ನೈರುತ್ಯ ಮಾನ್ಸೂನ್ | ದೇಶದಲ್ಲಿ ಲಘು ಹಾಗೂ ಭಾರೀ ಪ್ರಮಾಣದ ಮಳೆ: ಐಎಂಡಿ

Date:

  • ನೈರುತ್ಯ ಮಾನ್ಸೂನ್ ಮಾರುತದಿಂದ ದಕ್ಷಿಣ ಭಾರತದಲ್ಲಿ ಮಳೆ
  • ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಶಾಖದ ಅಲೆಗಳ ಸ್ಥಿತಿ

ನೈರುತ್ಯ ಮಾನ್ಸೂನ್ ಹಿನ್ನೆಲೆ ದೇಶದಲ್ಲಿ ಮುಂಬರುವ ದಿನಗಳಲ್ಲಿ ಲಘು ಹಾಗೂ ಭಾರೀ ಪ್ರಮಾಣದ ನಡುವೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ ಎಂದು ಶನಿವಾರ (ಮೇ 20) ವರದಿಯಾಗಿದೆ.

- Advertisement -

ಐಎಂಡಿ ಇತ್ತೀಚೆಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ಈ ಕುರಿತು ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಹವಾಮಾನ ಇಲಾಖೆಯು, ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ನೈರುತ್ಯ ಮಾನ್ಸೂನ್ ಬೀಸುತ್ತಿರುವ ಹಿನ್ನೆಲೆ ವ್ಯಾಪಕ ಮಳೆಗೆ ಅನುಕೂಲಕರ ವಾತಾವರಣ ಸೃಷ್ಟಿಯಾಗಿದೆ ಎಂದು ಅಧಿಸೂಚನೆಯಲ್ಲಿ ಹೇಳಿದೆ.

ಅಲ್ಲದೆ ಇಂದು ಹಾಗೂ ನಾಳೆ ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಶಾಖದ ಅಲೆಗಳ ಪರಿಸ್ಥಿತಿ ಇರಲಿದೆ. ಛತ್ತೀಸಗಢ್ ಜಾರ್ಖಂಡ್‌ನಲ್ಲಿ ನಾಳೆಯ ನಂತರವೂ ಬಿಸಿ ಗಾಳಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

ಇಂದು ಕೇರಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕೊಂಕಣ ಪ್ರದೇಶದಲ್ಲಿ ಇನ್ನೂ ನಾಲ್ಕು ದಿನ ಶಾಖ ಹಾಗೂ ಅಹಿತಕರ ವಾತಾವರಣ ಇರಲಿದೆ.

ನೈರುತ್ಯ ಮಾನ್ಸೂನ್ ಮಾರುತ ಹಿನ್ನೆಲೆ ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

ಮೇ 22 ಮತ್ತು 23 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನ ಪ್ರದೇಶಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಇದೇ ರೀತಿಯ ಪರಿಸ್ಥಿತಿ ಛತ್ತೀಸ್‌ಗಢದಲ್ಲಿ ಮುಂದಿನ ನಾಲ್ಕು ದಿನ ಇರಲಿದೆ ಎಂದು ಐಎಂಡಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬ್ರಿಜ್‌ ಭೂಷಣ್ ಸಿಂಗ್ ರಕ್ಷಿಸಲು ಪ್ರಧಾನಿ ಮೋದಿ ಯತ್ನ: ರಣದೀಪ್‌ ಸುರ್ಜೇವಾಲಾ

ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಪ್ರದೇಶಗಳಲ್ಲಿ ಇಂದು ಮತ್ತು ಮೇ 23 ರಂದು ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ನೈರುತ್ಯ ಮಾನ್ಸೂನ್‌ ಮಾರುತದಿಂದ ಅಸ್ಸಾಂ ಹಾಗೂ ಮೇಘಾಲಯದಲ್ಲಿ ಮೇ 23 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...