ಕುಂಭಮೇಳಕ್ಕೆ ತೆರಳುತ್ತಿದ್ದ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆದು, ಕನಿಷ್ಠ 10 ಮಂದಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಗರದಲ್ಲಿ ನಡೆದಿದೆ.
ಮೃತರನ್ನು ಛತ್ತೀಸ್‌ಗಢ ರಾಜ್ಯದವರು ಎಂದು ಗುರುತಿಸಲಾಗಿದೆ. ಶುಕ್ರವಾರ ತಡರಾತ್ರಿ ಪ್ರಯಾಗ್ ರಾಜ್-ಮಿರ್ಝಾಪುರ್ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಛತ್ತೀಸ್‌ಗಢ ಮೂಲದ ಹಲವರು ಕಾರಿನಲ್ಲಿ ಕುಂಭಮೇಳ ನಡೆಯುತ್ತಿದ್ದ ಪ್ರಯಾಗ್‌ರಾಜ್ ನಗರಕ್ಕೆ ತೆರಳುತ್ತಿದ್ದರು. ಕುಂಭಮೇಳ ನಡೆಯುತ್ತಿದ್ದ ಸ್ಥಳಕ್ಕೆ ಕೆಲವೇ ಕಿ.ಮೀ. ಅಂತರವಿರುವ ಮೇಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರು ಅಪಘಾತಕ್ಕೀಡಾಗಿದೆ.
ಘಟನಾ ಸ್ಥಳಕ್ಕೆ ಯಮುನಾನಗರ ಉಪ ಪೊಲೀಸ್ ಆಯುಕ್ತ ವಿವೇಕ್ ಚಂದ್ರ ಯಾದವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ”ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಹೇಳಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದೂ ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.