ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ಕೊರತೆ ಉಂಟಾಗಬಹುದು ಎಂದು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿರುವ ಭಾರತೀಯ ತೈಲ ನಿಗಮ (Indian Oil Corporation Limited- IOCL) ದೇಶದಲ್ಲಿ ಸಾಕಷ್ಟು ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಇದ್ದು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಭರವಸೆ ನೀಡಿದೆ.
- Advertisement -
ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿರುವ ಐಒಸಿಎಲ್, “ದೇಶಾದ್ಯಂತ ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನದ ಕೊರತೆಯಿಲ್ಲ. ಗ್ರಾಹಕರು ವದಂತಿಗಳಿಗೆ ಕಿವಿಗೊಡಬಾರದು ಮತ್ತು ಗಾಬರಿಯಿಂದ ಇಂಧನ ಖರೀದಿಗೆ ಮುಂದಾಗಬಾರದು” ಎಂದು ಮನವಿ ಮಾಡಿದೆ.





