ ಆ ಹುದ್ದೆಗೆ ಈ ಅಮೆರಿಕ ಪ್ರವಾಸದ ಕಾರ್ಯಕ್ರಮಗಳು ಸೂಕ್ತವಾಗಿರಲಿಲ್ಲ. ಹೀಗಾಗಿ ಅನುಮತಿ ನಿರಾಕರಿಸಲಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ. ಆದಾಗ್ಯೂ, ಅವರ 10 ದಿನಗಳ ಪ್ರವಾಸದ ಪೈಕಿ ಬ್ರಿಟನ್ (UK) ಭೇಟಿಗೆ ಮಾತ್ರ ಅನುಮತಿ ನೀಡಲಾಗಿತ್ತು ಎಂಬುದನ್ನು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

​ಪ್ರಸ್ತುತ ಬ್ರಿಟನ್ ಪ್ರವಾಸದಲ್ಲಿರುವ ರೇವಂತ್ ರೆಡ್ಡಿ, ಕೇಂದ್ರದ ನಿರ್ಧಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಪಿತೂರಿ ಎಂದು ಆರೋಪಿಸಿರುವ ಅವರು, ಯುವಜನರ ಅಭಿವೃದ್ಧಿ ಮತ್ತು ಶಿಕ್ಷಣದ ವಿಚಾರಗಳು ರಾಜಕೀಯಕ್ಕಿಂತ ಮಿಗಿಲಾದದ್ದು ಎಂದಿದ್ದಾರೆ. “ದೇಶದ ನೂತನ ಶಿಕ್ಷಣ ನೀತಿಯ ಭಾಗವಾಗಿ ಜಗತ್ತಿನ ಅತ್ಯುತ್ತಮ ಸಂಸ್ಥೆಗಳನ್ನು ತೆಲಂಗಾಣಕ್ಕೆ ತರುವುದು ನನ್ನ ಭೇಟಿಯ ಏಕೈಕ ಉದ್ದೇಶವಾಗಿತ್ತು, ಆದರೆ ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

​ ‘ಮೋಶಾ’ (ಮೋದಿ-ಶಾ) ಜೋಡಿಯ ವಿರುದ್ಧ ಪ್ರತಿಪಕ್ಷಗಳು ತೀವ್ರ ಆಕ್ರೋಶ ಹೊರಹಾಕಿವೆ. ಎನ್‌ಡಿಎಯೇತರ ರಾಜ್ಯಗಳ ಮುಖ್ಯಮಂತ್ರಿಗಳ ಜನಪ್ರಿಯತೆಯನ್ನು ಸಹಿಸಲಾಗದೆ, ರಾಜ್ಯದ ಅಭಿವೃದ್ಧಿಗೆ ಅಡ್ಡಿಯುಂಟು ಮಾಡುವ ಕೀಳುಮಟ್ಟದ ದ್ವೇಷದ ರಾಜಕಾರಣವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಯುವಜನರ ಉಜ್ವಲ ಭವಿಷ್ಯದ ಶೈಕ್ಷಣಿಕ ಒಪ್ಪಂದಗಳಿಗೆ ಅಡ್ಡಿಪಡಿಸುತ್ತಿರುವುದು ಈ ದ್ವೇಷ ರಾಜಕಾರಣದ ಪರಮಾವಧಿ ಎಂದು ಟೀಕಿಸಲಾಗಿದೆ.

​ರೇವಂತ್ ರೆಡ್ಡಿ ಅವರು ‘ತೆಲಂಗಾಣರೈಸಿಂಗ್’ (TelanganaRising) ನಿಯೋಗದೊಂದಿಗೆ ಅಮೆರಿಕದ ಬೋಸ್ಟನ್ ಮತ್ತು ನ್ಯೂಯಾರ್ಕ್‌ಗೆ ಭೇಟಿ ನೀಡಲು ಉದ್ದೇಶಿಸಿದ್ದರು. ಹಾರ್ವರ್ಡ್ ಮತ್ತು ಎಂಐಟಿಯಂತಹ (MIT) ವಿಶ್ವದ ಪ್ರಮುಖ ಶೈಕ್ಷಣಿಕ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಯೋಜನೆ ಇತ್ತು. “ನಮ್ಮ ಯುವಕರು ಶಿಕ್ಷಣ ಪಡೆಯಲು ಕೇವಲ ವಿದೇಶಕ್ಕೆ ಹೋಗುವ ಬದಲು, ಜಗತ್ತಿನ ಅತ್ಯುತ್ತಮ ಸಂಸ್ಥೆಗಳನ್ನೇ ಭಾರತಕ್ಕೆ ತರುವುದು ಹಾಗೂ ಸಾಮಾನ್ಯ ವಿದ್ಯಾರ್ಥಿಗೂ ಅಂತರರಾಷ್ಟ್ರೀಯ ಶಿಕ್ಷಣ ಒದಗಿಸುವುದು ನನ್ನ ಗುರಿಯಾಗಿತ್ತು” ಎಂದು ಸಿಎಂ ತಮ್ಮ ಪ್ರವಾಸದ ಮಹತ್ವವನ್ನು ವಿವರಿಸಿದ್ದಾರೆ.

​ತಮಗೆ ಖುದ್ದಾಗಿ ಅನುಮತಿ ದೊರೆಯದಿದ್ದರೂ, ರಾಜಕೀಯ ಅಡೆತಡೆಗಳನ್ನು ಲೆಕ್ಕಿಸದೆ ಶೈಕ್ಷಣಿಕ ಒಪ್ಪಂದಗಳನ್ನು ಮುಂದುವರಿಸುವಂತೆ ಸಿಎಂ ರೇವಂತ್ ರೆಡ್ಡಿ ತಮ್ಮ ರಾಜ್ಯದ ಅಧಿಕಾರಿಗಳ ನಿಯೋಗಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಂದಹಾಗೆ, ಪ್ರತಿಪಕ್ಷಗಳ ನಾಯಕರಿಗೆ ಕೇಂದ್ರ ಸರ್ಕಾರ ವಿದೇಶ ಪ್ರವಾಸದ ಅನುಮತಿ ನಿರಾಕರಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಮಮತಾ ಬ್ಯಾನರ್ಜಿ ಮತ್ತು ಅರವಿಂದ್ ಕೇಜ್ರಿವಾಲ್ ಅವರಿಗೂ ಇದೇ ರೀತಿ ತಡೆಹಿಡಿಯಲಾಗಿತ್ತು ಎಂಬುದು ಗಮನಾರ್ಹ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ: ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ

ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಯ ಆಶಯದೊಂದಿಗೆ 73ನೇ ಅಖಿಲ...

ದಕ್ಷಿಣ ಕನ್ನಡ | ‘ಋತು ತಾರೆ’ ಪ್ರಾಯೋಗಿಕ ಜಾರಿಗೆ ಸಿದ್ಧತೆ: ಆರೋಗ್ಯಾಧಿಕಾರಿ ಮಾಹಿತಿ

ಮಧ್ಯ ವಯಸ್ಕ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಋತುಬಂಧ ಸಮಸ್ಯೆಗಳಿಗೆ ಪೂರಕವಾಗಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ ಕಾರ್ಮಿಕರ ಬದುಕಿಗಿಲ್ಲ ಭದ್ರತೆ!

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ...