ತೆಲಂಗಾಣ ಚುನಾವಣೆ | ಬಿಜೆಪಿ ಮೊದಲ ಪಟ್ಟಿ ಪ್ರಕಟ; 52 ಅಭ್ಯರ್ಥಿಗಳು ಘೋಷಣೆ

Date:

ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 52 ಅಭ್ಯರ್ಥಿಗಳನ್ನು ಘೋಷಿಸಿದ್ದು, ಅದರಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸಂಸದ ಬಂಡಿ ಸಂಜಯ್ ಕುಮಾರ್ ಸೇರಿದಂತೆ ಮೂವರು (ಧರ್ಮಪುರಿ ಅರವಿಂದ್ ಮತ್ತು ಸೋಯಮ್ ಬಾಪು ರಾವ್) ಸಂಸದರು ಕಣಕ್ಕಿಳಿದಿದ್ದಾರೆ. ಕ್ರಮವಾಗಿ ಕರೀಂನಗರ, ಕೊರಟ್ಲಾ ಮತ್ತು ಬೋತ್ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಮೂವರು ಸ್ಪರ್ಧಿಸಲಿದ್ದಾರೆ.

- Advertisement -

ಪ್ರವಾದಿ ವಿರುದ್ಧದ ಹೇಳಿಕೆ ನೀಡಿ ಕಳೆದ ವರ್ಷ ಅಮಾನತುಗೊಂಡಿದ್ದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್‌ ಅವರ ಅಮಾನತನ್ನು ಬಿಜೆಪಿ ಹಿಂಪಡೆದಿದೆ. ಅವರಿಗೆ ಗೋಶಾಮಹಲ್ ಕ್ಷೇತ್ರದ ಟಿಕೆಟ್ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಿಜೆಪಿಯ ರಾಜ್ಯ ಚುನಾವಣಾ ಸಮಿತಿ ಮುಖ್ಯಸ್ಥ, ಶಾಸಕ ಈಟೆಲ ರಾಜೇಂದರ್ ಅವರು ತಮ್ಮ ಹಾಲಿ ಕ್ಷೇತ್ರ ಹುಜೂರಾಬಾದ್ ಮತ್ತು ಗಜ್ವೇಲ್‌ನಿಂದ ಕಣಕ್ಕಿಳಿದಿದ್ದಾರೆ. ರಾಜೇಂದರ್ ಅವರು ಗಜ್ವೇಲ್‌ನಲ್ಲಿ ಮುಖ್ಯಮಂತ್ರಿ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್ ಅವರನ್ನು ಎದುರಿಸಲಿದ್ದಾರೆ. ಕೆಸಿಆರ್ ಕೂಡ ಮತ್ತೊಂದು ಕ್ಷೇತ್ರ ಕಾಮರೆಡ್ಡಿಯಿಂದ ಸ್ಪರ್ಧಿಸುತ್ತಿದ್ದಾರೆ.

ಬಂಡಿ ಸಂಜಯ್ ಕುಮಾರ್ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಕರೀಂನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಬಳಿಕ, 019ರ ಲೋಕಸಭಾ ಚುನಾವಣೆಯಲ್ಲಿ ಕರೀಂನಗರ ಲೋಕಸಭಾ ಕ್ಷೇತ್ರದಿಂದ ಗೆದ್ದು, ಲೋಕಸಭೆ ಪ್ರವೇಶಿಸಿದ್ದರು..

ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹನ್ನೆರಡು ಮಹಿಳಾ ಅಭ್ಯರ್ಥಿಗಳಿದ್ದಾರೆ. ಅವರಲ್ಲಿ ಬೆಳ್ಳಂಪಳ್ಳಿಯಿಂದ ಅಮರಜುಲ ಶ್ರೀದೇವಿ (ಎಸ್‌ಸಿ), ಜುಕ್ಕಲ್‌ನಿಂದ ಟಿ ಅರುಣಾ ತಾರಾ (ಎಸ್‌ಸಿ), ಬಾಳಕೊಂಡದಿಂದ ಅನ್ನಪೂರ್ಣಮ್ಮ ಆಲೇಟಿ, ಜಗ್ತಿಯಾಲ್‌ನಿಂದ ಬೋಗ ಶ್ರಾವಣಿ, ರಾಮಗುಂಡೆಂನಿಂದ ಕಂದುಲ ಸಂಧ್ಯಾ ರಾಣಿ, ಚೊಪ್ಪದಂಡಿಯಿಂದ ಬೋಡಿಗ ಶೋಭಾ (ಎಸ್‌ಸಿ), ಸಿರ್ಸಿಲ್ಲಾ, ಮೇಘಾದಿಂದ ರಾಣಿ ರುದ್ರಮ ರೆಡ್ಡಿ ಸೇರಿದ್ದಾರೆ. ಚಾರಿಮಿನಾರ್‌ನಿಂದ ರಾಣಿ, ನಾಗಾರ್ಜುನ ಸಾಗರದಿಂದ ಕಂಕನಾಳ ನಿವೇದಿತಾ ರೆಡ್ಡಿ, ಡೋರ್ನಕಲ್ (ಎಸ್‌ಟಿ) ನಿಂದ ಭೂಕ್ಯ ಸಂಗೀತಾ (ಎಸ್‌ಟಿ), ವಾರಂಗಲ್ ಪಶ್ಚಿಮದಿಂದ ರಾವ್ ಪದ್ಮ, ಮತ್ತು ಭೂಪಾಲಪಲ್ಲೆಯಿಂದ ಚಂದುಪಟ್ಲ ಕೀರ್ತಿ ರೆಡ್ಡಿ ಕಣಕ್ಕಿಳಿದಿದ್ದಾರೆ.

ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಪ್ರಾಮುಖ್ಯತೆ ನೀಡಿದೆ. ಈ 52 ಅಭ್ಯರ್ಥಿಗಳಲ್ಲಿ ಇಪ್ಪತ್ತು ಮಂದಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿದ್ದಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

“ಎಲ್ಲಾ ಮಹಿಳಾ ಅಭ್ಯರ್ಥಿಗಳು ಪಕ್ಷದ ದೀರ್ಘಕಾಲದ ಕಾರ್ಯಕರ್ತರು,” ಪಕ್ಷ ಹೇಳಿಕೊಂಡಿದೆ.

201 ರ ವಿಧಾನಸಭಾ ಚುನಾವಣೆಯಲ್ಲಿ, ತೆಲಂಗಾಣದ ಒಟ್ಟು 119 ಸ್ಥಾನಗಳಲ್ಲಿ ಬಿಜೆಪಿ ಕೇವಲ ಒಂದು ಸ್ಥಾನವನ್ನು ಮಾತ್ರ ಗೆದ್ದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...