ತೆಲಂಗಾಣ | ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಪ್ರಕರಣ; ಆರೋಪಿ ನಾಪತ್ತೆ

Date:

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ (25) ವಿರುದ್ಧ ಹೈದರಾಬಾದ್‌ನ ಪೆಟ್ ಬಶೀರಾಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ಭಗೀರತ್ ನಾಪತ್ತೆಯಾಗಿದ್ದಾರೆ. ಆತನಿಗಾಗಿ ಶೋಧ ನಡೆಯುತ್ತಿದೆ. ಈ ಪ್ರಕರಣ ತೆಲಂಗಾಣದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

- Advertisement -

17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಡಿ ಭಗೀರತ್ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯ ತಾಯಿ ಮೇ 8ರಂದು ಹೈದರಾಬಾದ್‌ನ ಪೆಟ್ ಬಶೀರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಆರೋಪಿಯು 2025ರ ಜೂನ್‌ನಿಂದ ಬಾಲಕಿಯೊಂದಿಗೆ ಸಂಬಂಧ ಹೊಂದಿದ್ದ. ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ತಮ್ಮ ಕುಟುಂಬದ ಫಾರ್ಮ್‌ಹೌಸ್‌ಗಳಿಗೆ ಕರೆದೊಯ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸದ್ದಾನೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಲ್ಲದೆ, ಬಾಲಕಿಗೆ ಮದ್ಯಪಾನ ಮಾಡುವಂತೆಯೂ ಆರೋಪಿ ಒತ್ತಾಯಿಸಿದ್ದನೆಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.

ತನ್ನ ವಿರುದ್ಧದ ಆರೋಪವನ್ನು ಆರೋಪಿ ಭಗೀರತ್ ತಿರಸ್ಕರಿಸಿದ್ದಾರೆ. ತನ್ನನ್ನು ಬಾಲಕಿಯ ಕುಟುಂಬ ಬ್ಲಾಕ್‌ಮೇಲ್ ಮಾಡುತ್ತಿದೆ. 5 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ. ನನ್ನ ವಿರುದ್ಧ ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಆರೋಪಿ ಪ್ರತಿಪಾದಿಸಿದ್ದಾರೆ. ಆತನ ಪರವಾಗಿ ಆತನ ಸಹಚರರು ಕರೀಮ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

ಅಲ್ಲದೆ, ಆರೋಪಿ ನಾಪತ್ತೆಯಾಗಿದ್ದು, ಪ್ರಕರಣ ದಾಖಲಾಗಿ ಐದಾರು ದಿನಗಳು ಕಳೆದರೂ ಪೊಲೀಸರ ಎದುರು ಆರೋಪಿ ಹಾಜರಾಗಿಲ್ಲ. ಮೇ 13ರ ಮಧ್ಯಾಹ್ನ 2ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಆತನಿಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ. ಆದರೆ, ಆತ ಪೊಲೀಸ್ ವಿಚಾರಣೆಗೆ ಹಾಜರಾಗಿಲ್ಲ. ಆತನ ಮೊಬೈಲ್ ಫೋನ್‌ ಸ್ವಚ್‌ ಆಫ್‌ ಆಗಿದೆ. ಆತನನ್ನು ಪತ್ತೆ ಹಚ್ಚಲು ಹುಡುಕಾಟ ನಡೆಯುತ್ತಿದೆ. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ.

ಈ ಲೇಖನ ಓದಿದ್ದೀರಾ?: ಅನುದಾನ ಬೇಕಂದ್ರೆ ಬಿಜೆಪಿ ಸೇರಬೇಕಾ; ದಕ್ಷಿಣದ ರಾಜ್ಯಗಳಿಗೆ ಮೋದಿ ಕೊಟ್ರಾ ಎಚ್ಚರಿಕೆ?

ಈ ನಡುವೆ, ಆರೋಪಿ ಭಗೀರತ್ ನಿರೀಕ್ಷಣಾ ಜಾಮೀನಿಗಾಗಿ ತೆಲಂಗಾಣ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಮೇ 14ರಂದು ನಡೆಯಲಿದೆ.

ಈ ಪ್ರಕರಣವು ತೆಲಂಗಾಣ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ತನ್ನ ಮಗನ ವಿರುದ್ಧದ ಪ್ರಕರಣವನ್ನು ‘ರಾಜಕೀಯ ಷಡ್ಯಂತ್ರ’ವೆಂದು ಬಂಡಿ ಸಂಜಯ್ ಹೇಳಿದ್ದಾರೆ. ಆದಾಗ್ಯೂ, ಅವರ ಪಕ್ಷ ಬಿಜೆಪಿ ಈ ವಿಷಯದಿಂದ ಅಂತರ ಕಾಯ್ದುಕೊಂಡಿದೆ. ವಿರೋಧ ಪಕ್ಷಗಳು ಮತ್ತು ಮಹಿಳಾ ಸಂಘಟನೆಗಳು ತ್ವರಿತ ಕ್ರಮ ಮತ್ತು ಆರೋಪಿಯ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...