ಸದ್ಯದ ಜ್ವಲಂತ ಸಮಸ್ಯೆ ಕ್ಷೇತ್ರ ಮರುವಿಂಗಡಣೆಯೇ ಹೊರತು ಮಹಿಳಾ ಮೀಸಲಾತಿ ಅಲ್ಲ : ಸೋನಿಯಾ ಗಾಂಧಿ ಹೇಳಿದ್ದೇನು?

Date:

“ಸದ್ಯದ ಜ್ವಲಂತ ಸಮಸ್ಯೆ ಕ್ಷೇತ್ರ ಮರುವಿಂಗಡಣೆಯೇ ಹೊರತು ಮಹಿಳಾ ಮೀಸಲಾತಿ ಅಲ್ಲ.” ಎಂದು ಕೇಂದ್ರ ಸರ್ಕಾರ ತರಾತುರಿಯಲ್ಲಿ ಜಾರಿಗೆ ತರುವುದಕ್ಕೆ ಹೊರಟಿರುವ ಮಹಿಳಾ ಮೀಸಲಾತಿ ವಿಷಯದ ಬಗ್ಗೆ ಸಾತ್ವಿಕ ಕೋಪದಲ್ಲೇ  ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹೇಳಿರುವ ಮಾತಿದು.

- Advertisement -

‘The Hindu’ ಪತ್ರಿಕೆಯಲ್ಲಿ ಪ್ರಕಟವಾದ ತಮ್ಮ ಲೇಖನದಲ್ಲಿ ಸೋನಿಯಾ ಗಾಂಧಿ ಅವರು, ಮುಂಬರುವ ಕ್ಷೇತ್ರ ಮರುವಿಂಗಡಣೆ (Delimitation) ಪ್ರಕ್ರಿಯೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವೆಸಗಲಿದೆ ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ. ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿದ ರಾಜ್ಯಗಳು ತಮ್ಮ ರಾಜಕೀಯ ಪ್ರಭಾವವನ್ನು ಕಳೆದುಕೊಳ್ಳುವ ಭೀತಿಯಲ್ಲಿವೆ ಎಂದು ಅವರು ವಾದಿಸಿದ್ದಾರೆ.

ಮಹಿಳೆಯರಿಗೆ ಸಿಗಬೇಕಾದ ಹಕ್ಕನ್ನು ವಿಳಂಬ ಮಾಡುವ ತಂತ್ರಕ್ಕೆ ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ಯತ್ನಿಸುತ್ತಿದೆ ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ಕೇವಲ ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರಗಳನ್ನು ಮರುಹಂಚಿಕೆ ಮಾಡುವುದರಿಂದ ಉತ್ತರ ಮತ್ತು ದಕ್ಷಿಣ ಭಾರತದ ನಡುವೆ ಅಸಮತೋಲನ ಉಂಟಾಗುತ್ತದೆ. ಇದು ಭಾರತದ ಒಕ್ಕೂಟ ವ್ಯವಸ್ಥೆಯ (Federalism) ಆಶಯಕ್ಕೆ ಧಕ್ಕೆ ತರುತ್ತದೆ ಎನ್ನುವುದು ಅವರ ಅಭಿಪ್ರಾಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಆದರೇ, ಸೋನಿಯಾ ಗಾಂಧಿ ಅವರು ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ ಎನ್ನುವುದು ಇಲ್ಲಿ ಉಲ್ಲೇಖನೀಯ. ಬದಲಾಗಿ ಅದನ್ನು ಕ್ಷೇತ್ರ ಮರುವಿಂಗಡಣೆಯೊಂದಿಗೆ ತಳಕು ಹಾಕಿ ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಾರೆ. ಸದ್ಯಕ್ಕೆ ದೇಶದ ಮುಂದಿರುವ ದೊಡ್ಡ ಸವಾಲು “ಕ್ಷೇತ್ರ ಮರುವಿಂಗಡಣೆ” ಹೇಗೆ ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಅವರ ವಾದ.

“ಅತ್ಯಂತ ಅಪಾಯಕಾರಿ” ಹಾಗೂ “ಸಂವಿಧಾನದ ಮೇಲಿನ ದಾಳಿ” : ಸೋನಿಯಾ

ಇನ್ನು, ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಶಾಸಕಾಂಗ ಕಾರ್ಯಸೂಚಿಯಲ್ಲಿ ಕ್ಷೇತ್ರ ಪುನ‌ರ್ ವಿಂಗಡಣೆ (Delimitation) ವಿಷಯಕ್ಕೆ ಪ್ರಮುಖ ಸ್ಥಾನ ನೀಡಿರುವುದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ಕ್ರಮವನ್ನು “ಅತ್ಯಂತ ಅಪಾಯಕಾರಿ” ಹಾಗೂ “ಸಂವಿಧಾನದ ಮೇಲಿನ ದಾಳಿ” ಎಂದು ಆಕ್ರೋಶ ಹೊರಹಾಕಿದ್ದಾರೆ.

ವಿಶೇಷ ಅಧಿವೇಶನದ ಕೇಂದ್ರ ವಿಷಯ ಮಹಿಳಾ ಮೀಸಲಾತಿಯಲ್ಲ. ಬದಲಾಗಿ ಕ್ಷೇತ್ರ ಪುನರ್ ವಿಂಗಡಣೆಯ ಪರಿಣಾಮಗಳೇ ಮುಖ್ಯ ಎಂದು ಅವರು ಹೇಳಿದ್ದಾರೆ. ಲೋಕಸಭೆಯ ಸದಸ್ಯರ ಸಂಖ್ಯೆಯಲ್ಲಿ ಏರಿಕೆ ಮಾಡುವ ಪ್ರಸ್ತಾಪ “ರಾಜಕೀಯವಾಗಿ ಮತ್ತು ಕೇವಲ ಲೆಕ್ಕಾಚಾರದ ದೃಷ್ಟಿಯಿಂದ ಸಮಾನವಾಗಿರಬಾರದು” ಎಂದವರು ಅಭಿಪ್ರಾಯ ಪಟ್ಟಿದ್ದಾರೆ.

ಪ್ರಧಾನ ಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾತಿ ಜನಗಣತಿಯನ್ನು “ವಿಳಂಬಗೊಳಿಸಲು ಮತ್ತು ಹಳಿತಪ್ಪಿಸಲು” ಯತ್ನಿಸುತ್ತಿದೆ ಎಂದು ಆರೋಪಿಸಿದ ಸೋನಿಯಾ, 2021ರಲ್ಲಿ ನಡೆಯಬೇಕಿದ್ದ ಜನಗಣತಿ ಮುಂದೂಡಲ್ಪಟ್ಟಿರುವುದರಿಂದ ಕಲ್ಯಾಣ ಯೋಜನೆಗಳಿಗೂ ಪರಿಣಾಮ ಬಿದ್ದಿದೆ ಎಂದು ಹೇಳಿದ್ದಾರೆ. 2013ರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 10 ಕೋಟಿಗೂ ಹೆಚ್ಚು ಜನರು ತಮ್ಮ ಕಾನೂನುಬದ್ಧ ಹಕ್ಕುಗಳಿಂದ ವಂಚಿತರಾಗಿದ್ದಾರೆ ಎಂದು ಅವರು ತಮ್ಮ ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

ಮಹಿಳಾ ಮೀಸಲಾತಿಗಾಗಿ ಎಪ್ರಿಲ್ 16ರಿಂದ 18ರವರೆಗೆ ನಡೆಯಲಿರುವ ವಿಶೇಷ ಅಧಿವೇಶನದ ಸಂದರ್ಭದ ಕುರಿತೂ ಅವರು ಪ್ರಶ್ನಿಸಿದ್ದಾರೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ತಾರಕಕ್ಕೇರಿರುವ ಸಂದರ್ಭದಲ್ಲಿ ಸರ್ಕಾರ ಶಾಸನವನ್ನು “ಬಲವಂತವಾಗಿ ಅಂಗೀಕರಿಸಲು” ಪ್ರಯತ್ನಿಸುತ್ತಿದೆ ಎಂದು ಟೀಕಿಸಿದ್ದಾರೆ. “ರಾಜಕೀಯ ಲಾಭಕ್ಕಾಗಿ ಹಾಗೂ ವಿರೋಧ ಪಕ್ಷವನ್ನು ಒತ್ತಡಕ್ಕೆ ತಳ್ಳಲು ಸರ್ಕಾರ ತರಾತುರಿ ಮಾಡುತ್ತಿದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ವಿರೋಧ ಪಕ್ಷಗಳು ಎಪ್ರಿಲ್ 29ರ ನಂತರ ಸರ್ವಪಕ್ಷ ಸಭೆ ನಡೆಸುವಂತೆ ಮೂರು ಬಾರಿ ಮನವಿ ಮಾಡಿದ್ದರೂ ಸರ್ಕಾರ ಅದನ್ನು ನಿರಾಕರಿಸಿದೆ ಎಂದು ಅವರು ತಿಳಿಸಿದ್ದಾರೆ. “ಬದಲಾಗಿ, ಪ್ರಧಾನ ಮಂತ್ರಿ ಅಭಿಪ್ರಾಯ ಲೇಖನಗಳು, ಮನವಿಗಳು ಮತ್ತು ಸಮ್ಮೇಳನಗಳ ಮೂಲಕ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು. ಇದನ್ನು ಅವರು “ನನ್ನ ದಾರಿ ಅಥವಾ ಹೆದ್ದಾರಿ” ಧೋರಣೆ ಎಂದು ಅವರು ಟೀಕಿಸಿದ್ದಾರೆ.

