ಪ್ಯಾಲೆಸ್ತೀನಿ ಸಿನಿಮಾ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಬಿಡುಗಡೆಗೆ ಕೊನೆಗೂ ಸೆನ್ಸಾರ್ ಮಂಡಳಿ ಒಪ್ಪಿಗೆ

Date:

ಸಿನಿಮಾ ವಲಯದಲ್ಲಿ ಮತ್ತು ಸಾಮಾಜಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದ್ದ ಪ್ಯಾಲೆಸ್ತೀನಿ ಸಿನಿಮಾ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಬಿಡುಗಡೆಗೆ ಕೊನೆಗೂ ಸೆನ್ಸಾರ್ ಮಂಡಳಿ ಒಪ್ಪಿಗೆ ನೀಡಿದೆ. ಸಿನಿಮಾ ಬಿಡುಗಡೆಗೆ ತಡೆ ನೀಡಿರುವುದರ ವಿರುದ್ಧ ಸಾರ್ವಜನಿಕ ಆಕ್ರೋಶದ ನಂತರ, ಸೆನ್ಸಾರ್ ಮಂಡಳಿಯು ಚಿತ್ರದ ಬಿಡುಗಡೆಗೆ ಹಸಿರು ನಿಶಾನೆ ತೋರಿಸಿದೆ.

- Advertisement -

ಗಾಜಾದಲ್ಲಿ ನಡೆದ ಯುದ್ಧದ ಭೀಕರತೆ ಮತ್ತು ಅಲ್ಲಿನ ವಾಸ್ತವಿಕ ಪರಿಸ್ಥಿತಿಯನ್ನು ಬಿಂಬಿಸುವ ಚಿತ್ರ ‘ದಿ ವಾಯ್ಸ್ ಆಫ್ ಹಿಂದ್ ರಜಬ್’. ಭಾರತ ಮತ್ತು ಇಸ್ರೇಲ್ ನಡುವಿನ ಸಂಬಂಧಕ್ಕೆ ಅಡ್ಡ ಪರಿಣಾಮ ಉಂಟಾಗಬಹುದು ಎಂಬ ಕಾರಣಕ್ಕೆ ಸೆನ್ಸಾರ್ ಮಂಡಳಿಯು ಆರಂಭದಲ್ಲಿ ಚಿತ್ರ ಬಿಡುಗಡೆಗೆ ತಡೆ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಸೆನ್ಸಾರ್ ಮಂಡಳಿ ಅದುಮಿಟ್ಟಿರುವ ವೆಟ್ರಿಮಾರನ್ ‘ಮಾನುಷಿ’ ಚಿತ್ರದಲ್ಲೇನಿದೆ, ಏನಿದು ವಿವಾದ?

ಆದರೆ ಸಿನಿಮಾದ ಮೇಲೆ ನಿಷೇಧವನ್ನು ವಿರೋಧಿಸಿ ಚಲನಚಿತ್ರ ನಿರ್ಮಾಪಕರು, ಕಲಾಭಿಮಾನಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಹಲ್ಲೆ ಎಂದು ಹಲವರು ಖಂಡಿಸಿದ್ದರು. ಈ ತೀವ್ರ ಸಾರ್ವಜನಿಕ ಒತ್ತಡವೇ ಸೆನ್ಸಾರ್ ಮಂಡಳಿಯು ತನ್ನ ನಿರ್ಧಾರವನ್ನು ಮರುಪರಿಶೀಲಿಸುವುದಕ್ಕೆ ಕಾರಣವಾಗಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ಕೇವಲ ವಯಸ್ಕರು ಮಾತ್ರ ವೀಕ್ಷಿಸಬಹುದಾದ ‘ಎ’ ಪ್ರಮಾಣಪತ್ರ ನೀಡಲು ನಿರ್ಧರಿಸಿದೆ.

ಸದ್ಯ ರಾಜತಾಂತ್ರಿಕ ಸೂಕ್ಷ್ಮತೆಗಳ ಕಾರಣಕ್ಕೆ ಕಲೆಯ ಅಭಿವ್ಯಕ್ತಿಯನ್ನು ತಡೆಯಬಾರದು ಎಂಬ ವಾದಕ್ಕೆ ಈ ನಿರ್ಧಾರದ ಮೂಲಕ ಜಯ ಸಿಕ್ಕಂತಾಗಿದೆ. ಚಿತ್ರಮಂದಿರಗಳಲ್ಲಿ ಈ ಸಿನಿಮಾ ಎಂತಹ ಪ್ರತಿಕ್ರಿಯೆ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಯಾರು ಈ ಬಾಲಕಿ ಹಿಂದ್ ರಜಬ್?

