ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಂಡ 24 ಗಂಟೆಗಳಲ್ಲೇ ದೇವಿಯ ಕಿರೀಟ ಕಳವು!

Date:

ದೇವರ ಪ್ರತಿಷ್ಠಾಪನೆಗೊಂಡ 24 ಗಂಟೆಗಳಲ್ಲಿಯೇ ದೇವಿಯ ಕಿರೀಟ ಕಳವಾಗಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ತಳೇಗಾಂವ್ ದಾಭಾಡೆ ದೇವಸ್ಥಾನದಲ್ಲಿ ನಡೆದಿದೆ. ದಾಭಾಡೆಯಲ್ಲಿರುವ ಶ್ರೀ ತುಳಜಾಭವಾನಿ ದೇವಾಲಯದಲ್ಲಿ ಘಟನೆ ನಡೆದಿದೆ. ತಳೇಗಾಂವ್ ದಾಭಾಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಇದೇ ದೇವಾಲಯದಲ್ಲಿ ಮೇ 23ರಂದು ಕೂಡ ಕಳ್ಳತನ ನಡೆದಿತ್ತು. ಅಂದು, ದೇವಸ್ಥಾನದಿಂದ 1.3 ಕೆಜಿ ತೂಕದ ಈ ಬೆಳ್ಳಿಯ ಕಿರೀಟವನ್ನು ಕದಿಯಲಾಗಿತ್ತು. ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ದೃಶ್ಯಗಳ ಆಧಾರದ ಮೇಲೆ ಪೊಲೀಸರಿಗೆ ಆರೋಪಿಯ ಬಗ್ಗೆ ಸುಳಿವು ಸಿಕ್ಕಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಸಿಸಿಟಿವಿ ದೃಶ್ಯಾವಳಿಯಲ್ಲಿ, ವ್ಯಕ್ತಿಯೊಬ್ಬ ಭಕ್ತನ ಸೋಗಿನಲ್ಲಿ ದೇವಸ್ಥಾನದೊಳಗೆ ಪ್ರವೇಶಿಸುವುದು ಕಂಡುಬಂದಿತ್ತು. ಶಂಕಿತ ವ್ಯಕ್ತಿ ತೆಂಗಿನಕಾಯಿಯೊಂದಿಗೆ ಬಂದು ದೇವಿಗೆ ಕುಂಕುಮವನ್ನೂ ಇಟ್ಟಿದ್ದ. ಆದರೆ, ನಂತರ ದೇವಿಯ ಕಿರೀಟವನ್ನು ಕೈಗೆತ್ತಿಕೊಂಡು ಅಲ್ಲಿಂದ ಪರಾರಿಯಾಗಿದ್ದ. ಆ ಪ್ರಕರಣದಲ್ಲಿ ಉತ್ತರ ಪ್ರದೇಶದ ರವಿ ಸೋನಿ (34) ಮತ್ತು ರಮೇಶ್ (36) ಎಂಬ ಇಬ್ಬರನ್ನುಪೊಲೀಸರು ಜೂನ್ 6ರಂದು ಬಂಧಿಸಿದ್ದರು. ಕಿರೀಟವನ್ನು ವಶಕ್ಕೆ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬಳಿಕ, ಜೂನ್ 12ರ ಸಂಜೆ ಪೊಲೀಸ್ ಉಪ ಆಯುಕ್ತ (DCP) ಶ್ವೇತಾ ಖೇಡ್ಕರ್ ಮತ್ತು ಹಿರಿಯ ಪೊಲೀಸ್ ನಿರೀಕ್ಷಕ ಕನ್ಹಯ್ಯಾ ಥೋರಟ್ ಅವರ ಸಮ್ಮುಖದಲ್ಲಿ ಕಿರೀಟವನ್ನು ದೇವಿಯ ಮೂರ್ತಿಗೆ ಶಾಸ್ತ್ರೋಕ್ತವಾಗಿ ಮರುಪ್ರತಿಷ್ಠಾಪಿಸಲಾಗಿತ್ತು. ಆದರೆ, ಆ ಸಮಾರಂಭ ಮುಗಿದ ಕೆಲವೇ ಗಂಟೆಗಳಲ್ಲಿ ಕಿರೀಟ ಮತ್ತೆ ಕಳುವಾಗಿದೆ. ಒಂದೇ ತಿಂಗಳ ಅಂತರದಲ್ಲಿಯೇ ಎರಡನೇ ಬಾರಿಗೆ ಕಿರೀಟ ಕಳ್ಳತನವಾಗಿದೆ.

ಈ ಲೇಖನ ಓದಿದ್ದೀರಾ?: ರಾಮಮಂದಿರ ದೇಣಿಗೆ ದುರುಪಯೋಗ: ಬಿಜೆಪಿಯ ಬ್ರಿಜ್ ಭೂಷಣ್ ಆರೋಪಗಳ ಸುತ್ತ

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ನಿರೀಕ್ಷಕ ಥೋರಟ್, ಪ್ರಕರಣದ ತನಿಖೆಗೆ ಪೊಲೀಸ್ ತಂಡ ರಚಿಸಲಾಗಿದೆ. ತಂಡವು ಕೆಲವು ಸುಳಿವುಗಳನ್ನು ಕಲೆಹಾಕಿದೆ. ಕಿರೀಟ ಕಳ್ಳತನದಲ್ಲಿ ಭಾಗಿಯಾಗಿರುವ ಕಳ್ಳರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...