ಪ್ರಜಾಪ್ರಭುತ್ವ ರಕ್ಷಣೆಗೆ ಹೋರಾಟ ನಿಲ್ಲದು: ‘ಇಂಡಿಯಾ’ ಒಕ್ಕೂಟ ನಾಯಕರೊಂದಿಗೆ ರಾಹುಲ್ ಗಾಂಧಿ ಚಹಾಕೂಟ

Date:

ದೇಶದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಅಕ್ರಮಗಳು ಮತ್ತು ಕಳವು ನಡೆದಿವೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿರುವ ‘ಇಂಡಿಯಾ’ ಮೈತ್ರಿಕೂಟವು ತನ್ನ ರಾಜಕೀಯ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ನಿರ್ಧರಿಸಿದೆ. ಈ ಸಂಬಂಧ ಮಂಗಳವಾರ ಸಂಜೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ದೆಹಲಿಯ ಸುನೇರಿ ಬಾಗ್ ರಸ್ತೆಯಲ್ಲಿರುವ ಅಧಿಕೃತ ನಿವಾಸದಲ್ಲಿ ಮೈತ್ರಿಕೂಟದ ಪ್ರಮುಖ ನಾಯಕರು, ಸಂಸದರು, ನಾಗರಿಕ ಸಮಾಜದ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳ ಪ್ರಮುಖರೊಂದಿಗೆ ಚಹಾ ಕೂಟ ಸಭೆ ನಡೆಯಿತು.

- Advertisement -

ಸಭೆಯ ನಂತರ ‘ಇಂಡಿಯಾ’ ಕೂಟದ ನಾಯಕರ ಜತೆಗೆ ಜಂಟಿ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಜಾಪ್ರಭುತ್ವವನ್ನು ಉಳಿಸುವ ಈ ಜನಪರ ಹೋರಾಟವು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

“ನಾವು ಕೇವಲ ಒಂದು ದಿನದ ಪ್ರತಿರೋಧಕ್ಕೋ ಅಥವಾ ಬೀದಿ ಹೋರಾಟಕ್ಕೋ ಸೀಮಿತವಾಗಿಲ್ಲ. ಈ ಹೋರಾಟ ನಾಳೆಯಾಗಲಿ, ಮುಂದಿನ ಮೂರು ತಿಂಗಳು, ಆರು ತಿಂಗಳು ಅಥವಾ ಎರಡು ವರ್ಷಗಳಾಗಲಿ, ನಮ್ಮ ಅಂತಿಮ ಗುರಿಯನ್ನು ತಲುಪುವವರೆಗೆ ನಿರಂತರವಾಗಿ ಮುಂದುವರಿಯುತ್ತದೆ” ಎಂದು ಘೋಷಿಸಿದರು.

ಇದನ್ನೂ ಓದಿ: ಇಂಡಿಯಾ ಒಕ್ಕೂಟ ಸಭೆ: ಕಾಂಗ್ರೆಸ್ಸೇತರ ಪಕ್ಷಗಳ ಆತಂಕ ನಿವಾರಿಸಿದ ರಾಹುಲ್ ಗಾಂಧಿ

ಮುಂದುವರಿದು ಮಾತನಾಡಿದ ಅವರು, “ಸಂಸ್ಥೆಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಲಿ ಅಥವಾ ಬಿಡಲಿ, ರಾಜಕೀಯ ಮತ್ತು ಜನಸಾಮಾನ್ಯರ ಪ್ರತಿರೋಧ ಮಾತ್ರ ಎಂದಿಗೂ ನಿಲ್ಲುವುದಿಲ್ಲ” ಎಂದು ಪುನರುಚ್ಚರಿಸಿದರು.

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿರುವ ವಿಪಕ್ಷಗಳು, ಚುನಾವಣಾ ಆಯೋಗದ ವಿವಾದಾತ್ಮಕ ‘SIR’ ಪ್ರಕ್ರಿಯೆ, ಮತದಾರರ ಪಟ್ಟಿಯಿಂದ ಹೆಸರುಗಳ ಕಡಿತದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಜಂಟಿ ಕಾನೂನು ಹೋರಾಟವನ್ನೂ ಆರಂಭಿಸಿವೆ.

ಸೋಮವಾರವಷ್ಟೇ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಪ್ರಜಾಪ್ರಭುತ್ವಕ್ಕಾಗಿ ಮಾರ್ಚ್’ ನಡೆಸಿದ್ದ ವಿಪಕ್ಷ ನಾಯಕರು, ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಸಂಬಂಧಿತ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದರು. ಇದರ ಬೆನ್ನಲ್ಲೇ ಮಂಗಳವಾರ ಈ ಚಹಾಕೂಟ ಸಭೆ ನಡೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಸಿಜೆಐಗೆ ವಿಪಕ್ಷಗಳು ಬರೆದ ಪತ್ರದಲ್ಲಿ ಏನಿದೆ?

ಈ ಮಹತ್ವದ ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ ಸದಸ್ಯೆ ಸೋನಿಯಾ ಗಾಂಧಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಕರ್ನಾಟಕದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ‘ಇಂಡಿಯಾ’ ಮೈತ್ರಿಕೂಟದ ಹಲವು ಹಿರಿಯ ನಾಯಕರು, ಸಂಸದರು ಮತ್ತು ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿ ಮುಂದಿನ ಹಂತದ ಹೋರಾಟದ ತಂತ್ರಗಾರಿಕೆಯ ಕುರಿತು ವಿಸ್ತೃತವಾಗಿ ಚರ್ಚಿಸಿದರು.

ಮತ್ತೊಂದೆಡೆ, ವಿಪಕ್ಷಗಳ ಈ ಚಹಾ ಕೂಟ ಮತ್ತು ನಿರಂತರ ಪ್ರತಿಭಟನೆಗಳ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಹತಾಶೆಯಿಂದ ಇಂತಹ ಸಭೆಗಳನ್ನು ಆಯೋಜಿಸುತ್ತಿದ್ದಾರೆ ಎಂದು ಟೀಕಿಸಿರುವ ಬಿಜೆಪಿ ನಾಯಕರು, ಸಂವಿಧಾನಾತ್ಮಕ ಸಂಸ್ಥೆಗಳ ಮೇಲೆಯೇ ಅಸುರಕ್ಷಿತ ಭಾವನೆ ಬಿತ್ತುವ ಮೂಲಕ ದೇಶದ ಜನತೆಯನ್ನು ದಾರಿ ತಪ್ಪಿಸಲು ವಿಪಕ್ಷಗಳು ಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...

ಕಾರವಾರ |ಅರಣ್ಯದಲ್ಲಿ ಅಕ್ರಮ ಮದ್ಯ ಸಾಗಾಟ : 64 ಸಾವಿರ ಮೌಲ್ಯದ ಮದ್ಯ ಜಪ್ತಿ

ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ರಾಜ್ಯದ ಮದ್ಯ ಸಾಗಾಟ ಮಾಡುತ್ತಿದ್ದ...