ಕ್ಷೇತ್ರ ಮರುವಿಂಗಡಣೆ ಮಸೂದೆ ದೇಶದ ಒಕ್ಕೂಟ ವ್ಯವಸ್ಥೆ, ಪ್ರಜಾಪ್ರಭುತ್ವಕ್ಕೆ ಬೆದರಿಕೆ; ಸ್ಟ್ಯಾಲಿನ್‌ಗೆ ಮನವರಿಕೆ ಮಾಡಿದ್ದೇನೆ: ರಾಹುಲ್ ಗಾಂಧಿ

Date:

ಕೇಂದ್ರ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಮಸೂದೆಯು ತಮಿಳು ಜನರು, ಅವರ ಭಾಷೆ, ಸಂಸ್ಕೃತಿ ಮತ್ತು ದೇಶದ ಒಕ್ಕೂಟ ವ್ಯವಸ್ಥೆಗೆ ದೊಡ್ಡ ಬೆದರಿಕೆಯಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ.

- Advertisement -

ಭಾನುವಾರ (ನವೆಂಬರ್ 29) ಚೆನ್ನೈನಲ್ಲಿರುವ ಡಿಎಂಕೆ ಮುಖ್ಯಸ್ಥ ಎಂ. ಕೆ. ಸ್ಟ್ಯಾಲಿನ್ ಅವರ ನಿವಾಸದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ ಅವರನ್ನೊಳಗೊಂಡ ಇಂಡಿಯಾ ಒಕ್ಕೂಟದ ಹಿರಿಯ ನಾಯಕರ ನಿಯೋಗವು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸ್ಟ್ಯಾಲಿನ್ ಅವರೊಂದಿಗೆ ಸಮಾಲೋಚನೆ ನಡೆಸಿತು. ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಮಾತನಾಡಿದ ರಾಹುಲ್, ಈ ಮಸೂದೆಯನ್ನು ವಿರೋಧಿಸುವಂತೆ ‘ಸಹೋದರ ಸ್ಟ್ಯಾಲಿನ್’ ಅವರಿಗೆ ಮನವರಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೆದ್ದಾರಿ ನಿರ್ಲಕ್ಷ್ಯಕ್ಕೆ ಆರಿ ಹೋದ ಅಲೆಮಾರಿ ಸಮುದಾಯದ ಜ್ಯೋತಿ.!

ಕಡು ಬಡತನ, ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೂ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಜಿಎನ್ಎಂ ನರ್ಸಿಂಗ್ ಪದವಿ ವ್ಯಾಸಂಗ ಮಾಡುತ್ತಿದ್ದಳು. ತನ್ನ ಸಮುದಾಯದಲ್ಲೇ ಅತಿ ಹೆಚ್ಚು ಶಿಕ್ಷಣ ಪಡೆದ ಬೆರಳೆಣಿಕೆಯ ವಿದ್ಯಾರ್ಥಿಗಳಲ್ಲಿ...

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ ಅಧಿಕಾರದ ಹಂಚಿಕೆ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯದ ಭವಿಷ್ಯವನ್ನು ನಿರ್ಧರಿಸುವ ಪ್ರಕ್ರಿಯೆ. ಕ್ಷೇತ್ರಗಳ ಗಡಿ ಬದಲಾವಣೆಯಿಂದ ದಲಿತ, ಆದಿವಾಸಿ,...

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ...

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಸಂಬಂಧಿಸಿದ ಭೂದಾಖಲೆಗಳು ಬಾದಾಮಿ ತಹಸೀಲ್ದಾರ್ ಕಚೇರಿ ಮತ್ತು ಗದಗ ರಸ್ತೆಯ ಎಪಿಎಂಸಿ ಸಮೀಪದ ಕಚೇರಿಯಲ್ಲಿ ಸಂಗ್ರಹವಾಗಿವೆ....

ಇದನ್ನೂ ಓದಿ: ಡಿಲಿಮಿಟೇಷನ್ | ಸ್ಟಾಲಿನ್ ಮನವೊಲಿಸುವಲ್ಲಿ ‘ಇಂಡಿಯಾ’ ನಿಯೋಗ ವಿಫಲ

ಲೋಕಸಭೆಯ ಸದಸ್ಯ ಬಲವನ್ನು 850ಕ್ಕೆ ಏರಿಸುವ ಈ ಪ್ರಸ್ತಾವನೆಯು ಭಾರತದಲ್ಲಿ ಪ್ರಜಾಪ್ರಭುತ್ವವನ್ನೇ ಅಂತ್ಯಗೊಳಿಸಲಿದೆ. ಬಿಜೆಪಿ-ಆರ್‌ಎಸ್‌ಎಸ್‌ಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ಚುನಾವಣಾ ನಕ್ಷೆಯನ್ನು ಮರುರಚಿಸಲು ಅನಿಯಮಿತ ಅವಕಾಶ ನೀಡಲಿದೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಹಾಗೆಯೇ ಬಿಜೆಪಿಯ ಈ ಕುತಂತ್ರಕ್ಕೆ ಅವಕಾಶ ನೀಡದಂತೆ ತಡೆಯಲು ಎಲ್ಲಾ ದೇಶಭಕ್ತರಂತೆ ಸ್ಟ್ಯಾಲಿನ್ ಕೂಡ ಈ ಬೆದರಿಕೆಯ ವಿರುದ್ಧ ಗಟ್ಟಿಯಾಗಿ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.

