‘ಆಕಾಶ ಕಳಚಿ ಬೀಳುವುದಿಲ್ಲ’: ರಾಮಮಂದಿರ ನಿಧಿ ದುರ್ಬಳಕೆಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Date:

ಅಯೋಧ್ಯೆಯ ರಾಮಮಂದಿರಕ್ಕಾಗಿ ‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌’ ಸಂಗ್ರಹಿಸಿದ್ದ ದೇಣಿಗೆಯಲ್ಲಿ ದುರ್ಬಳಕೆಯಾಗಿದೆ ಎಂಬ ಆರೋಪದ ಕುರಿತು ನ್ಯಾಯಸಮ್ಮತ ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ಇಂದು(ಜೂ.29) ಸ್ಪಷ್ಟವಾಗಿ ನಿರಾಕರಿಸಿದೆ.

- Advertisement -

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಶೀಲ್ ನಾಗು ಅವರನ್ನೊಳಗೊಂಡ ಪೀಠವು ಈ ಅರ್ಜಿಯನ್ನು ಕೈಗೆತ್ತಿಕೊಂಡಿತು. ತುರ್ತು ವಿಚಾರಣೆಗೆ ನಕಾರ ವ್ಯಕ್ತಪಡಿಸಿದ ನ್ಯಾಯಪೀಠವು, “ಈಗೇನು ಆಕಾಶ ಕಳಚಿ ಬೀಳುವುದಿಲ್ಲ… ಇದರಲ್ಲಿ ಅಂತಹ ತುರ್ತು ಏನಿದೆ?” ಎಂದು ಮೌಖಿಕವಾಗಿ ಪ್ರಶ್ನಿಸಿತು. ಅಲ್ಲದೆ, ಬೇಸಿಗೆ ರಜೆಯ ನಂತರ ಈ ವಿಷಯವನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸ್ಪಷ್ಟಪಡಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಇದನ್ನು ಓದಿದ್ದೀರಾ? ಬುಡಕಟ್ಟು ನಾಯಕನ ದುಡುಕಿನ ನಿರ್ಧಾರ; ಆಪ್‌ ಶಾಸಕ ಚೈತರ್ ವಾಸವ ರಾಜಕೀಯ ಭವಿಷ್ಯವೇ ಅತಂತ್ರ!

ವಕೀಲರಾದ ಅಜಯ್ ಕುಮಾರ್ ರೈ ಮತ್ತು ದಿನೇಶ್ ಕುಮಾರ್ ಯಾದವ್ ಅವರು ಈ ಅರ್ಜಿಯನ್ನು ಸಲ್ಲಿಸಿದ್ದರು. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಆಡಳಿತ ಹಾಗೂ ವ್ಯವಹಾರಗಳಲ್ಲಿ ನಡೆದಿವೆ ಎನ್ನಲಾದ ಆರ್ಥಿಕ ಅಕ್ರಮಗಳು ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಸಿಬಿಐ ನೇತೃತ್ವದ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಸಮಗ್ರ ತನಿಖೆ ನಡೆಸಬೇಕು ಎಂದು ಅವರು ತಮ್ಮ ಅರ್ಜಿಯಲ್ಲಿ ಒತ್ತಾಯಿಸಿದ್ದರು.

“ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ಸಂಬಂಧಿಸಿದ ನಿಧಿ ನಾಪತ್ತೆ ಮತ್ತು ಇತರ ಅಕ್ರಮಗಳ ಕುರಿತಾದ ವರದಿಗಳು ಅಂತಿಮವಾಗಿ ನಿಜ ಎಂದು ಸಾಬೀತಾಗುತ್ತವೆಯೋ ಅಥವಾ ಇಲ್ಲವೋ ಎಂಬುದು ಬೇರೆ ವಿಚಾರ. ಆದರೆ, ಇಂತಹ ಆರೋಪಗಳು ಅಯೋಧ್ಯೆಯ ವೈಭವವನ್ನು ಮರುಸ್ಥಾಪಿಸಲು ದಶಕಗಳ ಕಾಲ ಹೋರಾಡಿದ ತಲೆಮಾರುಗಳಲ್ಲಿ ತೀವ್ರ ಕಳವಳವನ್ನು ಉಂಟುಮಾಡಿವೆ” ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

ನ್ಯಾಯಾಧೀಶರ ಪುತ್ರನ ಕಾರು ಅಪಘಾತ: ಬಾಲಕನ ಜಾಮೀನು ರದ್ದು ಕೋರಿ ಕೇರಳ ಹೈಕೋರ್ಟ್‌ಗೆ ಸಂತ್ರಸ್ತ ಕುಟುಂಬ ಅರ್ಜಿ

ಕೊಚ್ಚಿಯ ಚೇರಾನಲ್ಲೂರ್‌ನಲ್ಲಿ ನಡೆದ ಮರ್ಸಿಡಿಸ್ ಬೆಂಝ್ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ...

ಬಾಗಲಕೋಟೆ |6 ಪಟ್ಟಣ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

ಇ-ಸ್ವತ್ತು, ಎನ್‌ಓಸಿ, ಕಟ್ಟಡ ಪರವಾನಗಿ ಸೇರಿದಂತೆ ವಿವಿಧ ಅಕ್ರಮಗಳ ಆರೋಪ, 41...

ಉತ್ತರ ಪ್ರದೇಶ ಚುನಾವಣೆ 2027: ಓವೈಸಿ-ಆಜಾದ್ ಮೈತ್ರಿ, ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ಘೋಷಣೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ...