ತೆಲಂಗಾಣ | ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಶಾಲೆ ಮೇಲೆ ದಾಳಿ

Date:

ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಾಂಶುಪಾಲರು ಪ್ರಶ್ನಿಸಿದ ನಂತರ ಗುಪೊಂದು ಶಾಲೆಯ ಮೇಲೆ ದಾಳಿ ಮಾಡಿ ಇಬ್ಬರು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ತೆಲಂಗಾಣ ದ ಮಂಚರಿಯಲ್‌ ಜಿಲ್ಲೆಯ ಮಿಷನರಿ ಶಾಲೆಯಲ್ಲಿ ಎರಡು ದಿನಗಳ ಹಿಂದೆ(ಏ.15) ನಡೆಸಿದೆ

- Advertisement -

ಈ ನಡುವೆ ವಿದ್ಯಾರ್ಥಿಗಳ ಪೋಷಕರು ಕೂಡ ಪ್ರಾಂಶುಪಾಲರು ಒಳಗೊಂಡು ಶಾಲೆಯ ಇಬ್ಬರು ಸಿಬ್ಬಂದಿ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ಹಾಗೂ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಡಿಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಹೈದರಾಬಾದ್‌ನಿಂದ 250 ಕಿಮೀ ದೂರದಲ್ಲಿರುವ ಕನ್ನೆಪಲ್ಲಿ ಗ್ರಾಮದಲ್ಲಿ ಇರುವ ಮದರ್‌ ತೆರೇಸಾ ಪ್ರೌಢಶಾಲೆಯಲ್ಲಿ ಪ್ರಾಂಶುಪಾಲರಾದ ಜೈಮೊನ್‌ ಜೋಸೆಫ್ ಅವರು ಕೆಲವು ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದರು.

ಪ್ರಾಂಶುಪಾಲರ ಪ್ರಶ್ನೆಗೆ ಉತ್ತರಿಸಿದ ವಿದ್ಯಾರ್ಥಿಗಳು ಹನುಮಾನ್‌ ಧೀಕ್ಷ ಕಾರ್ಯಕ್ರಮದ ಅಂಗವಾಗಿ ಉಡುಪು ಧರಿಸಿರುವುದಾಗಿ ತಿಳಿಸಿದ್ದರು. ಈ ವಿಷಯದ ಬಗ್ಗೆ ಚರ್ಚಿಸಲು ತಮ್ಮ ಪೋಷಕರನ್ನು ಕರೆದುಕೊಂಡು ಬರುವಂತೆ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸೂಚಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ

ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ನಂತರ ಗುಂಪೊಂದು ಶಾಲೆಯ ಮೇಲೆದಾಳಿ ನಡೆಸಿ ಶಾಲೆಯ ಕೆಲವು ಆಸ್ತಿಪಾಸ್ತಿಗಳನ್ನು ನಾಶಪಡಿಸಿದೆ. ಇಬ್ಬರು ಸಿಬ್ಬಂದಿ ಮೇಲೆಯೂ ದಾಳಿ ನಡೆಸಲಾಗಿದೆ.

ಗಲಭೆ ನಡೆದ ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ಆಚೆ ಕಳಿಸಿದ್ದಾರೆ. ವೈರಲ್ ಆಗುತ್ತಿರುವ ಒಂದು ವಿಡಿಯೋದಲ್ಲಿ ಗುಂಪು ಮದರ್‌ ತೆರೇಸಾ ಶಾಲೆಯ ಆವರಣದಲ್ಲಿ ಕಲ್ಲುಗಳನ್ನು ಎಸೆಯುತ್ತಿರುವುದು ಕಂಡುಬಂದಿದೆ.

ಗುಂಪಿನಲ್ಲಿದ್ದ ಕೆಲವರು ಪ್ರಾಂಶುಪಾಲರನ್ನು ಸುತ್ತುವರಿದು ಹಣೆಗೆ ಕುಂಕುಮ ಇಡುವಂತೆ ಒತ್ತಾಯಿಸಿದ್ದು, ಕ್ಷಮೆ ಕೇಳುವಂತೆ ಆಗ್ರಹಿಸಿದ ಫೋಟೋ ಹಾಗೂ ಭಾವಚಿತ್ರಗಳು ವೈರಲ್ ಆಗಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...