ತೆಲಂಗಾಣ | ಔಷಧ ಘಟಕದಲ್ಲಿ ರಿಯಾಕ್ಟರ್ ಸ್ಫೋಟ; 7 ಮಂದಿ ಸಾವು

Date:

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಎಸ್‌ಬಿ ಆರ್ಗಾನಿಕ್ಸ್‌ ಲಿಮಿಟೆಡ್‌ (ಔಷಧ ತಯಾರಿಕಾ ಘಟಕ) ನಲ್ಲಿ ಬುಧವಾರ ಮೂರು ರಿಯಾಕ್ಟರ್‌ಗಳು ಸ್ಪೋಟಗೊಂಡಿದೆ. ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

ರಿಯಾಕ್ಟರ್‌ಗಳು ಸ್ಫೋಟಗೊಂಡ ನಂತರ ಬೆಂಕಿ ಅವಘಡದಲ್ಲಿ ಪ್ಲಾಂಟ್ ಡೈರೆಕ್ಟರ್ ರವಿ ಶರ್ಮಾ ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತ ರವಿ ಮತ್ತು ಆರು ಜನ ಕಾರ್ಮಿಕರು ಬಿಹಾರ ಮೂಲದವರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕನಿಷ್ಠ30 ಕಾರ್ಮಿಕರು ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ. ಗಾಯಗೊಂಡಿದ್ದ ಕಾರ್ಮಿಕರು ಸಹಾಯಕ್ಕಾಗಿ ಕಿರುಚಿ, ಅಳಲು ಪ್ರಾರಂಭಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಹತ್ನೂರು ಮಂಡಲದ ಚಂದಾಪುರ ಗ್ರಾಮದಲ್ಲಿ ಬೃಹತ್ ಔಷಧ ತಯಾರಿಕಾ ಘಟಕವಿದೆ. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಔಷಧ ಘಟಕದಲ್ಲಿರುವ ಮೂರು ರಿಯಾಕ್ಟರ್‌ಗಳು ಸ್ಪೋಟಗೊಂಡ ಬೆಂಕಿ ಅನಾಹುತ ಸಂಭವಿಸಿದೆ. ಈ ವೇಳೆ, ಸ್ಥಳದಲ್ಲಿ 60 ಕಾರ್ಮಿಕರಲ್ಲಿ ಸುಮಾರು 30 ಮಂದಿ ಫಾರ್ಮಾ ಕಂಪನಿಯ ಮೂರು ರಿಯಾಕ್ಟರ್‌ಗಳ ಬಳಿ ಕೆಲಸ ಮಾಡುತ್ತಿದ್ದರು. ಮೃತ ರವಿ ಅವರು ರಿಯಾಕ್ಟರ್ ಒಂದರಲ್ಲಿ ಔಷಧ ತಯಾರಿಕೆಯ ಬ್ಯಾಚ್ ಅನ್ನು ತೆರವುಗೊಳಿಸಲು ಕೆಲಸಗಾರರ ಮೇಲೆ ನಿಗಾ ಇಡುತ್ತಿದ್ದರು. ರಿಯಾಕ್ಟರ್‌ಗಳು ಒಂದೊಂದಾಗಿ ಸ್ಫೋಟಗೊಳ್ಳುತ್ತಿದ್ದಂತೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಆವರಣದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಸಂತ್ರಸ್ತರನ್ನು ಗುರುತಿಸಲು ಕಾರ್ಮಿಕರು ಹರಸಾಹಸ ಪಡಬೇಕಾಯಿತು. ಕೆಲವು ಕಾರ್ಮಿಕರು ಕಾರ್ಖಾನೆಯಿಂದ ಓಡಿಹೋದರು. ಆರಂಭದಲ್ಲಿ, ಅಪಘಾತವನ್ನು ಗಮನಿಸಿದ ಸ್ಥಳೀಯರು ಆವರಣಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಅಪರಿಚಿತರೊಬ್ಬರು ಕರೆ ಮಾಡಿ ಮಾಹಿತಿ ನೀಡಿದ ಮೇರೆಗೆ ಪೊಲೀಸರು ಮತ್ತು ಅಗ್ನಿಶಾಮಕ ಸುರಕ್ಷತಾ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದರು.

ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳದಿಂದ ನಾಲ್ಕು ಮೃತದೇಹಗಳನ್ನು ಹೊರತೆಗೆದು ಸಂಗಾರೆಡ್ಡಿ ಏರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಅಧಿಕಾರಿಗಳ ಪ್ರಕಾರ, ನಿರ್ವಹಣಾ ಉಸ್ತುವಾರಿಗಳಾದ ಪರ್ಲಿ ಸುಬ್ರಹ್ಮಣ್ಯಂ ಮತ್ತು ಸುರೇಶ್ ಪಾಲ್ ಅವರನ್ನು ಇನ್ನೂ ಗುರುತಿಸಬೇಕಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪುರುಷ ಸಹೋದ್ಯೋಗಿಯೊಂದಿಗೆ ಮಾತನಾಡಿದ್ದಕ್ಕೆ ಹೆಂಡತಿಯ ಮೇಲೆ ಹಲ್ಲೆ ನಡೆಸಿದ ಪತಿ

ಸಂಗಾರೆಡ್ಡಿ ಜಿಲ್ಲಾಧಿಕಾರಿ ವಲ್ಲೂರು ಕ್ರಾಂತಿ ಮಾಧ್ಯಮಗಳಿಗೆ ಘಟನೆ ಬಗ್ಗೆ ಮಾಹಿತಿ ನೀಡಿದರು. ಅಲ್ಲದೇ, ಘಟನಾ ಸ್ಥಳಕ್ಕೆ ಸಚಿವರಾದ ಕೊಂಡ ಸುರೇಖಾ, ದಾಮೋದರ ರಾಜನರಸಿಂಹ ಭೇಟಿ ನೀಡಿದ್ದಾರೆ. ಬಳಿಕ, ರಾಜನರಸಿಂಹ ಆಸ್ಪತ್ರೆಗೆ ತೆರಳಿ ಸಂತ್ರಸ್ತರು ಹಾಗೂ ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿ, ಗಾಯಾಳುಗಳಿಗೆ ಸರ್ಕಾರ ಉತ್ತಮ ಚಿಕಿತ್ಸೆ ನೀಡಲಿದೆ ಎಂದರು.

ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಕಾರ್ಮಿಕರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಗಾಯಗೊಂಡ ಸಂತ್ರಸ್ತರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಿಯಾಕ್ಟರ್‌ಗಳ ಸ್ಫೋಟದಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗೆ ವಿವರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...