‘ಇಂಡಿಯಾ’ ಒಕ್ಕೂಟ ಅತ್ಯಂತ ಒಗ್ಗಟ್ಟಾಗಿದೆ; ಸಿಇಸಿ ಗ್ಯಾನೇಶ್ ಕುಮಾರ್ ವಜಾಕ್ಕೆ ಮಮತಾ ಬ್ಯಾನರ್ಜಿ ಆಗ್ರಹ

Date:

ವಿಪಕ್ಷಗಳ ಇಂಡಿಯಾ ಒಕ್ಕೂಟವು ಸಂಪೂರ್ಣ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ಎಲ್ಲ ಪಕ್ಷಗಳು ಒಂದಾಗಿ ಹೋರಾಟ ನಡೆಸಲಿವೆ ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ.

- Advertisement -

ನವದೆಹಲಿಯಲ್ಲಿ ನಡೆದ ಪ್ರತಿಪಕ್ಷ ನಾಯಕರ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು ಅಥವಾ ಅವರು ತಕ್ಷಣವೇ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನೂ ಓದಿ: ಟಿಎಂಸಿ ಬಂಡಾಯ: ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ; ಗುಪ್ತ ಸಭೆ

ಹಾಗೆಯೇ, “ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ದೇಶದ ಜನರ ಮತದಾನದ ಹಕ್ಕನ್ನು ಖಚಿತಪಡಿಸಲು ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡುವುದು ಅತ್ಯಗತ್ಯ. ಅವರನ್ನು ಹುದ್ದೆಯಿಂದ ತೆಗೆದುಹಾಕದಿದ್ದರೆ ತೀವ್ರವಾಗಿ ಹೋರಾಟ ನಡೆಸಲಾಗುವುದು” ಎಂದು ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದರು.

ಇತ್ತೀಚೆಗೆ ನಡೆಸಲಾದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಮೂಲಕ ಪಶ್ಚಿಮ ಬಂಗಾಳ ಒಂದರಲ್ಲೇ ಸುಮಾರು 92 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ದೇಶಾದ್ಯಂತ ಸುಮಾರು 13 ಕೋಟಿ ಜನರು ಇದರಿಂದ ಸಂಕಷ್ಟಕ್ಕೆ ಈಡಾಗಿದ್ದಾರೆ ಎಂದು ಆರೋಪಿಸಿದರು.

ಚುನಾವಣಾ ಪ್ರಕ್ರಿಯೆಯಲ್ಲಿ ಬಳಕೆಯಾದ ಇವಿಎಂ ಮತ್ತು ತಂತ್ರಾಂಶಗಳ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಎತ್ತಿದ ಅವರು, “ಚುನಾವಣಾ ವ್ಯವಸ್ಥೆಯಲ್ಲಿ ಅಕ್ರಮ ನಡೆದಿಲ್ಲದಿದ್ದರೆ ಯಂತ್ರಗಳನ್ನು ಏಕೆ ನಾಶಪಡಿಸಲಾಯಿತು? ಸಾಫ್ಟ್‌ವೇರ್ ಮೂಲಕ ಮತದಾನದ ಪ್ರಕ್ರಿಯೆಯನ್ನು ಮ್ಯಾನಿಪುಲೇಟ್ ಮಾಡಲಾಗಿದೆ” ಎಂದು ಆರೋಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ...

ಚುನಾವಣಾ ಆಯೋಗದ ವಿರುದ್ಧ ‘ಇಂಡಿಯಾ’ ಒಗ್ಗಟ್ಟು ಪ್ರದರ್ಶನ: ‘ಪ್ರಜಾಪ್ರಭುತ್ವ ಉಳಿಸಿ’ ಹೋರಾಟ ಘೋಷಣೆ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆ ಮತ್ತು ಚುನಾವಣಾ...

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...