ತೆಲಂಗಾಣ: ಗೆಲುವಿನತ್ತ ಕೋಮುದ್ವೇಷ ಭಾಷಣಕಾರ ರಾಜಾ ಸಿಂಗ್‌

Date:

ಬಿಜೆಪಿಯಿಂದ ಉಚ್ಚಾಟಿತನಾಗಿ, ಮತ್ತೆ ಬಿಜೆಪಿಯ ಟಿಕೆಟ್ ಪಡೆದು ತೆಲಂಗಾಣದ ಗೋಶಾಮಹಲ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಾಸಕ ರಾಜಾ ಸಿಂಗ್‌ ಮತ್ತೊಮ್ಮೆ ಗೆಲುವು ಪಡೆಯುವತ್ತ ಮುನ್ನಡೆ ಸಾಧಿಸಿದ್ದಾರೆ.

- Advertisement -

13ನೇ ಸುತ್ತಿನ ಮತ ಎಣಿಕೆಯ ವೇಳೆಗೆ 25,000 ಮತಗಳ ಮುನ್ನಡೆಯನ್ನು ರಾಜಾ ಸಿಂಗ್ ಕಾಯ್ದುಕೊಂಡಿದ್ದಾರೆ. ಬಿಆರ್‌ಎಸ್ ಪಕ್ಷದ ನಂದಕಿಶೋರ್‌ ವ್ಯಾಸ್‌ ಎರಡನೇ ಸ್ಥಾನದಲ್ಲಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಪ್ರವಾದಿ ಮುಹಮ್ಮದ್ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ರಾಜಾ ಸಿಂಗ್ ಅವರನ್ನು 2022ರ ಆಗಸ್ಟ್‌ನಲ್ಲಿ ಅಮಾನತು ಮಾಡಲಾಗಿತ್ತು. ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿಯವರ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗಳನ್ನು ರಾಜಾ ಸಿಂಗ್ ಪುನರಾವರ್ತಿಸಿದ್ದರು. ಹೈದರಾಬಾದ್‌ನಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆಗಳು ಭುಗಿಲೆದ್ದ ನಂತರ ಎಚ್ಚೆತ್ತುಕೊಂಡ ಬಿಜೆಪಿ, ಶಾಸಕ ರಾಜಾ ಸಿಂಗ್ ವಿರುದ್ಧ ಕ್ರಮ ಜರುಗಿಸಿತ್ತು.

ನೂಪುರ್‌ ಶರ್ಮಾ ನೀಡಿದ ಹೇಳಿಕೆ ಅರಬ್‌ ರಾಷ್ಟ್ರಗಳಲ್ಲಿ ಭಾರೀ ಸದ್ದು ಮಾಡಿತ್ತು. ಭಾರತದೊಂದಿಗಿನ ವ್ಯಾಪಾರ ವಹಿವಾಟುಗಳಿಗೆ ಮಾರಕವಾಗುವಂತಹ ಬೆಳವಣಿಗೆಗಳು ಆಗಿದ್ದವು.

“ಪಕ್ಷಕ್ಕೆ ಅಗೌರವ ತರುವ ಯಾವುದೇ ಕೆಲಸವನ್ನು ನಾನು ಮಾಡುವುದಿಲ್ಲ” ಎಂದು ರಾಜಾಸಿಂಗ್ ಬರೆದುಕೊಟ್ಟ ಬಳಿಕವೇ ಟಿಕೆಟ್ ನೀಡಲಾಗಿತ್ತು. ಹೈದ್ರಾಬಾದ್‌ ಲೋಕಸಭಾ ವ್ಯಾಪ್ತಿಯಲ್ಲಿ ಬರುವ 9 ವಿಧಾನಸಭಾ ಕ್ಷೇತ್ರಗಳ ಪೈಕಿ ಗೋಶಾಮಹಲ್ ಕೂಡ ಒಂದು.

ಪಕ್ಷದಿಂದ ಅಮಾನತುಗೊಳಿಸಿದ ನಂತರವೂ ರಾಜಾ ಸಿಂಗ್‌ ಮುಸ್ಲಿಮರ ವಿರುದ್ಧ ಹಲವಾರು ಬಾರಿ ದ್ವೇಷದ ಭಾಷಣಗಳನ್ನು ಮಾಡಿದ್ದರು.

