ತೆಲಂಗಾಣ | ಬಿಆರ್‌ಎಸ್‌ಗೆ ಮತ್ತೆ ಆಘಾತ; ಕಾಂಗ್ರೆಸ್ ಸೇರ್ಪಡೆಗೊಂಡ 6 ಶಾಸಕರು

Date:

ಕೆ ಚಂದ್ರಶೇಖರ್‌ ರಾವ್ ನೇತೃತ್ವದ ಬಿಆರ್‌ಎಸ್‌ ಪಕ್ಷಕ್ಕೆ ಮತ್ತೊಮ್ಮೆ ಭಾರಿ ಹಿನ್ನಡೆಯಾಗಿದ್ದು, ಆರು ವಿಧಾನ ಪರಿಷತ್‌ ಸದಸ್ಯರು ಇಂದು ರಾತ್ರಿ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.

- Advertisement -

ದಂಡೆ ವಿಠಲ್, ಭಾನು ಪ್ರಸಾದ್, ಬಿ ದಯಾನಂದ್, ಪ್ರಭಾಕರ್ ರಾವ್, ಬಸವರಾಜ್ ಸರಯ್ಯ ಹಾಗೂ ಇ ಮಲ್ಲೇಶಯ್ಯ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಶಾಸಕರು. ದೆಹಲಿಗೆ ಎರಡು ದಿನದ ಪ್ರವಾಸಕ್ಕೆ ತೆರಳಲಿರುವ ರೇವಂತ್‌ ರೆಡ್ಡಿ ವಾಪಸಾದ ನಂತರ 6 ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಈ ಹೊಸ ಬೆಳವಣಿಗೆಯೊಂದಿಗೆ ಆಡಳಿತರೂಢ ಕಾಂಗ್ರೆಸ್‌ನ ಮೇಲ್ಮನೆ ಸದಸ್ಯರ ಸಂಖ್ಯೆ 12ಕ್ಕೆ ಏರಿಕೆಯಾಗಲಿದೆ. ತೆಲಂಗಾಣದ 40 ಸದಸ್ಯರ ವಿಧಾನ ಪರಿಷತ್‌ನಲ್ಲಿ 21 ಬಿಆರ್‌ಎಸ್, ಎಐಎಂಐಎಂ 2, ಬಿಜೆಪಿ 2 ಹಾಗೂ ಇಬ್ಬರು ಪಕ್ಷೇತರ ಶಾಸಕರಿದ್ದಾರೆ. ಎರಡು ಸ್ಥಾನ ಖಾಲಿಯುಳಿದಿದೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಸೇರ್ಪಡೆ ನಂತರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ ಕೇಶವ್ ರಾವ್

ತೆಲಂಗಾಣ ವಿಧಾನಸಭೆ ಚುನಾವಣೆಯಾದ ನಂತರ ರಾಜಕೀಯವಾಗಿ ಬಿಆರ್‌ಎಸ್‌ ಭಾರಿ ಹಿನ್ನಡೆ ಅನುಭವಿಸುತ್ತಿದೆ. ಪಕ್ಷದ ಸೋಲಿನ ಜೊತೆ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ ಹಲವು ಶಾಸಕರು ಕಾಂಗ್ರೆಸ್‌ಗೆ ಪಕ್ಷಾಂತರಗೊಳ್ಳುತ್ತಿದ್ದಾರೆ. ಇತ್ತೀಚಿಗೆ ಒಂದು ದಿನದ ಹಿಂದಷ್ಟೆ ಬಿಆರ್‌ಎಸ್‌ ರಾಜ್ಯಸಭಾ ಸದಸ್ಯರಾದ ಕೆ ಕೇಶವ ರಾವ್‌ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು.

ಕಳೆದ ವರ್ಷ ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 119 ಸ್ಥಾನಗಳ ಪೈಕಿ ಕಾಂಗ್ರೆಸ್‌ 64 ಸ್ಥಾನಗಳಿಸಿ ಸರ್ಕಾರ ರಚಿಸಿದರೆ ಬಿಆರ್‌ಎಸ್‌ 39 ಕ್ಷೇತ್ರಗಳಲ್ಲಿ ಮಾತ್ರ ಜಯಗಳಿಸಿತ್ತು. ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಸಿಕಂದರಾಬಾದ್‌ ಕ್ಷೇತ್ರದ ಬಿಆರ್‌ಎಸ್‌ ಶಾಸಕಿ ಜಿ ಲಾಸ್ಯ ನಂದಿತಾ ಮೃತಪಟ್ಟಿದ್ದರು. ಈ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ಇದರ ನಡುವೆ ಬಿಆರ್‌ಎಸ್ 6 ಶಾಸಕರು ಕಾಂಗ್ರೆಸ್‌ ಸೇರ್ಪಡೆಗೊಂಡ ಪರಿಣಾಮ ಕೈ ಶಾಸಕರ ಸಂಖ್ಯೆ 71ಕ್ಕೆ ಏರಿಕೆಯಾಗಿ ಭಾರತ್‌ ರಾಷ್ಟ್ರ ಸಮಿತಿ ಶಾಸಕರ ಸಂಖ್ಯೆ 32ಕ್ಕೆ ಕುಸಿದಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UPI ಮೇಲೆ MDR ಶುಲ್ಕ: ಸರ್ಕಾರದ ‘ಸಮರ್ಥನೆ’ಯ ಮರೆಯಲ್ಲಿ ದೈತ್ಯ ಕಂಪನಿಗಳಿಗೆ ಮಣೆ

​'ಡಿಜಿಟಲ್ ಇಂಡಿಯಾ'ದ ಯಶಸ್ಸಿನ ಬಗ್ಗೆ ಸದಾ ಬೆನ್ನು ತಟ್ಟಿಕೊಳ್ಳುವ ಬಿಜೆಪಿ ಸರ್ಕಾರ,...

ದೆಹಲಿ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ‘ನಿರ್ಭಯಾ ಪ್ರಕರಣವನ್ನು ನೆನಪಿಸುವ ಭೀಕರತೆ’ ಎಂದ ಸುಪ್ರೀಂ ಕೋರ್ಟ್

ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ಚಲಿಸುವ ಬಸ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಭೀಕರ...

ದೆಹಲಿ | ರಸ್ತೆ ಕಳಪೆ ಕಾಮಗಾರಿ ಪ್ರಶ್ನಿಸಿದಕ್ಕೆ ಹಲ್ಲೆ; ಯುವಕನ ಕಪಾಳಕ್ಕೆ ಹೊಡೆದ ದುರಹಂಕಾರಿ ಸಚಿವ

ದೆಹಲಿಯಲ್ಲಿ ಸಚಿವ ಪರ್ವೇಶ್ ವರ್ಮಾ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ...

ಪಂಜಾಬ್: ಎಲ್‌ಪಿಯು ‘ವಿವಿ’ಯಲ್ಲಿ ಅತ್ಯಾಚಾರ ಆರೋಪ; ಭುಗಿಲೆದ್ದ ಪ್ರತಿಭಟನೆ, ತರಗತಿಗಳು ರದ್ದು

ಪಂಜಾಬ್‌ನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (ಎಲ್‌ಪಿಯು) ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...