ಆಂಧ್ರಪ್ರದೇಶ | ಲೈಂಗಿಕ ಅಲ್ಪಸಂಖ್ಯಾತರ ಕಾಯ್ದೆ ಅಡಿಯಲ್ಲಿ ಮೊದಲ ಪ್ರಕರಣ ದಾಖಲು

Date:

ಆಂಧ್ರಪ್ರದೇಶದಲ್ಲಿ ಲೈಂಗಿಕ ಅಲ್ಪಸಂಖ್ಯಾತರ (ಹಕ್ಕುಗಳ ರಕ್ಷಣಾ) ಕಾಯ್ದೆ 2019ರ ಅಡಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ವಿಶಾಖಪಟ್ಟಣದಲ್ಲಿ ಲೈಂಗಿಕ ಅಲ್ಪಸಂಖ್ಯಾತೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಜೂನ್ 8ರಂದು ದಲಿತ ಸಮುದಾಯದ ಲೈಂಗಿಕ ಅಲ್ಪಸಂಖ್ಯಾತೆಯೊಬ್ಬರು ಸಿನಿಮಾ ನೋಡಿಕೊಂಡು ಮನೆಗೆ ಹೋಗುತ್ತಿದ್ದರು. ಈ ವೇಳೆ ಆಕೆ ವಿಶಾಖಪಟ್ಟಣದ ಜಗದಾಂಬ ಜಂಕ್ಷನ್‌ನಿಂದ ಹನುಮಂತವಾಕ ಎನ್ನುವ ಪ್ರದೇಶಕ್ಕೆ ಹೋಗಲು ಆಟೋ ಹತ್ತಿದ್ದರು. ಅದರಲ್ಲಿ ಅಷ್ಟೊತ್ತಿಗಾಗಲೇ ಮೂವರು ಪ್ರಯಾಣಿಕರಿದ್ದರು. ಸ್ವಲ್ಪ ಹೊತ್ತಿನ ನಂತರ ಆ ಮೂವರು ಆಕೆಯ ದೇಹದ ವಿವಿಧ ಭಾಗಗಳನ್ನು ಅಸಭ್ಯವಾಗಿ ಮುಟ್ಟಿ, ದೌರ್ಜನ್ಯ ಎಸಗಿದರು. ದಾರಿ ಮಧ್ಯೆಯೇ ಆಟೋದಿಂದಿಳಿದ ತನ್ನ ಮೇಲೆ ಆಟೋ ಡ್ರೈವರ್‌ ಸೇರಿದಂತೆ ನಾಲ್ವರೂ ಹಲ್ಲೆ ಮಾಡಿ, ತಲೆ ಮೇಲೆ ಹೊಡೆದಿದ್ದಾರೆ ಎಂದು ಆಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಈ ಸಂಬಂಧ ಪೊಲೀಸರು ವಾಸುಪಲ್ಲಿ ಶ್ರೀನಿವಾಸ್, ಹನೀಶ್ ಕುಮಾರ್, ಸತೀಶ್ ಕುಮಾರ್ ಮತ್ತು ಮನೋಜ್ ಕುಮಾರ್ ಎನ್ನುವವರನ್ನು ಬಂಧಿಸಿದ್ದಾರೆ.         

ಈ ಸುದ್ದಿ ಓದಿದ್ದೀರಾ: ಇಂದಿರಾ ಕ್ಯಾಂಟೀನ್ | ಇನ್ಮುಂದೆ ಬಿಸಿಬಿಸಿ ರಾಗಿ ಮುದ್ದೆ ಜತೆಗೆ ಪಾಯಸ

ಲೈಂಗಿಕ ಅಲ್ಪಸಂಖ್ಯಾತರ (ಹಕ್ಕುಗಳ ರಕ್ಷಣಾ) ಕಾಯ್ದೆ2019ರ ಅಡಿಯಲ್ಲಿ ಆಂಧ್ರದಲ್ಲಿ ದಾಖಲಾದ ಮೊದಲ ಪ್ರಕರಣವಿದು ಎಂದು ಎಸಿಪಿ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ರಕ್ಷಣಾ ವಿಭಾಗದ ನೋಡಲ್ ಆಫೀಸರ್ ಆದ ವಿವೇಕಾನಂದ ತಿಳಿಸಿದ್ದಾರೆ.

ಈ ಪ್ರಕರಣವನ್ನು ದಿಶಾ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಳ್ಳಲಾಗಿದೆ. ಮಕ್ಕಳು ಮತ್ತು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಪೋಕ್ಸೋ ಪ್ರಕರಣಗಳ ತ್ವರಿತ ವಿಚಾರಣೆಗೆ ದಿಶಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

NTA ಒಂದು ‘ಖಾಲಿ ಸಂಸ್ಥೆ’, ಮೋದಿ ಸರ್ಕಾರ ಅಹಂಕಾರ ಬಿಟ್ಟು ವರದಿ ಪರಿಗಣಿಸಲಿ: ಕಾಂಗ್ರೆಸ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ‌ (ಎನ್‌ಟಿಎ) ಮತ್ತು ಶಿಕ್ಷಣ ಸಚಿವಾಲಯದಲ್ಲಿ ಗಂಭೀರ ಸ್ವರೂಪದ...