AI ಗ್ಲೋಬಲ್‌ ಸಮಿಟ್‌ನಲ್ಲಿ ಕಳ್ಳತನ! ಅವ್ಯವಸ್ಥೆಗಳು ಒಂದೆರಡಲ್ಲ..

Date:

ದೇಶವನ್ನು ಕೃತಕ ಬುದ್ಧಿಮತ್ತೆಯ (AI) ಜಾಗತಿಕ ಕೇಂದ್ರವಾಗಿ ಪ್ರತಿಷ್ಠಾಪಿಸುವ ಉದ್ದೇಶದೊಂದಿಗೆ ದೆಹಲಿಯ ಭಾರತ್‌ ಮಂಟಪದಲ್ಲಿ ನಿನ್ನೆಯಿಂದ (ಫೆ.16-20) ಶುರುವಾಗಿರುವ ಜಾಗತಿಕ AI ಇಂಪ್ಯಾಕ್ಟ್‌ ಶೃಂಗಸಭೆ-2026 ಆರಂಭದಿಂದಲೇ ಗೊಂದಲ, ಅಸಮರ್ಪಕ ವ್ಯವಸ್ಥೆ ಮತ್ತು ಭಾಗವಹಿಸಿದವರ ಅಸಮಾಧಾನಕ್ಕೆ ಕಾರಣವಾಗಿದೆ. ದೇಶ-ವಿದೇಶಗಳಿಂದ ಆಗಮಿಸಿದ ಪ್ರತಿನಿಧಿಗಳು, ಸ್ಟಾರ್ಟ್‌ಅಪ್ ಸಂಸ್ಥೆಗಳು ಹಾಗೂ ಉದ್ಯಮಿಗಳಿಂದ ತೀವ್ರ ಟೀಕೆಗೆ ಗುರಿಯಾಗಿದೆ.

- Advertisement -

ಸಮಿಟ್‌ಗೆ ಜತೆಗೆ ಆಯೋಜಿಸಲಾದ AI ಇಂಪ್ಯಾಕ್ಟ್ ಎಕ್ಸ್ಪೋದಲ್ಲಿ ಭಾಗವಹಿಸಿದ್ದ ಸ್ಟಾರ್ಟ್‌ಅಪ್‌ಗಳು ಮತ್ತು ಪ್ರದರ್ಶಕರು ಎದುರಿಸಿದ ಸಮಸ್ಯೆಗಳು ಇದೀಗ ಬಹಿರಂಗವಾಗುತ್ತಿವೆ. ಪ್ರಧಾನಿ ಭೇಟಿ ನೆಪದಲ್ಲಿ ಮಧ್ಯಾಹ್ನದಿಂದಲೇ ಪ್ರದರ್ಶನ ಮಳಿಗೆಗಳನ್ನು ಖಾಲಿ ಮಾಡಿಸಲಾಗಿದ್ದು, ಹಲವು ಗಂಟೆಗಳ ಕಾಲ ಪ್ರದರ್ಶಕರಿಗೆ ಒಳಗೆ ಪ್ರವೇಶ ನಿರಾಕರಿಸಲಾಗೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಭದ್ರತಾ ಸಿಬ್ಬಂದಿಯ ಸಮನ್ವಯದ ಕೊರತೆಯಿಂದಾಗಿ ಪ್ರದರ್ಶಕರು ಗೊಂದಲಕ್ಕೆ ಸಿಲುಕಿದರು ಎನ್ನಲಾಗಿದೆ. ಈ ಕುರಿತು ಪತ್ರಕರ್ತೆ ಸ್ಮಿತಾ ಶರ್ಮಾ ತಮ್ಮ ಯೂಟ್ಯೂಬ್‌ ಚಾನಲ್‌ (Smita Sharma Journalist) ಒಂದರಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...
image 2026 02 17T130403.575 1

ಬೆಂಗಳೂರಿನ AI ಸ್ಟಾರ್ಟ್‌ಅಪ್ ಸಂಸ್ಥೆಯೊಂದರ ಸಹ ಸಂಸ್ಥಾಪಕ ಧನಂಜಯ್‌ ಯಾದವ್‌ ಅವರು, ತಮ್ಮ ಮಳಿಗೆಯಲ್ಲಿ ಇರಿಸಿದ್ದ AI ಸಾಧನಗಳನ್ನು ಅಲ್ಲೇ ಬಿಟ್ಟು ಹೋಗುವಂತೆ ಭದ್ರತಾ ಸಿಬ್ಬಂದಿ ಸೂಚಿಸಿದ ಬಳಿಕ, ಮರಳಿ ಬಂದಾಗ ಅವು ಕಳವಾಗಿರುವುದನ್ನು ಕಂಡು ಬೆಚ್ಚಿಬಿದ್ದಿರುವುದಾಗಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಈ ಆರೋಪ ಇವರೊಬ್ಬರದ್ದೇ ಅಲ್ಲ. ಅನೇಕ ಉದ್ಯಮಿಗಳು ಮತ್ತು ಪ್ರತಿನಿಧಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದು, ಹೆಚ್ಚಿನ ಭದ್ರತಾ ವ್ಯವಸ್ಥೆಯ ನಡುವೆಯೇ ಕಳ್ಳತನ ನಡೆದಿರುವುದು ಹೇಗೆ ಎಂದು ಪ್ರಶ್ನಿಸುತ್ತಿದ್ದಾರೆ.

ಸಮಾವೇಶದಲ್ಲಿ ಕುಡಿಯುವ ನೀರಿನ ಕೊರತೆ, ಶೌಚಾಲಯಗಳ ಅಸಮರ್ಪಕ ವ್ಯವಸ್ಥೆ, ಉದ್ದುದ್ದ ಕ್ಯೂಗಳು, ಇಂಟರ್ನೆಟ್ ಸಮಸ್ಯೆ ಮತ್ತು ಆಹಾರ ಮಳಿಗೆಗಳಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ಇಲ್ಲದಿರುವುದು ಕೂಡ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ. AI ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚಿಸುವ ವೇದಿಕೆಯಲ್ಲಿ UPI ಅಥವಾ ಆನ್‌ಲೈನ್ ಪಾವತಿ ಕಾರ್ಯನಿರ್ವಹಿಸದಿರುವುದು ವ್ಯಂಗ್ಯಕರ ಎಂದು ಹಲವರು ಟೀಕಿಸಿದ್ದಾರೆ. ಕೆಲವರು ತಮ್ಮದೇ ಬೂತ್‌ಗೆ ಪ್ರವೇಶ ಪಡೆಯಲು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿಯನ್ನೂ ವಿವರಿಸಿದ್ದಾರೆ.

ಪತ್ರಕರ್ತರು ಹಾಗೂ ತಂತ್ರಜ್ಞಾನ ನೀತಿ ತಜ್ಞರೂ ಈ ಅವ್ಯವಸ್ಥೆಯನ್ನು ಕಟುವಾಗಿ ಟೀಕಿಸಿದ್ದು, ಒಂದು ಪ್ರವೇಶ ದ್ವಾರದಿಂದ ಒಳಗೆ ಬರುವುದಕ್ಕೆ ಒಂದೂವರೆ ಗಂಟೆಗೂ ಹೆಚ್ಚು ಸಮಯ ಹಿಡಿದಿದ್ದು, ಒಳಗೆ ಪ್ರವೇಶಿಸಿದ ನಂತರವೂ ಒಂದು ಹಾಲ್‌ನಿಂದ ಮತ್ತೊಂದಕ್ಕೆ ಹೋಗಲು ದೀರ್ಘ ಕಾಲ ತೆಗೆದುಕೊಂಡಿದೆ ಎಂದು ಹೇಳಿಕೊಂಡಿದ್ದಾರೆ. ಪ್ರಧಾನಿಯ ಭೇಟಿ ಮುಗಿಯುವ ಹೊತ್ತಿಗೆ ದಿನದ ಬಹುತೇಕ ಕಾರ್ಯಕ್ರಮಗಳು ಮುಕ್ತಾಯಗೊಂಡಿದ್ದರಿಂದ, ಪ್ರದರ್ಶಕರು ಮತ್ತು ಪ್ರತಿನಿಧಿಗಳಿಗೆ ಸಮಾವೇಶದಿಂದ ಯಾವುದೇ ಲಾಭವಾಗಲಿಲ್ಲ ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿದೆ.

ಇದನ್ನೂ ಓದಿ: AI ಶೃಂಗಸಭೆ-2026 | ಅವಕಾಶ-ಅಪಾಯಗಳ ಜಾಗತಿಕ ಚರ್ಚೆ

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರ ಸಮಾವೇಶವನ್ನು ಯಶಸ್ವಿಯಾಗಿರುವಂತೆ ಎಂದು ತನ್ನದೇ ಬೆನ್ನು ತಟ್ಟಿಕೊಳ್ಳುತ್ತಿದೆ. ಆದರೆ ಅಸಲಿಗೆ ಅಲ್ಲಿ ಆದ ಅನುಭವ ಸಂಪೂರ್ಣ ಭಿನ್ನವಾಗಿದೆ ಎಂದು ಭಾಗವಹಿಸಿದವರು ಹೇಳುತ್ತಿದ್ದಾರೆ. ರೀಲ್ಸ್ ಮತ್ತು ವಾಸ್ತವದ ನಡುವಿನ ವ್ಯತ್ಯಾಸವನ್ನು ಸರ್ಕಾರ ಅರಿತುಕೊಳ್ಳಬೇಕು ಎಂಬ ಆಗ್ರಹವೂ ಕೇಳಿಬರುತ್ತಿದೆ. ಭಾರತವು ಜಾಗತಿಕ ವೇದಿಕೆಯಲ್ಲಿ ತನ್ನ ಪ್ರತಿಷ್ಠೆಯನ್ನು ಹೆಚ್ಚಿಸಿಕೊಳ್ಳಲು ಈ ಸಮಾವೇಶವನ್ನು ಅವಕಾಶವಾಗಿ ಬಳಸಬೇಕಾಗಿತ್ತು. ಆದರೆ ಅಸಮರ್ಪಕ ಯೋಜನೆ, ಜನಸಂದಣಿ ನಿಯಂತ್ರಣದ ಕೊರತೆ ಮತ್ತು ಮೂಲಭೂತ ಸೌಲಭ್ಯಗಳ ಅಭಾವದಿಂದ ಈ ಸಮಾವೇಶ ಟೀಕೆಗೆ ಗುರಿಯಾಗಿದೆ.

ಇನ್ನೂ ಕೆಲವು ದಿನಗಳ ಕಾರ್ಯಕ್ರಮ ಬಾಕಿ ಇರುವುದರಿಂದ, ಸಂಬಂಧಪಟ್ಟ ಇಲಾಖೆ ಮತ್ತು ಆಯೋಜಕರು ತಕ್ಷಣ ಕ್ರಮ ಕೈಗೊಂಡು ಸಮಸ್ಯೆಗಳನ್ನು ಸರಿಪಡಿಸಬೇಕು ಹಾಗೂ ದೇಶದ ಗೌರವಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂಬ ಒತ್ತಾಯಗಳು ವ್ಯಕ್ತವಾಗುತ್ತಿವೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...