“ಬುರ್ಖಾ ಧರಿಸುವ ಮಹಿಳೆಯರೊಂದಿಗೆ ಸ್ನೇಹ ಬೆಳೆಸಬೇಡಿ” ಎಂದು ಹಿಂದೂ ಮಹಿಳೆಯರನ್ನು ಉದ್ದೇಶಿಸಿ ಹೇಳಿಕೆ ನೀಡಿದ್ದರು.

“ಹಣೆಯ ಮೇಲೆ ತಿಲಕವನ್ನು ಹೊಂದಿರುವವರು ನನ್ನ ಸಹೋದರರು. ತಿಲಕವನ್ನು ಧರಿಸುವ ಜನರೊಂದಿಗೆ ಮಾತ್ರ ನಾನು ಸ್ನೇಹ ಬೆಳೆಸುತ್ತೇನೆ. ನಮ್ಮ ಸಹೋದರಿಯರೇ, ಬುರ್ಖಾ ಧರಿಸಿದ ಮಹಿಳೆಯರೊಂದಿಗೆ ಸ್ನೇಹ ಬೆಳೆಸಬೇಡಿ” ಎಂದು ಪ್ರಚೋದಿಸಿದ್ದರು.

ಮುಸ್ಲಿಂ ಪುರುಷರಷ್ಟೇ ಅಲ್ಲ, ಮಹಿಳೆಯರಿಂದಲೂ ಹಿಂದೂಗಳು ಅಪಾಯವನ್ನು ಎದುರಿಸುತ್ತಿದ್ದಾರೆ. ಒಂದು ಕಾಲದಲ್ಲಿ ನಾವು ಅಫ್ತಾಬ್‌ನಿಂದ ಅಪಾಯವನ್ನು ಎದುರಿಸಿದ್ದೇವೆ, ಆದರೆ ಈಗ ಆಯೇಷಾರಿಂದಲೂ ಅಪಾಯವಿದೆ. ಅಫ್ತಾಬ್‌ಗೆ [ಹಿಂದೂ ಮಹಿಳೆಯರನ್ನು] ಪರಿಚಯಿಸಿದ್ದು ಇದೇ ಆಯೇಷಾ ಎಂದಿದ್ದರು.

ಮಾರ್ಚ್‌ ತಿಂಗಳು ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ರಾಜಾ ಸಿಂಗ್  ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದರು. 2026ರ ವೇಳೆಗೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಲಾಗುವುದು ಎಂದು ತಿಳಿಸಿದ್ದರು.

ಮಹಾರಾಷ್ಟ್ರದ ಔರಂಗಾಬಾದ್ ನಗರಕ್ಕೆ ಛತ್ರಪತಿ ಸಂಭಾಜಿನಗರ ಎಂದು ಮರುನಾಮಕರಣ ಮಾಡುವುದನ್ನು ಬೆಂಬಲಿಸಲು ಆಯೋಜಿಸಲಾಗಿದ್ದ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಜಾ ಸಿಂಗ್‌, “ಲವ್ ಜಿಹಾದ್ ಪ್ರಕರಣಗಳು ಕಂಡುಬಂದರೆ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದರು.

ಭಾರತದಲ್ಲಿ 100 ಕೋಟಿ ಹಿಂದೂಗಳಿದ್ದಾರೆ. ಹಿಂದೂಗಳು ಜಿಹಾದ್ ಮಾಡಲು ಪ್ರಾರಂಭಿಸಿದರೆ, ನಿಮಗೆ [ಮುಸ್ಲಿಮರಿಗೆ] ಮದುವೆಯಾಗಲು ಹೆಣ್ಣುಗಳು ಸಿಗುವುದಿಲ್ಲ ಎಂದು ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದರು.

ಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ ಅವರಿಗೆ ನಿಂದನೀಯ ಪದಗಳನ್ನು ಬಳಸಿದ್ದರು. ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕರನ್ನು ನಾಯಿಗಳಿಗೆ ಹೋಲಿಸಿದ್ದರು.

ಮಹಾತ್ಮ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯ ಭಾವಚಿತ್ರ ಪ್ರದರ್ಶನ ಮತ್ತು ಅಖಂಡ ಭಾರತ ನಿರ್ಮಾಣಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ರಾಜಾ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...