2023ರ ನಾರಿ ಶಕ್ತಿ ವಂದನ ಅಧಿನಿಯಮದ ಅನುಷ್ಠಾನ ಕುರಿತು ಅವರು ಅಸಮಾಧಾನ ವ್ಯಕ್ತಪಡಿಸಿದರು. ಜನಗಣತಿ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ನಂತರವೇ ಮಹಿಳಾ ಮೀಸಲಾತಿ ಜಾರಿಗೆ ಬರಬೇಕೆಂಬ ಷರತ್ತನ್ನು ವಿರೋಧ ಪಕ್ಷ ಕೇಳಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಹಿಂದುತ್ವದ ಹೆಸರಿನಲ್ಲಿ ರಾಜಕೀಯ; ಬಡವರ ಮಕ್ಕಳು ಜೈಲಿನಲ್ಲಿ, ಅನಂತಕುಮಾರ್‌ ಹೆಗಡೆ ಮಗ ವಿದೇಶದಲ್ಲಿ!

2029ರಿಂದ ಮೀಸಲಾತಿ ಜಾರಿಗೆ ತರಲು ವಿಧಿ 334-ಎ ತಿದ್ದುಪಡಿ ಮಾಡುವ ವಿಚಾರವನ್ನೂ ಅವರು ಪ್ರಶ್ನಿಸಿದರು. “ಈ ಯೂ-ಟರ್ನ್ ತೆಗೆದುಕೊಳ್ಳಲು ಪ್ರಧಾನಿಗೆ 30 ತಿಂಗಳುಗಳು ಏಕೆ ಬೇಕಾಯಿತು?” ಎಂದು ಪ್ರಶ್ನಿಸಿದ್ದಾರೆ. ಜಾತಿ ಜನಗಣತಿಗೆ ಪ್ರಧಾನಿ ಮೊದಲು ವಿರೋಧ ವ್ಯಕ್ತಪಡಿಸಿದ್ದರು ಎಂದು ಗಾಂಧಿ ಹೇಳಿದರು. ನಂತರ 2027ರ ಜನಗಣತಿಯಲ್ಲಿ ಅದನ್ನು ಸೇರಿಸುವುದಾಗಿ ಘೋಷಿಸಿದ್ದಾರೆ ಎಂದು ಹೇಳಿದರು.

