2027ರ ಜನಗಣತಿ ‘ಪ್ರಹಸನ’ವಾಗುತ್ತಿದೆ, ಗಂಭೀರ ಪರಿಣಾಮ ಬೀರಲಿದೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ!

Date:

2027ರ ಜನಗಣತಿ ಪ್ರಕ್ರಿಯೆಯು ಹಲವು ವಿಧಗಳಲ್ಲಿ ಒಂದು ‘ಪ್ರಹಸನ’ವಾಗಿ ಮಾರ್ಪಡುತ್ತಿದ್ದು, ಇದು ಮುಂದಿನ ದಿನಗಳಲ್ಲಿ ‘ಗಂಭೀರ ಪರಿಣಾಮಗಳನ್ನು’ ಬೀರಲಿದೆ ಎಂದು ಕಾಂಗ್ರೆಸ್ ಮಂಗಳವಾರ (ನವೆಂಬರ್ 17) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

- Advertisement -

ಜನಗಣತಿಯ ಸ್ವಯಂ-ಗಣತಿ (ಪೋರ್ಟಲ್‌ನಲ್ಲಿನ ಲೋಪದೋಷಗಳ ಕುರಿತು ಮಾಧ್ಯಮ ವರದಿಯೊಂದನ್ನು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ವರದಿಯ ಪ್ರಕಾರ, ಜನಗಣತಿಯ ಸ್ವಯಂ-ಗಣತಿ ಪೋರ್ಟಲ್‌ನಲ್ಲಿ ‘ಇತರೆ’ ಧರ್ಮಗಳ ವಿಭಾಗದ ಅಡಿಯಲ್ಲಿ ಒಟ್ಟು 287 ಹೆಸರುಗಳನ್ನು ಪಟ್ಟಿ ಮಾಡಲಾಗಿತ್ತು. ಇದರಲ್ಲಿ ಇಸ್ಕಾನ್ , ರಾಮಕೃಷ್ಣ ಪರಮಹಂಸ, ಸನಾತನ, ಶ್ರೀರಾಮ, ಶ್ರೀಕೃಷ್ಣ, ವಾಲ್ಮೀಕಿ, ರಾಮದೇವ್, ಸೂಫಿ, ಶಿಯಾ, ಸುನ್ನಿ, ಮೆಥೋಡಿಸ್ಟ್ ಮತ್ತು ಪೆಂಟೆಕೋಸ್ಟಲ್ ಮುಂತಾದ ಹೆಸರುಗಳು ಸೇರಿದ್ದವು. ಆದರೆ, ಈ ಕುರಿತು ಕೇಂದ್ರ ಗೃಹ ಸಚಿವಾಲಯಕ್ಕೆ ಪ್ರಶ್ನೆಗಳನ್ನು ಕೇಳಿದ ಬೆನ್ನಲ್ಲೇ, ಯಾವುದೇ ಸ್ಪಷ್ಟನೆ ನೀಡದೆ ಈ ಪಟ್ಟಿಯನ್ನು ಪೋರ್ಟಲ್‌ನಿಂದ ಸದ್ದಿಲ್ಲದೆ ತೆಗೆದುಹಾಕಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಬೆಳವಣಿಗೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಜೈರಾಮ್ ರಮೇಶ್, “ಇದು ವಿಚಿತ್ರವಾಗಿದೆ ಮತ್ತು ಯಾವುದೇ ತರ್ಕಕ್ಕೆ ನಿಲುಕದಂತಿದೆ. ಎಲ್ಲಿ ಡ್ರಾಪ್-ಡೌನ್ ಮೆನು ನೀಡಬೇಕಿತ್ತೋ—ಉದಾಹರಣೆಗೆ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳನ್ನು (ST) ಹೊರತುಪಡಿಸಿ ಇತರೆ ಜಾತಿಗಳ ಕಾಲಂನಲ್ಲಿ—ಅಲ್ಲಿ ಅದನ್ನು ನೀಡಿಲ್ಲ. 2027ರ ಜನಗಣತಿಯು ಅನೇಕ ವಿಷಯಗಳಲ್ಲಿ ಪ್ರಹಸನವಾಗುತ್ತಿದೆ. ಇದು ಗಂಭೀರ ಪರಿಣಾಮಗಳನ್ನು ಉಂಟುಮಾಡಲಿದೆ” ಎಂದು ಕಿಡಿಕಾರಿದ್ದಾರೆ.

2027ರ ಜನಗಣತಿಯನ್ನು ಕೇಂದ್ರ ಸರ್ಕಾರವು “ಅತ್ಯಂತ ಸಂಶಯಾಸ್ಪದ”ವಾಗಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಈ ಹಿಂದೆಯೂ ಆರೋಪಿಸಿತ್ತು. ಸಂಗ್ರಹಿಸಲಾಗುತ್ತಿರುವ ದತ್ತಾಂಶದ ಗುಣಮಟ್ಟ ಮತ್ತು ಅದರ ಉದ್ದೇಶದ ಬಗ್ಗೆ ಪಕ್ಷವು ನಿರಂತರವಾಗಿ ಕಳವಳ ವ್ಯಕ್ತಪಡಿಸುತ್ತಾ ಬಂದಿದೆ.

ಇದಕ್ಕೂ ಮುನ್ನ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜಂಟಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಜಾತಿ ಗಣತಿಯನ್ನು ಸರಿಯಾದ ರೀತಿಯಲ್ಲಿ ನಡೆಸುವ ಕುರಿತು ಪಕ್ಷದ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಕಡಿತಗಳ ಆರೋಪದ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಯ SSR ಘೋಷಿಸಿದ ECI

ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...

ಬಾಗಲಕೋಟೆ |ಸೆಂಟ್ರಲ್ ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ವಿತರಿಸುವ ಜವಾಬ್ದಾರಿಯನ್ನು ಕೇಂದ್ರೀಕೃತ ಅಡುಗೆ...

ಬೀದರ್‌ | ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ನ.26ರಂದು ಜನಾಂದೋಲನ ಸಮಾವೇಶ

ಸಂವಿಧಾನ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ಅಂಗೀಕಾರ ದಿನವಾದ ನವೆಂಬರ್...