ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

Date:

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಯಲ್ಲಿ ಅಕ್ರಮ ವಿರುದ್ಧ ಠಾಕ್ರೆ ಸಹೋದರರು ಒಂದಾಗಿದ್ದಾರೆ. ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್‌ಎಸ್) ಅಧ್ಯಕ್ಷ ರಾಜ್ ಠಾಕ್ರೆ ನೇತೃತ್ವದಲ್ಲಿ ಇಂದು ಮುಂಬೈನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ (‘ಗರ್ಜನಾ ಮೋರ್ಚಾ’) ನಡೆಯಿತು.

- Advertisement -

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಚುನಾವಣಾ ವ್ಯವಸ್ಥೆಯ ಮೇಲೆ ಸಾರ್ವಜನಿಕರ ನಂಬಿಕೆಯನ್ನು ಮರುಸ್ಥಾಪಿಸಲು ಈ ಜಂಟಿ ಮೋರ್ಚಾವನ್ನು ಆಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, ಚುನಾವಣಾ ಆಯೋಗ ಹಾಗೂ ಅದರ ಮುಖ್ಯಸ್ಥ ಗ್ಯಾನೇಶ್ ಕುಮಾರ್ ವಿರುದ್ಧ ಕಟು ಶಬ್ದಗಳಿಂದ ವಾಗ್ದಾಳಿ ನಡೆಸಿದರು. “ಸ್ಥಳೀಯ ಮಟ್ಟದಲ್ಲಿ ಯಾರು ಸಿಂಧು ಅಥವಾ ಅಸಿಂಧು ಎಂಬುದನ್ನು ದೆಹಲಿಯಲ್ಲಿ ಕುಳಿತು ತೀರ್ಮಾನಿಸುವ ಹಕ್ಕು ಇವರಿಗಿದೆಯೇ? ದೇಶವೇನು ಗ್ಯಾನೇಶ್ ಕುಮಾರ್ ಅವರ ಅಪ್ಪನ ಆಸ್ತಿಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

“ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಪಕ್ಷಪಾತವಾಗಿದೆ. ಯಾರೇ ಅಧಿಕಾರ ನಡೆಸಲಿ, ಅಂತಿಮವಾಗಿ ಪ್ರಜಾಪ್ರಭುತ್ವದಲ್ಲಿ ದೇಶದ ಭವಿಷ್ಯ ಮತ್ತು ಅಭ್ಯರ್ಥಿಯ ಭವಿಷ್ಯವನ್ನು ತೀರ್ಮಾನಿಸುವುದು ಜನರೇ ಹೊರತು ಕೇಂದ್ರ ಚುನಾವಣಾ ಆಯೋಗ ಅಲ್ಲ” ಎಂದು ಉದ್ಧವ್ ಗರ್ಜಿಸಿದರು.

ಎಂಎನ್‌ಎಸ್ ಅಧಿಪತಿ ರಾಜ್ ಠಾಕ್ರೆ ಮಾತನಾಡಿ, “2017-18ರಿಂದಲೇ ನಾನು ಇವಿಎಂ ಮತ್ತು ಮತದಾರರ ಪಟ್ಟಿಯಲ್ಲಿನ ಲೋಪದೋಷಗಳ ಬಗ್ಗೆ ಧ್ವನಿ ಎತ್ತುತ್ತಿದ್ದೇನೆ. ಚುನಾವಣಾ ಆಯೋಗದ ಮೌನ ಮತ್ತು ನಿಯಮಗಳ ಉಲ್ಲಂಘನೆಯ ವಿರುದ್ಧ ಎಲ್ಲ ವಿರೋಧ ಪಕ್ಷಗಳು ಒಟ್ಟಾಗಬೇಕಿದೆ. ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ‘ಹಾಲು ಯಾವುದು, ನೀರು ಯಾವುದು’ ಎಂಬ ಸತ್ಯ ಹೊರಬರಲಿದೆ” ಎಂದು ಹೇಳಿದರು.

ಮುಂಬೈನ ಮೆಟ್ರೋ ಸಿನಿಮಾದಿಂದ ಪ್ರಾರಂಭವಾದ ಈ ಪ್ರತಿಭಟನಾ ಮೆರವಣಿಗೆಯು ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಪ್ರಧಾನ ಕಚೇರಿಯವರೆಗೆ ತಲುಪಿತು. ಈ ಮೋರ್ಚಾಗೆ ಕಾಂಗ್ರೆಸ್ ಹಾಗೂ ‘ಇಂಡಿಯಾ’ ಒಕ್ಕೂಟದ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಪಕ್ಷದ ಬಾವುಟಗಳಿಲ್ಲದೆ ಸಾರ್ವಜನಿಕರ ಪ್ರತಿನಿಧಿಗಳಾಗಿ ಭಾಗವಹಿಸಿ ಬೆಂಬಲ ಸೂಚಿಸಿದರು. ಮೆರವಣಿಗೆಯ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ನಗರಾದ್ಯಂತ ಬಿಗಿ ಕಾವಲು ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...