“ಜಾತಿ ಜನಗಣತಿ ವಿಳಂಬವಾಗುತ್ತದೆ ಎಂಬ ಮಾತು ಸತ್ಯವಲ್ಲ. ಅದನ್ನು ಮುಂದೂಡುವುದೇ ಸರ್ಕಾರದ ಉದ್ದೇಶ” ಎಂದು ಅವರು ಆರೋಪಿಸಿದ್ದಲ್ಲದೇ, ಜನಗಣತಿ ಡಿಜಿಟಲ್ ರೂಪದಲ್ಲಿ ನಡೆಯುತ್ತಿರುವುದರಿಂದ 2027ರಲ್ಲಿಯೇ ಹೆಚ್ಚಿನ ಅಂಕಿ-ಅಂಶಗಳು ಲಭ್ಯವಾಗುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇಂತಹ ಸಂದರ್ಭದಲ್ಲಿ ಕ್ಷೇತ್ರ ಪುನರ್‌ವಿಂಗಡಣೆಗೆ ಸರ್ಕಾರ ತುರ್ತುಗತಿಯಲ್ಲಿ ಮುಂದಾಗುತ್ತಿರುವುದನ್ನು ಅವರು ಪ್ರಶ್ನಿಸಿದ್ದಾರೆ. ಜನಗಣತಿ ನಂತರ ಕ್ಷೇತ್ರ ಪುನರ್‌ವಿಂಗಡಣೆ ನಡೆಯಬೇಕು. ಯಾವುದೇ ರಾಜ್ಯಗಳಿಗೂ ಅನ್ಯಾಯವಾಗಬಾರದು ಎಂದು ಅವರು ಒತ್ತಿ ಹೇಳಿದರು. ಕುಟುಂಬ ಯೋಜನೆಯಲ್ಲಿ ಮುಂಚೂಣಿಯಲ್ಲಿರುವ ಹಾಗೂ ಸಣ್ಣ ರಾಜ್ಯಗಳಿಗೆ ತೊಂದರೆಯಾಗಬಾರದು ಎಂದು ಅವರು ಎಚ್ಚರಿಸಿದ್ದಲ್ಲದೆ, ಸೀಟುಗಳ ಏರಿಕೆ ಅವುಗಳ ರಾಜಕೀಯ ಪ್ರಭಾವವನ್ನು ಕಡಿಮೆ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಇನ್ನು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಸ್ಥಾನಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಮೀಸಲಾತಿ ನೀಡುವ ಆಯ್ಕೆ ಇರುವುದನ್ನು ಉಲ್ಲೇಖಿಸಿದ ಸೋನಿಯಾ, ಒಬಿಸಿ ಮಹಿಳೆಯರಿಗೂ ಇದೇ ರೀತಿಯ ಮೀಸಲಾತಿ ಒದಗಿಸುವ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.

ಈ ಸಂಬಂಧಿಸಿದಂತೆ ವ್ಯಾಪಕ ಸಮಾಲೋಚನೆ ಅಗತ್ಯವಿದೆ ಎಂದು ಹೇಳಿದ ಸೋನಿಯಾ ಗಾಂಧಿ, ಜುಲೈ ಮಧ್ಯದಲ್ಲಿ ಆರಂಭವಾಗುವ ಸಂಸತ್ತಿನ ಮಳೆಗಾಲ ಅಧಿವೇಶನದಲ್ಲಿ ಈ ವಿಷಯಗಳನ್ನು ಚರ್ಚಿಸಲು ಅವಕಾಶ ನೀಡಬಹುದಿತ್ತು. ಸರ್ಕಾರ ಎಪ್ರಿಲ್ 29ರ ನಂತರ ಸರ್ವಪಕ್ಷ ಸಭೆ ನಡೆಸಿ ಚರ್ಚೆಗೆ ಅವಕಾಶ ಕೊಡಬಹುದಿತ್ತು” ಎಂದು ಅವರು ಹೇಳಿದ್ದಾರೆ.

“ನಮ್ಮ ರಾಜಕೀಯದಲ್ಲಿ ಮುಂದೆ ದೊಡ್ಡ ಪರಿಣಾಮ ಬೀರುವ ಬದಲಾವಣೆಗಳನ್ನು ಇಷ್ಟು ಆತುರದಲ್ಲಿ ಕೈಗೊಳ್ಳುವುದು ಸಮರ್ಥನೀಯವಲ್ಲ.” ಎಂದು ಅವರು ಟೀಕಿಸಿದ್ದಾರೆ. “ಈ ಪ್ರಕ್ರಿಯೆ ಪ್ರಜಾಪ್ರಭುತ್ವ ವಿರೋಧಿ. ಮಹಿಳಾ ಮೀಸಲಾತಿ ಸಮಸ್ಯೆಯಲ್ಲ. ಅದು ಈಗಾಗಲೇ ನಿರ್ಧಾರವಾಗಿದೆ. ನಿಜವಾದ ಸಮಸ್ಯೆ ಕ್ಷೇತ್ರ ಪುನರ್‌ವಿಂಗಡಣೆ. ಅಪೂರ್ಣ ಮಾಹಿತಿಯ ಆಧಾರದ ಮೇಲೆ ಅದನ್ನು ಮುಂದುವರಿಸುವುದು ಅಪಾಯಕಾರಿ. ಇದು ಸಂವಿಧಾನದ ಮೇಲಿನ ದಾಳಿ” ಎಂದು ಸೋನಿಯಾ ಕಳವಳ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...