ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು; ಎಲ್ಲಾ ಆರ್ಥಿಕ ಲೆಕ್ಕಪತ್ರ ಸಾರ್ವಜನಿಕಗೊಳಿಸಲು ಜೈರಾಮ್ ರಮೇಶ್ ಆಗ್ರಹ

Date:

ಅಯೋಧ್ಯೆಯ ರಾಮಮಂದಿರ ಕಾಣಿಕೆ ಮತ್ತು ದೇಣಿಗೆ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಈ ಪ್ರಕರಣದಲ್ಲಿ ಯಾವುದೇ ರಾಜಕೀಯ ಅಥವಾ ಸಂಘಟನಾತ್ಮಕ ಪ್ರಭಾವದಿಂದ ಯಾರನ್ನೂ ರಕ್ಷಿಸಲು ಸಾಧ್ಯವಿಲ್ಲ ಮತ್ತು ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಬೇಕು ಎಂದು ಒತ್ತಾಯಿಸಿದೆ.

- Advertisement -

ಸಾಮಾಜಿಕ ಜಾಲತಾಣ ‘X’ ನಲ್ಲಿ (ಹಿಂದಿಯಲ್ಲಿ) ಈ ಕುರಿತು ಸುದೀರ್ಘ ಹೇಳಿಕೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಪರ್ಕ ವಿಭಾಗ) ಜೈರಾಮ್ ರಮೇಶ್, ಈ ಹಗರಣವನ್ನು ‘ಚಂದಾ ಚೋರಿ, ಆಸ್ಥಾ ಧೋಖಾ’ (ದೇಣಿಗೆ ಕಳ್ಳತನ, ನಂಬಿಕೆಗೆ ದ್ರೋಹ) ಎಂದು ಬಣ್ಣಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ,...

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ ರಿಟೆಲ್ಲಿಂಗ್ಸ್, ಕೌಂಟರ್ ನರೇಟಿವ್ಸ್ ಹಾಗೂ ಹ್ಯೂಮನೈಸಿಂಗ್ ಸ್ಟೋರಿಸ್ ಅಗತ್ಯತೆ ಬಹಳವಾಗಿದೆ. ಶಿವ ನಮ್ಮ ಅಚ್ಚುಮೆಚ್ಚಿನ ದೇವನಾಗಿದ್ದ. ಅವನನ್ನ ನಾವು ಅತಿಯಾಗಿ ಪ್ರೀತಿಸುತಿದ್ದೆವು....

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ಇದನ್ನೂ ಓದಿ: ರಾಮಮಂದಿರ ದೇಣಿಗೆ ದುರುಪಯೋಗ: ಎಸ್‌ಐಟಿ ರಚನೆ, ಉದ್ಯೋಗಿ ಬಂಧನ

ಈ ಪ್ರಕರಣದಲ್ಲಿ ಕೇವಲ ಬಂಧಿತರಾಗಿರುವ ಎಂಟು ಮಂದಿ ನೌಕರರಷ್ಟೇ ಅಲ್ಲದೆ, ದೇವಾಲಯದ ನಿರ್ಮಾಣ, ಆಡಳಿತ ಮಂಡಳಿ ಮತ್ತು ಕಾಣಿಕೆ ಎಣಿಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ವ್ಯಕ್ತಿಯ ಪಾತ್ರದ ಬಗ್ಗೆಯೂ ತನಿಖೆಯಾಗಬೇಕು. ಈ ಇಡೀ ಪ್ರಕರಣ ಹಾಗೂ ಆರ್ಥಿಕ ವ್ಯವಹಾರಗಳ ತನಿಖೆಯನ್ನು ಸುಪ್ರೀಂ ಕೋರ್ಟ್, ಮೇಲ್ವಿಚಾರಣೆಯಲ್ಲಿ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಶ್ರೀರಾಮನ ಹೆಸರಿನಲ್ಲಿ ದೇಶಾದ್ಯಂತ ಸಂಗ್ರಹವಾದ ಮತ್ತು ಸ್ವೀಕರಿಸಲಾದ ಎಲ್ಲಾ ಕಾಣಿಕೆ ಹಾಗೂ ದೇಣಿಗೆಗಳ ಸಂಪೂರ್ಣ ಲೆಕ್ಕಪತ್ರವನ್ನು ದೇಶದ ಜನತೆಗೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಹಿಂದೆ ರಚನೆಯಾಗಿದ್ದ ಎಸ್‌ಐಟಿ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸದೆ, ಆರೋಪ ಎದುರಿಸುತ್ತಿರುವ ಟ್ರಸ್ಟ್‌ನ ಪದಾಧಿಕಾರಿಗಳಿಗೇ ಹಸ್ತಾಂತರಿಸಿದ್ದು ಏಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಯಾವುದೇ ಹುದ್ದೆ, ರಾಜಕೀಯ ಪ್ರಭಾವ ಅಥವಾ ಸಂಘಟನಾತ್ಮಕ ಆಶ್ರಯವು ಯಾರನ್ನೂ ಹೊಣೆಗಾರಿಕೆಯಿಂದ ರಕ್ಷಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಕಟ್ಟುನಿಟ್ಟಾಗಿ ಹೇಳಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಈಗಾಗಲೇ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದು, ಎಂಟು ಜನರನ್ನು ಆರೋಪಿಗಳನ್ನಾಗಿ ಹೆಸರಿಸಿದೆ. ಆದರೆ, ಕಾಂಗ್ರೆಸ್ ನಾಯಕರು ಈ ಅಕ್ರಮಗಳ ಬೇರುಗಳು ಇನ್ನೂ ಆಳವಾಗಿದ್ದು, ಟ್ರಸ್ಟ್‌ನ ಹಿರಿಯ ಆಡಳಿತ ಮಂಡಳಿಯ ವಿಚಾರಣೆಯೂ ನಡೆಯಬೇಕೆಂದು ಪಟ್ಟು ಹಿಡಿದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ 74 ಲಕ್ಷ ಮತದಾರರ ಹೆಸರು ದಿಢೀರ್ ನಾಪತ್ತೆ: ನ.26ರಂದು ಚೆನ್ನೈನಲ್ಲಿ ಬೃಹತ್ ರ‍್ಯಾಲಿ

ತಮಿಳುನಾಡಿನ ಮತದಾರರ ಪಟ್ಟಿಯಿಂದ 74.07 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ ಎಂದು...

ಉತ್ತರ ಪ್ರದೇಶದಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ: ರಾಷ್ಟ್ರಪತಿ ಭವನದ ಭದ್ರತಾ ಸಿಬ್ಬಂದಿಗೆ ಗುಂಡೇಟು

ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ನೆರೆಹೊರೆಯವರ ನಡುವೆ...

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ ಅಬುಲ್ ಕಲಾಂ ಅಜಾದ್

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ...

ಅಸ್ಸಾಂನಲ್ಲಿ ಹಳಿ ತಪ್ಪಿದ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್‌: ಹಲವರಿಗೆ ಗಾಯ

ಅಸ್ಸಾಂನ ಕಾಮರೂಪ್ ಜಿಲ್ಲೆಯ ಗುವಾಹಟಿ ಸಮೀಪದ ಡಿಗಾರು ರೈಲು ನಿಲ್ದಾಣದ ಬಳಿ...