3 ಈಡಿಯಟ್ಸ್ ಚಿತ್ರದ ರ‍್ಯಾಂಚೋ ಪಾತ್ರಕ್ಕೂ ಸೋನಮ್ ವಾಂಗ್‌ಚುಕ್ ಅವರಿಗೂ ಸಂಬಂಧವಿಲ್ಲ: ಆಮೀರ್ ಖಾನ್

Date:

2009ರ ಹಿಂದಿಯ ಸೂಪರ್ ಹಿಟ್ ಚಿತ್ರ ‘3 ಈಡಿಯಟ್ಸ್’ನ ಐಕಾನಿಕ್ ಪಾತ್ರ ‘ಫುನ್ಸುಖ್ ವಾಂಗ್‌ಡು’ (ರ‍್ಯಾಂಚೋ), ಲಡಾಖ್‌ನ ಖ್ಯಾತ ಶಿಕ್ಷಣ ತಜ್ಞ ಮತ್ತು ಆವಿಷ್ಕಾರಕ ಸೋನಮ್ ವಾಂಗ್‌ಚುಕ್ ಅವರ ಜೀವನವನ್ನು ಆಧರಿಸಿದೆ ಎಂಬ ಆರೋಪವನ್ನು ನಟ ಆಮೀರ್ ಖಾನ್ ತಳ್ಳಿಹಾಕಿದ್ದಾರೆ.

- Advertisement -

ಲಂಡನ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ (LIFF)ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “3 ಈಡಿಯಟ್ಸ್ ಚಿತ್ರದ ಕಥೆಯನ್ನು ಬರೆಯುವಾಗ ನಮಗೆ ಸೋನಮ್ ವಾಂಗ್‌ಚುಕ್ ಅವರ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಆ ಸಮಯದಲ್ಲಿ ನಾನು ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿರಲಿಲ್ಲ ಅಥವಾ ಅವರ ಬಗ್ಗೆ ತಿಳಿದಿರಲಿಲ್ಲ. ಹೀಗಾಗಿ, ಈ ಚಿತ್ರವು ಅವರ ಜೀವನವನ್ನು ಆಧರಿಸಿಲ್ಲ ಎಂಬುದು ಸತ್ಯ” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದಕ್ಕೂ ಮೊದಲು “ತ್ರೀ ಈಡಿಯಟ್ಸ್‌” ಚಿತ್ರದಲ್ಲಿ ಚತುರ್ ರಾಮಲಿಂಗಂ ಪಾತ್ರದಲ್ಲಿ ಅಭಿನಯಿಸಿದ್ದ ನಟ ಓಮಿ ವೈದ್ಯ ಕೂಡ ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಅವರ ಆರೋಗ್ಯ ಹದಗೆಡುತ್ತಿರುವ ಕುರಿತು ಪ್ರತಿಕ್ರಿಯಿಸಿ, “ಫುನ್ಸುಖ್ ವಾಂಗ್ಡೂ ಸಾಯುವುದನ್ನು ನಾನು ನೋಡಲು ಬಯಸುವುದಿಲ್ಲ” ಎಂದು ಅವರು ಹೇಳಿದ್ದರು. ಅವರ ಈ ಪ್ರತಿಕ್ರಿಯೆಯು ವಾಂಗ್ಚುಕ್ ಅವರೇ ‘ತ್ರೀ ಈಡಿಯಟ್ಸ್’ ಚಿತ್ರದ ನಾಯಕ ಎಂಬುದನ್ನು ಖಚಿತಪಡಿಸಿವೆ. ಈ ಹಿನ್ನೆಲೆಯಲ್ಲಿ ಆಮೀರ್ ಪ್ರತಿಕ್ರಿಯೆ ಅತ್ಯಂತ ಕುತೂಹಲಕಾರಿ!

ತಾಂತ್ರಿಕವಾಗಿ ಚಿತ್ರದ ಬಗ್ಗೆ ಸ್ಪಷ್ಟನೆ ನೀಡಿದರೂ, ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರ ಪ್ರಸ್ತುತ ಹೋರಾಟಕ್ಕೆ ಆಮೀರ್ ಖಾನ್ ನೈತಿಕ ಬೆಂಬಲ ವ್ಯಕ್ತಪಡಿಸಿದ್ದಾರೆ. “ಸೋನಮ್ ವಾಂಗ್‌ಚುಕ್ ಅವರು ಮಾಡುತ್ತಿರುವ ಕೆಲಸ ಅದ್ಭುತವಾಗಿದೆ. ಅವರನ್ನು ಗೌರವಿಸಲು ಅವರು ‘3 ಈಡಿಯಟ್ಸ್’ ಚಿತ್ರದ ಪಾತ್ರದ ಮೇಲೆ ಆಧಾರಿತರಾಗಿರಬೇಕಿಲ್ಲ. ಅವರ ಕೆಲಸವೇ ಅವರನ್ನೊಂದು ದೊಡ್ಡ ವ್ಯಕ್ತಿತ್ವವನ್ನಾಗಿ ಮಾಡಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಸೋನಂ ವಾಂಗ್ಚುಕ್ ನಿರಶನ ಮತ್ತು ಮೋದಿ ಮೌನ

(NEET ಅಕ್ರಮ ಮತ್ತು ಶೈಕ್ಷಣಿಕ ಸುಧಾರಣೆಗಳನ್ನು ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್‌ಚುಕ್ ಅವರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಎರಡು ವಾರಗಳನ್ನು ಮೀರಿದ ಈ ಹೋರಾಟದಿಂದ 59 ವರ್ಷದ ವಾಂಗ್‌ಚುಕ್ ಅವರ ಆರೋಗ್ಯ ಗಂಭೀರವಾಗಿ ಹದಗೆಟ್ಟಿದೆ. ಅವರು ಸುಮಾರು 8-9 ಕೆ.ಜಿ ತೂಕ ಕಳೆದುಕೊಂಡಿದ್ದು, ರಕ್ತದೊತ್ತಡ ಮತ್ತು ಸಕ್ಕರೆ ಮಟ್ಟದಲ್ಲಿನ ಇಳಿಕೆ ಆತಂಕಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...