ಆರ್‌ಜಿ ಕರ್ ​ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ ಪ್ರಕಟ

Date:

Advertisements

ಆರ್‌ಜಿ ಕರ್ ​ಮೆಡಿಕಲ್​ ಕಾಲೇಜ್​ ಮತ್ತು ಆಸ್ಪತ್ರೆಯ ಸ್ನಾತಕೋತ್ತರ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂಜಯ್​ ರಾಯ್‌ಗೆ ಹೆಚ್ಚುವರಿ ಜಿಲ್ಲಾ ಸೆಷನ್ಸ್​​ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ

ಹೆಚ್ಚುವರಿ ಜಿಲ್ಲಾ ಸೆಷನ್ಸ್​​ ನ್ಯಾಯಮೂರ್ತಿಗಳಾದ ಅನಿರ್ಬನ್​ ದಾಸ್ ಶತಕ್ಷೆಯ ತೀರ್ಪನ್ನು ಪ್ರಕಟಿಸಿದರು. ಸಂತ್ರಸ್ತ ಕುಟುಂಬಕ್ಕೆ ರಾಜ್ಯ ಸರ್ಕಾರ 17 ಲಕ್ಷ ರೂ. ಪರಿಹಾರ ನೀಡಬೇಕೆಂದು ಕೋರ್ಟ್ ನಿರ್ದೇಶಿಸಿತು.

ನ್ಯಾಯಾಲಯದ ಅಂತಿಮ ವಿಚಾರಣೆಯ ಸಂದರ್ಭದಲ್ಲಿ ಆರೋಪಿಯು ತಾನು ಯಾವುದೇ ಕೃತ್ಯವೆಸಗಿಲ್ಲ, ತನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಹೇಳಿದ್ದ. ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ತೀರ್ಪನ್ನು ಪ್ರಕಟಿಸಿದರು.

Advertisements

“ಇದು ಅಪರೂಪದಲ್ಲಿ ಅಪರೂಪ ಪ್ರಕರಣವಲ್ಲದ ಕಾರಣ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದೇನೆ” ಎಂದು ನ್ಯಾಯಾಧಿಶರು ತೀರ್ಪಿನ ಸಂದರ್ಭದಲ್ಲಿ ಪ್ರಕಟಿಸಿದರು.

ಸಿಬಿಐ ಪರ ವಾದ ಮಂಡಿಸಿದ ವಕೀಲರು ಅಪರೂಪದಲ್ಲಿ ಅಪರೂಪವಾದ ಪ್ರಕರಣವಾದ ಕಾರಣ ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

ನ್ಯಾಯಾಲಯ ಆದೇಶದ ಹಿನ್ನೆಲೆ ಕೋರ್ಟ್​ ಆವರಣದಲ್ಲಿ ಬಿಗಿ ಬಂದೋಬಸ್ತ್​​ ಕಲ್ಪಿಸಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿತ್ತು. ಈ ನಡುವೆ ಕೊನೆ ಕ್ಷಣದಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಿರುವ ಸಂತ್ರಸ್ತೆ ಪೋಷಕರು, ನ್ಯಾಯಕ್ಕಾಗಿ ಹೋರಾಟವನ್ನು ಮುಂದುವರೆಸುವುದನ್ನು ಕೈ ಬಿಡದಂತೆ ತಿಳಿಸಿದ್ದಾರೆ.

ಕಳೆದ ಆಗಸ್ಟ್​ನಲ್ಲಿ ನಡೆದ ಈ ಭೀಕರ ಘಟನೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗಿತ್ತು.

ಆಗಸ್ಟ್​ 9ರಂದು ರಾಜ್ಯ ಸರ್ಕಾರಿ ಆಸ್ಪತ್ರೆಯ ಸ್ನಾತಕೋತ್ತರ ಟ್ರೈನಿ ಮೇಲೆ ನಡೆದ ಈ ಅಪರಾಧ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

ಈ ಪ್ರಕರಣದ ವಿಚಾರಣೆಯು ನವೆಂಬರ್​ 12ರಿಂದ ಪ್ರಾರಂಭವಾಗಿದ್ದು, 50 ಸಾಕ್ಷ್ಯಗಳನ್ನು ವಿಚಾರಣೆ ನಡೆಸಲಾಗಿದೆ. ಜನವರಿ 9ರಂದು ರಾಯ್​ ವಿಚಾರಣೆ ಮುಕ್ತಾಯಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಮೃತ ವೈದ್ಯರ ತಂದೆ, ಸಿಬಿಐ ತನಿಖಾಧಿಕಾರಿ, ಕೋಲ್ಕತ್ತಾ ಪೊಲೀಸ್ ತನಿಖಾಧಿಕಾರಿ, ವಿಧಿವಿಜ್ಞಾನ ತಜ್ಞರು ಮತ್ತು ಮೃತರ ಕೆಲವು ಸಹಪಾಠಿಗಳು ಪ್ರಕರಣದಲ್ಲಿ ಸಾಕ್ಷ್ಯ ನೀಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X