ತೆಲಂಗಾಣ | ಮಾವಿನ ಹಣ್ಣು ತಿಂದು ಸಹೋದರಿಯರಿಬ್ಬರು ಅನುಮಾನಾಸ್ಪದ ಸಾವು!

Date:

ಊಟದ ನಂತರ ಮಾವಿನ ಹಣ್ಣು ಸೇವಿಸಿ ಅಸ್ವಸ್ಥಗೊಂಡ ಸಹೋದರಿಯಬ್ಬರು ಚಿಕಿತ್ಸೆ ಫಲಕಾರಿಯಾಗದೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ.

- Advertisement -

ಮೂಲತಃ ಬೀದರ್‌ ಜಿಲ್ಲೆಯ ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮದ ಭವಾನಿ ವೈಜಿನಾಥ ಮೇತ್ರೆ (17) ಹಾಗೂ ಇವರ ಸಹೋದರಿ ಸಂಧ್ಯಾರಾಣಿ ಮೇತ್ರೆ (14) ಮೃತರು ಎಂದು ತಿಳಿದು ಬಂದಿದೆ. ಜೂನ್ 8 ರಂದು ಭವಾನಿ ಹಾಗೂ ಸಂಧ್ಯಾರಾಣಿ ಜೂ. 9ರಂದು ಮೃತಪಟ್ಟಿದ್ದು, ಸ್ವಗ್ರಾಮ ಶೆಂಬೆಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಘಟನೆ ಏನು?

ವೈಜಿನಾಥ ಹಾಗೂ ಇಂದುಮತಿ ಮೇತ್ರೆ ದಂಪತಿಗೆ ಒಟ್ಟು 5 ಜನ ಹೆಣ್ಣು ಮಕ್ಕಳಿದ್ದಾರೆ. ತಾಯಿ ಇಂದುಮತಿ ಐದು ಜನ ಮಕ್ಕಳೊಂದಿಗೆ ಹೈದರಾಬಾದ್‌ಗೆ ವಲಸೆ ಹೋಗಿ ಮೂರ್ನಾಲ್ಕು ವರ್ಷಗಳಿಂದ ಅಲ್ಲಿಯೇ ನೆಲೆಸಿ ಕೂಲಿ ಮಾಡುತ್ತಾರೆ. ನಾರಾಯಣಗುಡ ಬಡಾವಣೆಯಲ್ಲಿ ವಾಸವಾಗಿದ್ದಾರೆ.

ಜೂ. 8ರಂದು ಮನೆಯಲ್ಲಿ ಊಟ ಮಾಡಿದ ಬಳಿಕ, ಮನೆಗೆ ಬಂದ ಸಂಬಂಧಿಕರು ತಂದ ಮಾವಿನ ಹಣ್ಣು ಎಲ್ಲರೂ ಸೇವಿಸಿದ್ದಾರೆ. ಆನಂತರ ವಾಂತಿ, ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಅಸ್ವಸ್ಥರಾದ ಭವಾನಿ, ಸಂಧ್ಯಾರಾಣಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣವೇನೆಂಬುದು ಗೊತ್ತಾಗಲಿದೆ ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.

ಇನ್ನೊಬ್ಬ ಸಹೋದರಿ ವಿಜಯಶ್ರೀ (19) ಕೂಡ ಅನಾರೋಗ್ಯದಿಂದ ಬಳಲುತ್ತಿದ್ದು, ಗಂಭೀರ ಸ್ಥಿತಿಯಲ್ಲಿ ಹೈದರಾಬಾದ್‌ನ ಕಾಚಿಗುಡದ ಶಾಲಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಬ್ಬ ಸಹೋದರಿ ಅಮೂಲ್ಯ (16) ಹಾಗೂ ತಾಯಿ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ನಾರಾಯಣಗುಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಬೀದರ್‌ | ದೈಹಿಕ ಶಿಕ್ಷಣ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಇಬ್ಬರು ಸಹೋದರಿಯರ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಕಾಡುತ್ತಿದೆ. ಈ ಬಗ್ಗೆ ಬೀದರ್‌ ಜಿಲ್ಲೆಯ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ತೆಲಂಗಾಣದ ಸರ್ಕಾರದೊಂದಿಗೆ ಚರ್ಚಿಸಿ, ಸಾವಿನ ಕುರಿತು ತನಿಖೆ ನಡೆಸಿ, ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಬೇಕು. ಚಿಕಿತ್ಸೆಗಾಗಿ 7-8 ಲಕ್ಷ ವೆಚ್ಚ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬಡ ಕುಟುಂಬಕ್ಕೆ ಸರ್ಕಾರದಿಂದ ನೆರವು ಒದಗಿಸಬೇಕೆಂದು ಮೃತರ ಸಂಬಂಧಿಯೊಬ್ಬರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...

ಬಸವಣ್ಣನವರ ಕನಸಿನ ಸಮಸಮಾಜ ಇನ್ನೂ ನಿರ್ಮಾಣವಾಗಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾತಿರಹಿತ, ವರ್ಗರಹಿತ ಮತ್ತು ಲಿಂಗಭೇದವಿಲ್ಲದ ಸಮಸಮಾಜ ನಿರ್ಮಾಣದ...

ಜೋಯ್ಡಾ | ದೂರು ಹಿಂಪಡೆಯಲು ರೂ.10 ಲಕ್ಷ ಬೇಡಿಕೆ! ಅಬಕಾರಿ ನಿರೀಕ್ಷಕರಿಂದ ದೂರು

ಉತ್ತರ ಕನ್ನಡ ಜಿಲ್ಲೆ, ಜೋಯ್ಡಾದ ಅನಮೋಡ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ...