ಹವಾಮಾನ | ಹರಿಯಾಣದಲ್ಲಿ ಆವರಿಸಿದ ಮಂಜು: ಮಧ್ಯಪ್ರದೇಶದಲ್ಲಿ ಉಷ್ಣಾಂಶ ತೀವ್ರ ಕುಸಿತ, ಶಾಲೆಗಳಿಗೆ ರಜೆ

Date:

ದೇಶದಲ್ಲಿ ಚಳಿ ಹೆಚ್ಚಾಗುತ್ತಿದ್ದು, ಹರಿಯಾಣ, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನದಲ್ಲಿ ಉಷ್ಣಾಂಶ ತೀವ್ರ ಪ್ರಮಾಣದಲ್ಲಿ ಕುಸಿಯುತ್ತಿದ್ದು ದಟ್ಟವಾದ ಮಂಜು ಆವರಿಸಿದೆ. ಹಲವು ಸ್ಥಳಗಳಲ್ಲಿ ದಾರಿಯೇ ಕಾಣದಂತಾಗಿದೆ. ಕೆಲವು ರಾಜ್ಯಗಳಲ್ಲಿ ಶಾಲೆಗಳಲ್ಲಿ ರಜೆಯನ್ನೂ ಘೋಷಿಸಲಾಗಿದೆ. ಮುಖ್ಯವಾಗಿ ಮಂಜು ಜನಜೀವನ ಮತ್ತು ಸಂಚಾರದ ಮೇಲೆ ತೀವ್ರ ಪರಿಣಾಮ ಬೀರಿದೆ.

- Advertisement -

ಹರಿಯಾಣದ ಹಿಸಾರ್‌ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಅಂದರೆ 2.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 3 ಡಿಗ್ರಿಯಷ್ಟು ಕಡಿಮೆಯಾಗಿದೆ. ಇನ್ನುಳಿದಂತೆ ನರ್ನಾಲ್ 4°C, ಭಿವಾನಿ 5.5°C, ರೋಹ್ಟಕ್ 7.2°C, ಚಂಡೀಗಢ 5.6°C ಮತ್ತು ಅಂಬಾಲಾ 8°C ಉಷ್ಣಾಂಶ ದಾಖಲಾಗಿದೆ. ಈ ಪ್ರದೇಶಗಳಲ್ಲಿ ಗೋಚರತೆಯ ಮಟ್ಟ (Visibility) 20 ರಿಂದ 50 ಮೀಟರ್‌ಗಿಂತಲೂ ಕಡಿಮೆಯಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ವಾಯುಮಾಲಿನ್ಯ | ದೆಹಲಿಯಲ್ಲ ದೇಶದ ‘ಟಾಪ್‌ 5’ ಅತಿ ಕಲುಷಿತ ನಗರಗಳಿವು!

ಭಾರತೀಯ ಹವಾಮಾನ ಇಲಾಖೆ (IMD) ಹರಿಯಾಣದ ಹಲವು ಭಾಗಗಳಿಗೆ ಡಿಸೆಂಬರ್ 31ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ದಟ್ಟವಾದ ಮಂಜು ಹಾಗೆಯೇ ಇರುತ್ತದೆ ಮತ್ತು ಚಳಿ ಇನ್ನಷ್ಟೂ ಅಧಿಕವಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಗೋಚರತೆಯ ಕೊರತೆಯಿಂದಾಗಿ ರೈಲು ಮತ್ತು ವಿಮಾನ ಸಂಚಾರವೂ ವಿಳಂಬವಾಗಿದೆ.

ಇನ್ನು ಹರಿಯಾಣದ ಶಿಕ್ಷಣ ಇಲಾಖೆಯು ಈ ಹಿಂದೆ ಕೆಲವು ಕಡೆಗಳಲ್ಲಿ ಶಾಲಾ ಸಮಯವನ್ನು ಬೆಳಿಗ್ಗೆ 9:30ರಿಂದ ಮಧ್ಯಾಹ್ನ 3:30ಕ್ಕೆ ಬದಲಾಯಿಸಿತ್ತು. ಸಾಮಾನ್ಯವಾಗಿ ಬೆಳಿಗ್ಗೆ 7:55 ರಿಂದ ಮಧ್ಯಾಹ್ನ 12:30 ರವರೆಗೆ ಮತ್ತು ಮಧ್ಯಾಹ್ನ 12:40 ರಿಂದ ಸಂಜೆ 5:15 ರವರೆಗೆ ಎರಡು ಪಾಳಿಯಲ್ಲಿ ಶಾಲೆ ನಡೆಯುತ್ತಿತ್ತು. ಆದರೆ ಚಳಿಗಾಲದ ಕಾರಣ ಶಾಲಾ ಅವಧಿ ಬದಲಾಯಿಸಲಾಗಿತ್ತು. ಅದಾದ ಬಳಿಕ ಇದೀಗ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ 2026ರ ಜನವರಿ 1ರಿಂದ 15ರವರೆಗೆ ಅಧಿಕೃತ ಚಳಿಗಾಲದ ರಜೆ ಘೋಷಿಸಲಾಗಿದೆ.

ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ತೀವ್ರ ಕುಸಿತ ಉಷ್ಣಾಂಶ

ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಉಷ್ಣಾಂಶ ತೀವ್ರ ಕುಸಿದಿದೆ. ಡಿಸೆಂಬರ್ 30ರವರೆಗೆ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಹಲವು ಭಾಗಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ತಾಪಮಾನವು 2.5°C ಗೆ ಕುಸಿದಿದ್ದು, ಇದು ರಾಜ್ಯದ ಅತ್ಯಂತ ತಂಪಾದ ನಗರ ಎನಿಸಿಕೊಂಡಿದೆ. ಇನ್ನುಳಿದಂತೆ 30 ನಗರಗಳಲ್ಲಿ ಉಷ್ಣಾಂಶವು 10°C ಗಿಂತ ಕಡಿಮೆಯಾಗಿದೆ. ಗ್ವಾಲಿಯರ್‌ನಂತಹ ಪ್ರದೇಶಗಳಲ್ಲಿ ಕನಿಷ್ಠ ಉಷ್ಣಾಂಶ 6.7°C ದಾಖಲಾಗಿದೆ. ತೀವ್ರ ಚಳಿಯ ಕಾರಣ ಗ್ವಾಲಿಯರ್ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಡಿಸೆಂಬರ್ 30ರಂದು ರಜೆ ಘೋಷಿಸಲಾಗಿದೆ.

ಇದನ್ನು ಓದಿದ್ದೀರಾ? ಮುಂದಿನ ಒಂದು ವಾರ ಹಗಲು, ರಾತ್ರಿ ಸಾಧಾರಣ ಮಳೆ ಸಾಧ್ಯತೆ

ಛತ್ತೀಸ್‌ಗಢದಲ್ಲಿ ಕನಿಷ್ಠ ತಾಪಮಾನವು 9°C ಆಸುಪಾಸಿನಲ್ಲಿದೆ. ತೀವ್ರ ಚಳಿಯಿರುವ ಕಾರಣ ವೃದ್ಧರು ಮತ್ತು ಉಸಿರಾಟದ ಸಮಸ್ಯೆ ಇರುವವರು ಮುಂಜಾನೆ ಮತ್ತು ರಾತ್ರಿ ವೇಳೆ ಮನೆಯಲ್ಲೇ ಇರುವಂತೆ, ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆಯು ತಿಳಿಸಿದೆ.

ರಾಜಸ್ಥಾನದಲ್ಲಿ ಸತತ ಮೂರನೇ ದಿನವೂ ಶೀತಗಾಳಿ ಮುಂದುವರೆದಿದ್ದು, ಶಿಕಾರ್ ಜಿಲ್ಲೆಯ ಫತೇಪುರ್ 3.5°C ಕನಿಷ್ಠ ತಾಪಮಾನ ದಾಖಲಾಗಿದೆ. ಜೈಪುರದಲ್ಲಿ 8.5°C ನಿಂದ 9.3°C ರವರೆಗೆ ದಾಖಲಾಗಿದೆ. ದೌಸಾ 4.5°C, ಅಲ್ವಾರ್ 4.8°C, ಸಿಕಾರ್ 5.0°C, ಮೌಂಟ್ ಅಬು ಮತ್ತು ವನಸ್ಥಲಿಯಲ್ಲಿ ತಲಾ 5.1°C ಉಷ್ಣಾಂಶ ದಾಖಲಾಗಿದೆ.

ಇನ್ನು ಪಶ್ಚಿಮದ ಮಾರುತಗಳ (Western Disturbance) ಪ್ರಭಾವದಿಂದಾಗಿ ಡಿಸೆಂಬರ್ 31 ಮತ್ತು ಜನವರಿ 1ರಂದು ಬಿಕಾನೇರ್, ಚುರು, ಸಿಕಾರ್ ಮತ್ತು ಜುಂಜುನು ಸೇರಿದಂತೆ ರಾಜಸ್ಥಾನದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಹೊಸ ವರ್ಷದ ಆರಂಭದಲ್ಲಿ ಚಳಿ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...