ಆಜಂ ಖಾನ್ ಜೌಹರ್ ವಿಶ್ವವಿದ್ಯಾಲಯ ನೆಲಸಮಕ್ಕೆ ತಡೆ: ವಿಭಾಗೀಯ ಆಯುಕ್ತರ ಆದೇಶ

Date:

ಸಮಾಜವಾದಿ ಪಕ್ಷದ ಹಿರಿಯ ನಾಯಕ ಆಜಂ ಖಾನ್ ಸ್ಥಾಪಿಸಿರುವ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ ಕಟ್ಟಡಗಳ ನೆಲಸಮ ಹಾಗೂ ಜಮೀನು ವಶಪಡಿಸಿಕೊಳ್ಳುವ ಜಿಲ್ಲಾಡಳಿತದ ಕ್ರಮಗಳಿಗೆ ಮುರಾದಾಬಾದ್ ವಿಭಾಗೀಯ ಆಯುಕ್ತರ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಈ ಆದೇಶವು ಜೌಹರ್ ಟ್ರಸ್ಟ್ ಹಾಗೂ ಆಜಂ ಖಾನ್ ಅವರಿಗೆ ತಾತ್ಕಾಲಿಕವಾಗಿ ದೊಡ್ಡ ರಿಲೀಫ್ ನೀಡಿದೆ.

- Advertisement -

ಉತ್ತರ ಪ್ರದೇಶದ ರಾಮ್‌ಪುರದಲ್ಲಿರುವ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಸರ್ಕಾರಿ ಭೂಮಿ ಅತಿಕ್ರಮಣ ಹಾಗೂ ನಿಯಮಗಳ ಉಲ್ಲಂಘನೆಯ ಆರೋಪದಲ್ಲಿ ಜಿಲ್ಲಾಡಳಿತವು ವಿಶ್ವವಿದ್ಯಾಲಯದ ಕೆಲವು ಭಾಗಗಳನ್ನು ನೆಲಸಮಗೊಳಿಸಲು ಮತ್ತು ಭೂಮಿಯನ್ನು ಸರ್ಕಾರಿ ವಶಕ್ಕೆ ಪಡೆಯಲು ನೋಟಿಸ್ ಜಾರಿಗೊಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನೂ ಓದಿ: ನಕಲಿ ಜನನ ಪ್ರಮಾಣಪತ್ರ ಪ್ರಕರಣ: ಎಸ್ಪಿ ನಾಯಕ ಆಜಂ ಖಾನ್, ಪತ್ನಿ, ಪುತ್ರಗೆ 7 ವರ್ಷ ಜೈಲು

ಈ ಕ್ರಮವನ್ನು ಪ್ರಶ್ನಿಸಿ ಜೌಹರ್ ಟ್ರಸ್ಟ್ ಪರ ವಕೀಲರು ವಿಭಾಗೀಯ ಆಯುಕ್ತರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಆಯುಕ್ತರು, ಪ್ರಕರಣದ ಮುಂದಿನ ಸುದೀರ್ಘ ವಿಚಾರಣೆ ಪೂರ್ಣಗೊಳ್ಳುವವರೆಗೆ ಜಿಲ್ಲಾಡಳಿತದ ಯಾವುದೇ ಏಕಪಕ್ಷೀಯ ಅಥವಾ ಧ್ವಂಸಗೊಳಿಸುವ (ನೆಲಸಮ) ಕ್ರಮಗಳಿಗೆ ತಡೆ ನೀಡಿ ಆದೇಶಿಸಿದ್ದಾರೆ.

ಆಜಂ ಖಾನ್ ಸ್ಥಾಪಿಸಿರುವ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ ಕಟ್ಟಡ ನೆಲಸಮದ ವಿರುದ್ಧ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಈ ಆದೇಶದ ಬಳಿಕ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, “ಬಿಜೆಪಿ ಸರ್ಕಾರವು ಸತತವಾಗಿ ಧ್ರುವೀಕರಣ ಮತ್ತು ರಾಜಕೀಯ ದ್ವೇಷದ ಸಾಂಸ್ಥಿಕ ದೌರ್ಜನ್ಯ ನಡೆಸುತ್ತಿದೆ. ಆಜಂ ಖಾನ್ ಮತ್ತು ಅವರ ಶಿಕ್ಷಣ ಸಂಸ್ಥೆಯನ್ನು ಗುರಿಯಾಗಿಸಿಕೊಂಡು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿತ್ತು. ಆಯುಕ್ತರ ತಡೆಯಾಜ್ಞೆಯು ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಎತ್ತಿಹಿಡಿದಿದೆ” ಎಂದು ಹೇಳಿದ್ದಾರೆ.

ಇನ್ನು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಜಯ್ ರಾಯ್, “ಯಾವುದೇ ಶಿಕ್ಷಣ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಾಗ ಕಾನೂನಿನ ಸರಿಯಾದ ಪ್ರಕ್ರಿಯೆಯನ್ನು ಪಾಲಿಸಬೇಕು. ರಾಜಕೀಯ ಸೇಡು ತೀರಿಸಿಕೊಳ್ಳಲು ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಳ್ಳುವುದು ಪ್ರಜಾಪ್ರಭುತ್ವಕ್ಕೆ ಮಾರಕ” ಎಂದು ಅಭಿಪ್ರಾಯಿಸಿದ್ದಾರೆ.

ಆದರೆ ಉತ್ತರ ಪ್ರದೇಶದ ಸಚಿವ ಹಾಗೂ ಬಿಜೆಪಿ ನಾಯಕ ಸುರೇಶ್ ಖನ್ನಾ, “ಸರ್ಕಾರಿ ಮತ್ತು ಬಡ ರೈತರ ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಂಡು ವಿಶ್ವವಿದ್ಯಾಲಯ ನಿರ್ಮಿಸಲಾಗಿದೆ ಎಂಬುದು ತನಿಖೆಯಲ್ಲಿ ಸ್ಪಷ್ಟವಾಗಿದೆ. ಕಾನೂನು ಎಲ್ಲರಿಗೂ ಒಂದೇ. ಜಿಲ್ಲಾಡಳಿತವು ಕಾನೂನು ಚೌಕಟ್ಟಿನಲ್ಲೇ ಕ್ರಮ ಕೈಗೊಂಡಿದೆ. ಇಲಾಖೆಯ ಮೇಲ್ಮನವಿ ಪ್ರಕ್ರಿಯೆಯಲ್ಲಿ ನಾವು ಸತ್ಯವನ್ನು ನ್ಯಾಯಾಲಯದ ಮುಂದೆ ಇಡಲಿದ್ದೇವೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ ಕರೆಘಂಟೆಯೇ?

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ...

ಬೀದರ್‌ | ನ.1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

ಬೀದರ್‌ ತಾಲ್ಲೂಕಿನ ಅತಿವಾಳ ಸಮೀಪ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು...

ಬೀದರ್‌ | ವಾಲ್ಮೀಕಿ ರಾಮಾಯಣ ಮಾನವ ಸಂಬಂಧಗಳ ಮೌಲ್ಯ ಸಾರುತ್ತದೆ: ನಾ.ಗೀತಾಚಾರ್ಯ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಮಾನವ ಸಂಬಂಧಗಳ ಮಹತ್ವ, ಕುಟುಂಬದ ಜವಾಬ್ದಾರಿ,...