ಬರೆದಿಟ್ಟುಕೊಳ್ಳಿ, ಯುಪಿ ಸಹಿತ ದೇಶದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಬಿರುಗಾಳಿ ಬರಲಿದೆ: ರಾಹುಲ್ ಗಾಂಧಿ

Date:

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಕನೌಜ್‌ನಲ್ಲಿ ಇಂದು ಇಂಡಿಯಾ ಮೈತ್ರಿಕೂಟದ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬರೆದಿಟ್ಟುಕೊಳ್ಳಿ, ಉತ್ತರ ಪ್ರದೇಶ ಸಹಿತ ದೇಶದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಬಿರುಗಾಳಿ ಬರಲಿದೆ” ಎಂದು ಭವಿಷ್ಯ ನುಡಿದಿದ್ದಾರೆ.

- Advertisement -

ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಆಪ್ ಮುಖಂಡ ಸಂಜಯ್ ಸಿಂಗ್ ಸೇರಿದಂತೆ ಹಲವರು ಭಾಗವಹಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನಾನು ನಿಮಗೆ ಬರೆದುಕೊಡುತ್ತೇನೆ. ಉತ್ತರ ಪ್ರದೇಶದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಬಿರುಗಾಳಿ ಬರಲಿದೆ. ದೇಶದಲ್ಲೇ ಬಿಜೆಪಿಗೆ ಹೀನಾಯ ಸೋಲು ಉತ್ತರ ಪ್ರದೇಶದಲ್ಲಿ ಆಗಲಿದೆ. ಉತ್ತರ ಪ್ರದೇಶದ ಸಹಿತ ದೇಶದಲ್ಲಿ ಬದಲಾವಣೆಯ ಮಾಡುವ ನಿರ್ಧಾರವನ್ನು ಜನರು ಮಾಡಿದ್ದಾರೆ. ಹಾಗಾಗಿ, ‘ಇಂಡಿಯಾ’ ಮೈತ್ರಿಕೂಟದ ಬಿರುಗಾಳಿ ಬರಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಂಬಾನಿ-ಅದಾನಿಯವರ ಹೆಸರು ಹೇಳಲು ಹಿಂಜರಿಯುತ್ತಿದ್ದರು. ಈಗ ಅವರಿಗೆ ಭಯ ಶುರುವಾಗಿದೆ. ಹಾಗಾಗಿ, ಅವರು ತಮ್ಮ ಮಿತ್ರರಿಬ್ಬರ ಹೆಸರನ್ನು ಎತ್ತಿದ್ದಾರೆ. ನನ್ನನ್ನು ಇಂಡಿಯಾ ಮೈತ್ರಿಕೂಟದವರು ಸುತ್ತುವರಿದಿದ್ದಾರೆ. ಹಾಗಾಗಿ, ನನ್ನನ್ನು ಕಾಪಾಡಿ ಎಂದು ಬೇಡಿಕೊಳ್ಳುತ್ತಿದ್ದಾರೆ. ನಾನು ಸೋಲುತ್ತಿದ್ದೇನೆ. ಅದಾನಿ, ಅಂಬಾನಿ ನನ್ನನ್ನು ರಕ್ಷಿಸಿ ಎಂದು ಕೂಗುತ್ತಿದ್ದಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

“ನರೇಂದ್ರ ಮೋದಿಯವರು ಈ ದೇಶದ ಪ್ರಧಾನಿಯಾಗಿ ಆಯ್ಕೆಯಾಗುವುದಿಲ್ಲ. ಈ ಬಗ್ಗೆ ಗ್ಯಾರಂಟಿ ಕೊಡಬಲ್ಲೆ. ಕೊರೋನಾ ಬಗ್ಗೆ ಈ ಹಿಂದೆ ನಾನು ಹೇಳಿದ್ದು ಈಗ ಸತ್ಯವಾಗಿದೆ. ಅದೇ ರೀತಿ ಇದು ಕೂಡ ಸತ್ಯವಾಗಲಿದೆ. ಮೋದಿಯವರು ಈ ದೇಶದ ಪ್ರಧಾನಿಯಾಗುವುದಿಲ್ಲ” ಎಂದು ಮತ್ತೊಮ್ಮೆ ರಾಹುಲ್ ಗಾಂಧಿ ಆವೇಶಭರಿತರಾಗಿ ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...