ತೆಲಂಗಾಣ | ಫೋನ್ ಕದ್ದಾಲಿಕೆ ಪ್ರಕರಣ: ಗುಪ್ತಚರ ಬ್ಯೂರೋದ ಮಾಜಿ ಮುಖ್ಯಸ್ಥ ಪ್ರಮುಖ ಆರೋಪಿ!

Date:

ಅಕ್ರಮ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ರಾಜ್ಯ ಗುಪ್ತಚರ ಬ್ಯೂರೋದ ಮಾಜಿ ಮುಖ್ಯಸ್ಥ ಟಿ ಪ್ರಭಾಕರ್ ರಾವ್ ಅವರನ್ನು ಪ್ರಮುಖ ಆರೋಪಿ ಎಂದು ಗುರುತಿಸಿದ್ದು, ಪರಾರಿಯಾಗಿರುವ ರಾವ್ ಹೆಸರಿನಲ್ಲಿ ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಆಡಳಿತಾವಧಿಯಲ್ಲಿ ವಿಶೇಷ ಗುಪ್ತಚರ ಬ್ಯೂರೋ ಮುಖ್ಯಸ್ಥರಾಗಿದ್ದ ರಾವ್ ಅವರು ಅಮೆರಿಕಕ್ಕೆ ಪರಾರಿಯಾಗಿದ್ದಾರೆಂದು ವರದಿಯಾಗಿದೆ.

ಮಾಜಿ ಗುಪ್ತಚರ ಮುಖ್ಯಸ್ಥರು ಹಿಂದಿನ ಆಡಳಿತದ ಅವಧಿಯಲ್ಲಿ ಫೋನ್‌ಗಳನ್ನು ಅಕ್ರಮವಾಗಿ ಟ್ಯಾಪ್ ಮಾಡಲು ಆದೇಶಿಸಿದ್ದರೆಂದು ಆರೋಪಿಸಲಾಗಿದೆ. ರಾವ್ ಅವರಲ್ಲದೆ, ಆಯುಕ್ತರ ಕಾರ್ಯಪಡೆಯ (ಹೈದರಾಬಾದ್ ಪೊಲೀಸರ ಒಂದು ವಿಭಾಗ) ಆಗಿನ ಉಪ ಪೊಲೀಸ್ ಆಯುಕ್ತ ಪಿ ರಾಧಾಕೃಷ್ಣ ಮತ್ತು ತೆಲುಗು ಟಿವಿ ಚಾನೆಲ್‌ನ ಹಿರಿಯ ಕಾರ್ಯ ನಿರ್ವಾಹಕರ ವಿರುದ್ಧವೂ ಪೊಲೀಸರು ನೋಟಿಸ್ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಕೆಲವು ಕಂಪ್ಯೂಟರ್ ವ್ಯವಸ್ಥೆಗಳು ಮತ್ತು ಅಧಿಕೃತ ಡೇಟಾವನ್ನು ನಾಶಪಡಿಸಿದ ಆರೋಪದ ಮೇಲೆ ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಹೈದರಾಬಾದ್ ಪೊಲೀಸರು ಶನಿವಾರ ಬಂಧಿಸಿದ್ದರು.

ಈ ಸುದ್ದಿ ಓದಿದ್ದೀರಾ? ಹೈದರಾಬಾದ್ | ಫೋನ್ ಕದ್ದಾಲಿಕೆ, ಡೇಟಾ ನಾಶ ಪ್ರಕರಣ; ಮತ್ತಿಬ್ಬರು ಪೊಲೀಸರ ಬಂಧನ

ಈ ಹಿಂದೆ ವಿಶೇಷ ಗುಪ್ತಚರ ಬ್ಯೂರೋ (ಎಸ್ಐಬಿ) ಮತ್ತು ಗುಪ್ತಚರ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕೆಲಸ ಮಾಡಿದ್ದ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ತಿರುಪತ್ತಣ್ಣ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್ ಭುಜಂಗ ರಾವ್ ಅವರನ್ನು ಭಾನುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ...

ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...

ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 6 ನವಜಾತ ಶಿಶುಗಳು ಸಾವು

ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 6 ನವಜಾತ...