ಆದರೆ, ರಾಹುಲ್ ಗಾಂಧಿ ಮತ್ತು ಇಂಡಿಯಾ ಒಕ್ಕೂಟದ ನಾಯಕರ ಮನವಿಯನ್ನು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟ್ಯಾಲಿನ್ ನಯವಾಗಿ ತಿರಸ್ಕರಿಸಿದ್ದು, ಮಸೂದೆಯನ್ನು ಬೆಂಬಲಿಸುವ ತಮ್ಮ ಪಕ್ಷದ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಭೇಟಿಯ ಬಳಿಕ ಪ್ರತಿಕ್ರಿಯಿಸಿದ ಸ್ಟ್ಯಾಲಿನ್, “ನಿನ್ನೆ, ಇಂದು ಮತ್ತು ಎಂದೆಂದಿಗೂ ನಮ್ಮ ನಿಲುವು ಒಂದೇ; ನಮಗೆ ತಮಿಳುನಾಡಿನ ಹಿತಾಸಕ್ತಿಯೇ ಮೊದಲು” ಎಂದು ಹೇಳಿದ್ದಾರೆ.

1966ರ ಕ್ಷೇತ್ರ ಪುನರ್ವಿಂಗಡಣೆಯಲ್ಲಿ ತಮಿಳುನಾಡಿನ ಲೋಕಸಭಾ ಸ್ಥಾನಗಳು 41ರಿಂದ 39ಕ್ಕೆ ಇಳಿದಿದ್ದವು, ಆದರೆ ಈ ಬಾರಿಯ ಮಸೂದೆಯಿಂದ ರಾಜ್ಯದ ಸ್ಥಾನಗಳ ಸಂಖ್ಯೆ ಹೆಚ್ಚಾಗಲಿದೆ ಮತ್ತು ಒಂದು ವೇಳೆ ಮಸೂದೆ ಸೋತರೆ ಭವಿಷ್ಯದಲ್ಲಿ ತಮಿಳುನಾಡು ತನ್ನ ಪ್ರಾತಿನಿಧ್ಯವನ್ನು ಕಳೆದುಕೊಳ್ಳುವ ಅಪಾಯವಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಷೇತ್ರ ಮರುವಿಂಗಡಣೆ ಮಸೂದೆ ಬೆಂಬಲಿಸಲು ನನಗೂ ಆಫರ್ ಬಂದಿತ್ತು, ಆದರೆ ಜನರ ಹಿತಾಸಕ್ತಿ ನನಗೆ ಮುಖ್ಯ: ಉದ್ಧವ್ ಠಾಕ್ರೆ

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ...

ಜನನುಡಿ 2026 | ನಾವಿಂದು ಗಾಯಗೊಂಡ ಪ್ರಜಾಪ್ರಭುತ್ವದಲ್ಲಿ ಬದುಕುತ್ತಿದ್ದೇವೆ : ಕಿರಣ್ ಗಾಜನೂರು

ನಾವಿಂದು ಒಂದು 'ಗಾಯಗೊಂಡ ಪ್ರಜಾಪ್ರಭುತ್ವ'ದಲ್ಲಿ ಬದುಕುತ್ತಿದ್ದೇವೆ. ಯಾವ ಸಮಾಜದಲ್ಲಿ ಧರ್ಮವು ರಾಜಕೀಯದ...

ಜನನುಡಿ – 2026 | ನಮ್ಮ ನಡುವೆ ಇರುವ ಫ್ಯಾಸಿಸ್ಟರ ಬಗ್ಗೆ ಸದಾ ಜಾಗೃತರಾಗಿರಬೇಕು : ಟಿ. ಎಲ್‌. ಕೃಷ್ಣೇಗೌಡ

ಫ್ಯಾಸಿಸ್ಟರು ನಮ್ಮ ನಡುವೆಯೇ ಸಾಮಾನ್ಯರಂತೆ, ಅತ್ಯಂತ ಅಮಾಯಕರಂತೆ ಇರುತ್ತಾರೆ. ಇಂತಹ ಅಮಾಯಕ...