ತೆಲಂಗಾಣ: ನರ್ಸರಿಯಿಂದ 12ನೇ ತರಗತಿವರೆಗೆ ಬಿಸಿಯೂಟ ಯೋಜನೆ ಜಾರಿ

Date:

ತೆಲಂಗಾಣ ಸರ್ಕಾರವು ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿನ ಅಪೌಷ್ಟಿಕತೆ ನಿವಾರಿಸುವ ಹಾಗೂ ತರಗತಿಗಳಲ್ಲಿ ಹಾಜರಾತಿ ಹೆಚ್ಚಿಸುವ ಉದ್ದೇಶದಿಂದ ಮಹತ್ವದ ಹೆಜ್ಜೆಯಿಟ್ಟಿದೆ. 2026-27ನೇ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ, ನರ್ಸರಿಯಿಂದ 12ನೇ ತರಗತಿಯವರೆಗಿನ (ಪದವಿಪೂರ್ವ ಕಾಲೇಜು) ಎಲ್ಲಾ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಉಪಾಹಾರ ಮತ್ತು ಮಧ್ಯಾಹ್ನದ ಊಟದ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಬೃಹತ್ ಯೋಜನೆಯಿಂದ ರಾಜ್ಯದಾದ್ಯಂತ ಸುಮಾರು 29 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

- Advertisement -

ವಿದ್ಯಾರ್ಥಿಗಳ ಆರೋಗ್ಯ ಮತ್ತು ಸಮಗ್ರ ಬೆಳವಣಿಗೆಯ ದೃಷ್ಟಿಯಿಂದ ಅತ್ಯಂತ ಪೌಷ್ಟಿಕಾಂಶಯುಕ್ತ ಮೆನುವನ್ನು ಸಿದ್ಧಪಡಿಸಲಾಗಿದೆ. ವಾರದ ಆರು ದಿನಗಳ ಕಾಲ ವಿವಿಧ ಬಗೆಯ ಉಪಾಹಾರ ನೀಡಲಾಗುತ್ತದೆ. ಈ ಪಟ್ಟಿಯಲ್ಲಿ ದೋಸೆ, ಪೂರಿ, ಚಪಾತಿ, ಪೊಂಗಲ್, ಬೋಂಡಾ ಹಾಗೂ ಸಿರಿಧಾನ್ಯಗಳಿಂದ ತಯಾರಿಸಿದ ಇಡ್ಲಿ ಮತ್ತು ಉಪ್ಪಿಟ್ಟು ಸೇರಿವೆ. ಇದರ ಜೊತೆಗೆ, ವಿದ್ಯಾರ್ಥಿಗಳಿಗೆ ವಾರದಲ್ಲಿ ಮೂರು ದಿನ ಬಿಸಿ ಹಾಲು ಮತ್ತು ಉಳಿದ ಮೂರು ದಿನ ರಾಗಿ ಜಾವಾ (ಮಾಲ್ಟ್) ನೀಡಲು ನಿರ್ಧರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಇದನ್ನು ಓದಿದ್ದೀರಾ? ‘ಸಿಎಂ ಪ್ರವಾಸ ನಾವು ನಿಯಂತ್ರಿಸಬೇಕೆ’: ವಿಜಯ್ ಕರೂರು ಭೇಟಿಗೆ ತಡೆ ಕೋರಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ಈ ಯೋಜನೆಯನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುತ್ತಿದ್ದು, ಮೊದಲ ಹಂತದಲ್ಲಿ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳು ಸೇರಿದಂತೆ ಒಟ್ಟು 1,300ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಲ್ಲಿ ಇದು ಆರಂಭವಾಗಿದೆ. ಕೇಂದ್ರೀಕೃತ ಅಡುಗೆಮನೆಗಳ ಮೂಲಕ ಶುಚಿಯಾದ ಆಹಾರ ತಯಾರಿಸಿ, ಸಮಯಕ್ಕೆ ಸರಿಯಾಗಿ ವಿತರಿಸುವ ಸಂಪೂರ್ಣ ಜವಾಬ್ದಾರಿಯನ್ನು ‘ಹರೇ ಕೃಷ್ಣ ಮೂವ್‌ಮೆಂಟ್ ಚಾರಿಟೇಬಲ್ ಟ್ರಸ್ಟ್’ ಮತ್ತು ‘ಮನ್ನಾ ಟ್ರಸ್ಟ್’ ಸಂಸ್ಥೆಗಳಿಗೆ ವಹಿಸಲಾಗಿದೆ.

ಮುಖ್ಯವಾಗಿ ಗ್ರಾಮೀಣ ಭಾಗದಿಂದ ಮತ್ತು ಬಹಳ ದೂರದಿಂದ ಪ್ರಯಾಣಿಸಿ ಬರುವ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವುದು, ತರಗತಿಯಲ್ಲಿ ಅವರ ಏಕಾಗ್ರತೆ ಹೆಚ್ಚಿಸುವುದು ಹಾಗೂ ಶಾಲೆಯಿಂದ ಹೊರಗುಳಿಯುವ ಪ್ರಮಾಣವನ್ನು ಗಣನೀಯವಾಗಿ ತಡೆಯುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಗಾಗಿ ರಾಜ್ಯ ಸರ್ಕಾರವು ಭಾರಿ ಮೊತ್ತದ ಅನುದಾನ ಮೀಸಲಿಟ್ಟಿದ್ದು, ಕೇವಲ ಪದವಿಪೂರ್ವ ವಿದ್ಯಾರ್ಥಿಗಳ ಉಪಾಹಾರ ಮತ್ತು ಊಟದ ಯೋಜನೆಗಾಗಿಯೇ ವಾರ್ಷಿಕ ಅಂದಾಜು 180 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ. ಆ ಮೂಲಕ ಶಿಕ್ಷಣದ ಜೊತೆಗೆ ಆರೋಗ್ಯವನ್ನೂ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕತ್ತಲಲ್ಲಿ ಅಡ್ಜಸ್ಟ್‌ಮೆಂಟ್ ಮಾಡಿಕೊಳ್ಳುವ ರಾಜಕಾರಣಿ ನಾನಲ್ಲ: ವಿಜಯೇಂದ್ರಗೆ ಜನಾರ್ದನ ರೆಡ್ಡಿ ತಿರುಗೇಟು

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೂತನ ಸರ್ಕಾರಿ ನಿವಾಸದ ಗೃಹಪ್ರವೇಶ ಔತಣಕೂಟದಲ್ಲಿ...

ಗದಗ | ಕೃಷಿ ಮೌಲ್ಯವರ್ಧನೆ, ಮಾರುಕಟ್ಟೆ ಜಾಲ ವಿಸ್ತರಣೆ ಇಂದಿನ ಅಗತ್ಯ: ಈಶ್ವರ ಖಂಡ್ರೆ

ಕೃಷಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಲಕ್ಷಾಂತರ ಕುಟುಂಬಗಳ ಜೀವನೋಪಾಯಕ್ಕೆ ಆಧಾರವಾಗಿದೆ. ದೇಶದ...

ವೋಟ್ ಇಲ್ಲದಿದ್ದರೆ ಲೈಟೂ ಇಲ್ಲ; ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋತ ಬೆನ್ನಲ್ಲೇ ಗ್ರಾಮದ ಬೀದಿ ದೀಪಗಳು ಆಫ್!

ಪಂಚಾಯತ್ ಸಮಿತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರಾಭವಗೊಂಡ ಬೆನ್ನಲ್ಲೇ, ಚುನಾವಣೆಗೂ ಮುನ್ನ...

ಬರ ಹಿನ್ನೆಲೆ; ವಿಬಿ-ಜಿ ರಾಮ್‌ಜಿ ಯೋಜನೆಯಡಿ 175 ದಿನಗಳ ಕೆಲಸಕ್ಕೆ ಪತ್ರ: ಈಶ್ವರ ಖಂಡ್ರೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರಗಾಲ ಆವರಿಸಿದ್ದು, "ವಿಕಸಿತ ಭಾರತ - ಗ್ಯಾರಂಟಿ...