ಹೈದರಾಬಾದ್‌ಗೆ ಶಾಶ್ವತ ಸ್ಥಳಾಂತರ ಕೋರಿ ಬಾಂಬೆ ಹೈಕೋರ್ಟ್‌ಗೆ ತೆಲುಗು ಕವಿ ವರವರ ರಾವ್ ಅರ್ಜಿ

Date:

ಎಲ್ಗಾರ್ ಪರಿಷತ್ ಪ್ರಕರಣದ ಆರೋಪಿಯಾಗಿರುವ ಸಾಮಾಜಿಕ ಹೋರಾಟಗಾರ ಹಾಗೂ ತೆಲುಗು ಕವಿ ವರವರ ರಾವ್ ಅವರು, ತಮ್ಮ ಹುಟ್ಟೂರಾದ ಹೈದರಾಬಾದ್‌ಗೆ ಶಾಶ್ವತವಾಗಿ ಸ್ಥಳಾಂತರಗೊಳ್ಳಲು ಅನುಮತಿ ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಳಿ ವಯಸ್ಸಿನ ಆರೋಗ್ಯ ಸಮಸ್ಯೆಗಳು ಮತ್ತು ಮುಂಬೈನಲ್ಲಿನ ದುಬಾರಿ ಜೀವನ ವೆಚ್ಚದಿಂದಾಗಿ ಇಲ್ಲಿ ವಾಸಿಸಲು ಕಷ್ಟವಾಗುತ್ತಿದೆ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

- Advertisement -

ವರವರ ರಾವ್ ಅವರ ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್, ಈ ಕುರಿತು ಒಂದು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಸೂಚಿಸಿದೆ. ಇನ್ನೊಂದೆಡೆ, ಮುಂಬೈ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಮೂಲಕ ರಾವ್ ಅವರು ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿರುವ ಎನ್‌ಐಎ, ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ಪ್ರತ್ಯೇಕ ಅರ್ಜಿ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

85 ವರ್ಷ ವಯಸ್ಸಾಗಿರುವ ತಮಗೆ ಓಡಾಟ ಮಾಡಲು ತೀವ್ರ ಕಷ್ಟವಾಗುತ್ತಿದೆ. ಹೀಗಾಗಿ, ತಮ್ಮ ಇಳಿವಯಸ್ಸನ್ನು ಹುಟ್ಟೂರಿನಲ್ಲಿ ಕುಟುಂಬದೊಂದಿಗೆ ಕಳೆಯುವುದು ಸೂಕ್ತವಾಗಿದೆ ಎಂದು ರಾವ್ ಅರ್ಜಿಯಲ್ಲಿ ವಿವರಿಸಿದ್ದಾರೆ. ಅಲ್ಲದೆ, ಮುಂಬೈನ ಜೀವನ ವೆಚ್ಚ ಮತ್ತು ವೈದ್ಯಕೀಯ ಚಿಕಿತ್ಸಾ ವೆಚ್ಚ ಭರಿಸುವುದು ತಮ್ಮ ಕೈಮೀರಿದ ಮಾತಾಗಿದೆ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ತೆಲಂಗಾಣದ ಪಿಂಚಣಿದಾರರಾಗಿರುವ ತಮಗೆ, ತವರು ರಾಜ್ಯದಲ್ಲಿ ಕೈಗೆಟುಕುವ ದರದಲ್ಲಿ ಉತ್ತಮ ವೈದ್ಯಕೀಯ ಸೇವೆಗಳು ಲಭ್ಯವಿವೆ. ಮುಂಬೈನಲ್ಲಿರುವ ಸರ್ಕಾರಿ ಆಸ್ಪತ್ರೆಗಳ ಸ್ಥಿತಿಗತಿಗಳು ಶೋಚನೀಯವಾಗಿವೆ. ಈ ಹಿಂದೆ ತಮಗೆ ತಾತ್ಕಾಲಿಕ ಜಾಮೀನು ನೀಡುವಾಗಲೂ ಇದೇ ಅಂಶವನ್ನು ನ್ಯಾಯಾಲಯ ಪರಿಗಣಿಸಿತ್ತು ಎಂಬುದನ್ನು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ತಾವು ಯಾವುದೇ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ ಅಥವಾ ತಮಗೆ ನೀಡಲಾದ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಂಡಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನು ಓದಿದ್ದೀರಾ? ಸುಪ್ರೀಂನಲ್ಲಿ ಮೀನಾಕ್ಷಿ ನಟರಾಜನ್ ಅರ್ಜಿ ವಜಾ: ಪ್ರತಿಭಟನೆ ತೀವ್ರಗೊಳಿಸಲು ಕಾಂಗ್ರೆಸ್ ಸಜ್ಜು