ಆರು ವರ್ಷದ ಹಿಂದ್ ರಜಬ್, ಜನವರಿ 29, 2024 ರಂದು ಗಾಝಾ ನಗರದ ತಾಲ್ ಅಲ್-ಹವಾ ಪ್ರದೇಶದಲ್ಲಿ ಇಸ್ರೇಲ್‌ ಸೇನೆಯ ಟ್ಯಾಂಕ್ ದಾಳಿಯಲ್ಲಿ ತನ್ನ ತಾಯಿಯ ಸೋದರ ಸಂಬಂಧಿಗಳು ಸೇರಿದಂತೆ ಕುಟುಂಬದ ಐದು ಸದಸ್ಯರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕೊಲ್ಲಲ್ಪಟ್ಟ ಬಾಲಕಿ.

ಇದನ್ನು ಓದಿದ್ದೀರಾ? ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಭಾರತದಲ್ಲಿ ನಿಷೇಧ: ಇಸ್ರೇಲ್ ಸಂಬಂಧದ ನೆಪದಲ್ಲಿ ತಡೆಯೇ?

ಹಿಂದ್ ರಜಬ್‌ನ 15 ವರ್ಷದ ಸೋದರ ಸಂಬಂಧಿ ಲಯಾನ್ ಹಮಾದೆಹ್, ಪ್ಯಾಲೆಸ್ತೀನ್ ರೆಡ್ ಕ್ರೆಸೆಂಟ್ ಸೊಸೈಟಿಗೆ (PRCS) ಕರೆ ಮಾಡಿ, “ಇಸ್ರೇಲ್‌ ಸೇನೆಯ ಟ್ಯಾಂಕ್ ನಮ್ಮ ಪಕ್ಕದಲ್ಲಿದೆ. ಅವರು ನಮ್ಮ ಮೇಲೆ ಗುಂಡು ಹಾರಿಸುತ್ತಿದ್ದಾರೆ” ಎಂದು ಕಿರುಚಿದ್ದಳು. ಆದರೆ ಅದೇ ವೇಳೆ ಕರೆ ಸಂಪರ್ಕ ಕಡಿತಗೊಂಡಿತ್ತು.

ಇದೇ ವೇಳೆ ಕಾರಿನಲ್ಲಿದ್ದ ಹಿಂದ್ ರಜಬ್ ತಾನು ಗಾಯಗೊಂಡಿದ್ದರೂ, ರೆಡ್ ಕ್ರೆಸೆಂಟ್ ಸೊಸೈಟಿಯ ಸಿಬ್ಬಂದಿ ಜೊತೆಗೆ ಮಾತನಾಡಿ, “ನನಗೆ ಭಯವಾಗುತ್ತಿದೆ, ದಯವಿಟ್ಟು ಬಂದು ನನ್ನನ್ನು ರಕ್ಷಿಸಿ ಕರೆದುಕೊಂಡು ಹೋಗಿ” ಎಂದು ಮನವಿ ಮಾಡಿದ್ದಳು. ರಜಬ್ ಕಾರಿನಲ್ಲಿ ಸಿಲುಕಿಕೊಂಡಿದ್ದಾಗ ಅವಳ ಚಿಕ್ಕಮ್ಮ, ಚಿಕ್ಕಪ್ಪ ಮತ್ತು ಮೂವರು ಸೋದರ ಸಂಬಂಧಿಗಳು ಇಸ್ರೇಲಿ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದನ್ನು ದೃಢಪಡಿಸಿದ್ದರು. ಬಳಿಕ ಅವಳಿಗೆ ಧೈರ್ಯ ತುಂಬಲು ಅವರು ಗಂಟೆಗಟ್ಟಲೆ ಪ್ರಯತ್ನಿಸಿದ್ದರು. ಆ ಬಳಿಕ ಆಕೆಯನ್ನು ರಕ್ಷಿಸಲು ಕಳುಹಿಸಲಾದ ಇಬ್ಬರು ರಕ್ಷಣಾ ಕಾರ್ಯಕರ್ತರೂ ಕೂಡ ಇಸ್ರೇಲ್‌ ಸೇನೆಯ ದಾಳಿಯಲ್ಲಿ ಮೃತಪಟ್ಟಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...