ರಾಮಮಂದಿರ ಲೂಟಿ ಪ್ರಕರಣದ ಎಫ್‌ಐಆರ್‌: RSS ತಿಮಿಂಗಿಲಗಳ ರಕ್ಷಿಸಲಾಗುತ್ತಿದೆಯೇ?

Date:

ರಾಮನ ಜಪ ಮಾಡಿ ಅಯೋಧ್ಯೆ ರಾಮಮಂದಿರದಲ್ಲಿ ಬಿಜೆಪಿ, ಆರ್‌ಎಸ್‌ಎಸ್, ಸಂಘಪರಿವಾರ ಮಾಡಿದ ಲೂಟಿ ಒಂದೊಂದಾಗಿಯೇ ಬಯಲಾಗುತ್ತಿದೆ. ರಾಮಮಂದಿರ ದೇಣಿಗೆ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿ, ಒಟ್ಟು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಈ ಎಫ್‌ಐಆರ್‌ನಲ್ಲಿ RSS ತಿಮಿಂಗಿಲ ಹೆಸರೇ ನಾಪತ್ತೆಯಾಗಿದೆ!

- Advertisement -

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಕೃಷ್ಣ ಮೋಹನ್ ನೀಡಿದ ದೂರಿನ ಆಧಾರದ ಮೇಲೆ ಹಾಗೂ ವಿಶೇಷ ತನಿಖಾ ತಂಡದ (SIT) ಪ್ರಾಥಮಿಕ ವರದಿಯ ಅನ್ವಯ ಎಫ್‌ಐಆರ್ ದಾಖಲಿಸಿ ಎಂಟು ಮಂದಿಯನ್ನು ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದ ನೂರಾರು ಕೋಟಿ ರುಪಾಯಿ ದಾನದಕ್ಷಿಣೆ, ಬೆಳ್ಳಿ ಬಂಗಾರ ವಜ್ರ ಮಾಣಿಕ್ಯದ ಲೂಟಿ

ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕ (ಮಾಜಿ ಚಾಲಕ) ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್, ರಾಮಮಂದಿರದ ಕಾಣಿಕೆ ಹಣ ಎಣಿಕೆ ಮಾಡುವ ಸಿಬ್ಬಂದಿಯ ಉಸ್ತುವಾರಿಯಾಗಿದ್ದ ನಿವೃತ್ತ ಬ್ಯಾಂಕ್ ಉದ್ಯೋಗಿ ಸುಭಾಷ್ ಚಂದ್ರ ಶ್ರೀವಾಸ್ತವ, ಇತರೆ ಸಿಬ್ಬಂದಿ ಅನುಕಲ್ಪ್ ಮಿಶ್ರಾ, ಲವ್ ಕುಶ್ ಮಿಶ್ರಾ, ಅವಿನಾಶ್ ಶುಕ್ಲಾ, ಮನೀಶ್ ಯಾದವ್, ರಾಮಶಂಕರ್ ಮಿಶ್ರಾ, ಕರುಣೇಶ್ ಪಾಂಡೆಯ ಬಂಧನವಾಗಿದೆ. ಆದರೆ ಎಫ್‌ಐಆರ್‌ನಲ್ಲಿ ಈ ಹಣ ದುರುಪಯೋಗದಲ್ಲಿ ಪ್ರಮುಖವಾಗಿ ಆರೋಪ ಕೇಳಿಬಂದಿರುವ ವ್ಯಕ್ತಿಗಳ ಹೆಸರೇ ಇಲ್ಲದಾಗಿದೆ. ಈ ಎಲ್ಲ ಬೆಳವಣಿಗೆಗಳು RSS ತಿಮಿಂಗಿಲಗಳನ್ನು ಯುಪಿ ಸರ್ಕಾರ ರಕ್ಷಿಸುತ್ತಿದೆಯೇ ಎಂಬ ಅನುಮಾನಕ್ಕೆ ಜಾಗಮಾಡಿಕೊಟ್ಟಿದೆ.