ಈ ಹಿಂದೆ ತಮ್ಮ ವಿರುದ್ಧ ಒಟ್ಟು 24 ಪ್ರಕರಣಗಳು ದಾಖಲಾಗಿದ್ದರೂ, ಆ ಎಲ್ಲ ಪ್ರಕರಣಗಳಲ್ಲೂ ತಾವು ನಿರ್ದೋಷಿಯಾಗಿ ಖುಲಾಸೆಗೊಂಡಿದ್ದು, ಹೈದರಾಬಾದ್‌ಗೆ ಮರಳಲು ಶಾಶ್ವತ ಅನುಮತಿ ನೀಡಬೇಕು ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ, 2022ರ ಸೆಪ್ಟೆಂಬರ್‌ನಲ್ಲಿ ಕಣ್ಣಿನ ಪೊರೆ (ಕ್ಯಾಟರಾಕ್ಟ್) ಶಸ್ತ್ರಚಿಕಿತ್ಸೆಗೆ ಒಳಗಾಗಲು ಮೂರು ತಿಂಗಳ ಕಾಲ ಹೈದರಾಬಾದ್‌ನಲ್ಲಿ ಉಳಿಯಲು ಅನುಮತಿ ಕೋರಿ ಅವರು ಅರ್ಜಿ ಸಲ್ಲಿಸಿದ್ದರು. ಆದರೆ ಸೆಷನ್ಸ್ ಕೋರ್ಟ್ ಹಾಗೂ ಹೈಕೋರ್ಟ್ ಎರಡೂ ಅವರ ಅರ್ಜಿಯನ್ನು ತಿರಸ್ಕರಿಸಿದ್ದವು.

ಆಗಸ್ಟ್ 2022ರಲ್ಲಿ ಸುಪ್ರೀಂ ಕೋರ್ಟ್, ವೈದ್ಯಕೀಯ ಕಾರಣಗಳ ಆಧಾರದ ಮೇಲೆ ರಾವ್ ಅವರಿಗೆ ಜಾಮೀನು ನೀಡಿತ್ತು. 50,000 ರೂ. ಮೌಲ್ಯದ ಬಾಂಡ್, ಎನ್‌ಐಎ ನ್ಯಾಯಾಲಯದ ವ್ಯಾಪ್ತಿಯನ್ನು ಬಿಟ್ಟು ಹೋಗದಿರುವುದು, ತನಿಖಾಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುವುದು, ತಮ್ಮ ವಾಸಸ್ಥಳದ ವಿಳಾಸವನ್ನು ತನಿಖಾ ಸಂಸ್ಥೆಗೆ ನೀಡುವುದು, ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಿರುವುದು, ಮೊಬೈಲ್ ಫೋನ್ ಅನ್ನು ಯಾವುದೇ ಕಾರಣಕ್ಕೂ ಸ್ವಿಚ್ ಆಫ್ ಮಾಡದಿರುವುದು ಹಾಗೂ ಅಂತಾರಾಷ್ಟ್ರೀಯ ಕರೆಗಳನ್ನು ಮಾಡದಿರುವುದು ಸೇರಿದಂತೆ ಅತ್ಯಂತ ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಲಾಗಿತ್ತು.

2017ರ ಡಿಸೆಂಬರ್ 31ರಂದು ಪುಣೆಯ ಶನಿವಾರವಾಡ ಕೋಟೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವರವರ ರಾವ್ ಅವರನ್ನು 2018ರಲ್ಲಿ ಬಂಧಿಸಲಾಗಿತ್ತು. .

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...