ರಾಮಮಂದಿರ ಟ್ರಸ್ಟ್‌ನ ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾತೆಗಳಿಂದ ನಕಲಿ ಚೆಕ್‌ಗಳನ್ನು ಸೃಷ್ಟಿಸಿ ಸುಮಾರು 6 ಲಕ್ಷಕ್ಕೂ ಅಧಿಕ ರೂಪಾಯಿಗಳನ್ನು ಅನಧಿಕೃತವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಕುರಿತು ಅಯೋಧ್ಯೆಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 419, 420, 467, 468 ಮತ್ತು 471 ರ ಅಡಿಯಲ್ಲಿ ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ತನಿಖೆಯ ನಂತರ ಈ ಜಾಲದಲ್ಲಿದ್ದ ಕೆಲವರನ್ನು ಬಂಧಿಸಲಾಗಿದೆ. ಆದರೆ ಎಫ್‌ಐಆರ್‌ನಲ್ಲಿ ಟ್ರಸ್ಟ್‌ನ ಪ್ರಮುಖರಾದ ಚಂಪತ್ ರಾಯ್ (ಪ್ರಧಾನ ಕಾರ್ಯದರ್ಶಿ), ಅನಿಲ್ ಮಿಶ್ರಾ (ಟ್ರಸ್ಟಿ) ಅಥವಾ ಗೋಪಾಲ್ ರಾವ್ ಅವರಂತಹ ಆರ್‌ಎಸ್‌ಎಸ್‌ ಮತ್ತು ವಿಶ್ವ ಹಿಂದೂ ಪರಿಷತ್‌ನ ಪ್ರಭಾವಿ ಮುಖಂಡರ ಹೆಸರುಗಳು ಮಾತ್ರ ಕಂಡುಬಂದಿಲ್ಲ. ಸದ್ಯ ಈ ವಿಚಾರ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೇವಲ ತಳಮಟ್ಟದ ಆರೋಪಿಗಳನ್ನು ಮಾತ್ರ ಗುರಿಯಾಗಿಸಿ, ಟ್ರಸ್ಟ್‌ನ ಉನ್ನತ ಪದಾಧಿಕಾರಿಗಳನ್ನು ರಕ್ಷಿಸಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಈ ಆರೋಪಕ್ಕೆ ಕಾರಣವೇನು?

ಬ್ಯಾಂಕ್ ಖಾತೆಗಳ ನಿರ್ವಹಣೆ ಮತ್ತು ಆರ್ಥಿಕ ವಹಿವಾಟುಗಳ ಸಂಪೂರ್ಣ ಜವಾಬ್ದಾರಿ ಹೊಂದಿರುವುದು ಟ್ರಸ್ಟ್‌ನ ಉನ್ನತ ಅಧಿಕಾರಿಗಳು. ಹಾಗಿದ್ದಾಗ ಅವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಮಟ್ಟದ ನಕಲಿ ಚೆಕ್ ದಣಿವರಿಯಿಲ್ಲದೆ ಚಲಾವಣೆಯಾಗಲು ಹೇಗೆ ಸಾಧ್ಯ ಎಂಬ ಪ್ರಶ್ನೆಯನ್ನು ವಿರೋಧ ಪಕ್ಷಗಳು ಮತ್ತು ಕೆಲವು ಸಾಮಾಜಿಕ ಕಾರ್ಯಕರ್ತರು ಎತ್ತಿದ್ದಾರೆ.

“ಪ್ರಕರಣದಲ್ಲಿ ಕೇವಲ ಸಣ್ಣ ಪುಟ್ಟ ಕಳ್ಳರನ್ನು ಮತ್ತು ನಕಲಿ ಖಾತೆದಾರರನ್ನು ಮಾತ್ರ ಆರೋಪಿಗಳನ್ನಾಗಿ ಮಾಡಲಾಗಿದೆಯೇ ಹೊರತು, ಟ್ರಸ್ಟ್‌ನ ಆಂತರಿಕ ವ್ಯವಸ್ಥೆಯ ಭದ್ರತಾ ವೈಫಲ್ಯಕ್ಕೆ ಕಾರಣರಾದ ಪ್ರಭಾವಿ ವ್ಯಕ್ತಿಗಳನ್ನು ಎಫ್‌ಐಆರ್‌ನಿಂದ ಹೊರಗಿಡಲಾಗಿದೆ” ಎಂಬುದು ಈಗ ಎದ್ದಿರುವ ಪ್ರಮುಖ ಆರೋಪ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...

‘ದೇವರೇ ಈ ದೇಶವನ್ನು ಕಾಪಾಡಬೇಕು’: ರೈಲು ಪ್ರಯಾಣದ ಗದ್ದಲಕ್ಕೆ ಬೇಸತ್ತ ತೇಜಸ್ವಿ ಸೂರ್ಯ ಪತ್ನಿ

ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ...

ಬೀದರ್ | ಬರ ಪರಿಸ್ಥಿತಿ : ವಿಶೇಷ ಪ್ಯಾಕೇಜ್ ಘೋಷಿಸಲು ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬೆಳೆ...